ನಿಜವಾಯ್ತು ಟಿವಿ9 ಡಿಜಿಟಲ್​ ನುಡಿದಿದ್ದ ಭವಿಷ್ಯ; ಮುಡಾ ಕಚೇರಿ ಮೇಲೆ ಇಡಿ ದಾಳಿ, ಸಿದ್ದರಾಮಯ್ಯಗೆ ಹೆಚ್ಚಿದ ಸಂಕಷ್ಟ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎ1 ಆಗಿದ್ದಾರೆ. ಇದರ ಬೆನ್ನಲ್ಲೇ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ಮಾಡಿದ್ದಾರೆ.

ನಿಜವಾಯ್ತು ಟಿವಿ9 ಡಿಜಿಟಲ್​ ನುಡಿದಿದ್ದ ಭವಿಷ್ಯ; ಮುಡಾ ಕಚೇರಿ ಮೇಲೆ ಇಡಿ ದಾಳಿ, ಸಿದ್ದರಾಮಯ್ಯಗೆ ಹೆಚ್ಚಿದ ಸಂಕಷ್ಟ
ಮುಡಾ ಕಚೇರಿಯಲ್ಲಿ ಇಡಿ ದಾಖಲೆ ಪರಿಶೀಲನೆ
Follow us
ವಿವೇಕ ಬಿರಾದಾರ
|

Updated on:Oct 18, 2024 | 12:32 PM

ಮೈಸೂರು, ಅಕ್ಟೋಬರ್​ 18: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಆರ್​ಐಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇಡಿಯ 20ಕ್ಕೂ ಹೆಚ್ಚು ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.

ಮುಡಾ ಹಗರಣ ಸಂಬಂಧ ಇಡಿ ಸ್ನೇಹಮಯಿ ಕೃಷ್ಣ ಅವರಿಗೆ ಸಮ್ಸನ್​ ನೀಡಿ, ವಿಚಾರಣೆಗೆ ಹಾಜರಾಗುವಂತೆ ಹೇಳಿತ್ತು. ಅದರಂತೆ ಸ್ನೇಹಮಯಿ ಕೃಷ್ಣ ಶಾಂತಿನಗರದ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಅಲ್ಲದೇ ಹಗರಣ ಸಂಬಂಧ 500 ಪುಟಗಳ ದಾಖೆಯನ್ನು ಇಡಿಗೆ ನೀಡಿದ್ದರು.

ದಾಖಲೆಗಳ ಆಧಾರದ ಮೇಲೆ ಇಡಿ ಇಸಿಐಆರ್ ದಾಖಲಿಸಿ ತನಿಖೆ ನಡೆಸುತ್ತಿದೆ. ಇದೀಗ ಇಡಿ, ಮುಡಾ ಕಚೇರಿ ಮತ್ತು ಭೂ ಮಾಲೀಕ ದೇವರಾಜು ಮನೆ ಮೇಲೆ ದಾಳಿ ಮಾಡಿದೆ. ಹಗರಣದಲ್ಲಿ ದೇವರಾಜು ಎ4 ಆಗಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ ದೇವರಾಜು ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಸಿದ್ದರಾಮಯ್ಯಗೆ ಹೆಚ್ಚಿದ ಸಂಕಷ್ಟ

ಮುಡಾ ಕಚೇರಿ ಮೇಲೆ ದಾಳಿ ಮಾಡಿರುವ ಇಡಿ ಯಾವುದೇ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರಿಗೆ ಸಮನ್ಸ್​ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡುವ ಸಾಧ್ಯತೆಯೂ ಇದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆಗಿದ್ದಾರೆ.

ಇದನ್ನೂ ಓದಿ: ಹರಿಯಾಣಾ ವಿಧಾನಸಭೆ ಫಲಿತಾಂಶ- ಮುಡಾ ಹಗರಣಕ್ಕೆ ತಿರುವು, ಸಿದ್ದುಗೆ ಸಂಕಷ್ಟ

ಟಿವಿ9 ಡಿಜಿಟಲ್​ ಭವಿಷ್ಯ

ಮುಡಾ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಹರಿಯಾಣ ಚುನಾವಣೆಯಲ್ಲಿ ಪ್ರಸ್ತಾಪ ಮಾಡಿದ್ದರು. ಇದರಿಂದ ಕಾಂಗ್ರೆಸ್​ಗೆ ಮುಜುಗರ ಉಂಟಾಗಿತ್ತು. ಒಂದು ವೇಳೆ ಹರಿಯಾಣದಲ್ಲಿ ಬಿಜೆಪಿ ಗೆದ್ದರೇ, ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡುವ ಸಾಧ್ಯತೆ ಇದೆ ಎಂದು ಟಿವಿ9 ಡಿಜಿಟಲ್ ಅಕ್ಟೋಬರ್​ 8 ರಂದೇ ಭವಿಷ್ಯ ನುಡಿದಿತ್ತು. ಅದರಂತೆ ಇದೀಗ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ಟಿವಿ9 ಡಿಜಿಟಲ್​ ಭವಿಷ್ಯ ನಿಜವಾಗಿದೆ.

ಇಷ್ಟೇ ಅಲ್ಲದೇ ಇಡಿ ತನ್ನ ತನಿಖೆಯ ಭಾಗವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮನೆ ಬಾಗಿಲಿಗೆ ಬರುವುದಷ್ಟೇ ಅಲ್ಲ, ಅವರನ್ನು money laundering ಆರೋಪದಲ್ಲಿ ಬಂಧಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂದು ಟಿವಿ9 ಡಿಜಿಟಲ್​​ ಭವಿಷ್ಯ ನುಡಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:03 pm, Fri, 18 October 24

ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ಧಾರವಾಡ ಸಭೆಯಲ್ಲಿ ಭಾಗಿಯಾಗಿದ್ದ ಬೆಲ್ಲದ್ ಸತ್ಯ ಸಭೆಗೆ ತಿಳಿಸಲಿ: ಜಮೀರ್
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
ದರ್ಶನ್​ಗೆ ಜಾಮೀನು: ತೂಗುದೀಪ ನಿಲಯದ ಬಳಿ ಅಭಿಮಾನಿಗಳ ಸಂಭ್ರಮ
ಸುಮ್ಮನೆ ಮಾತಾಡಿದರೂ ಅನುಕುಮಾರ್ ತಾಯಿ ಜಯಮ್ಮಗೆ ಎದೆನೋವು ಬರುತ್ತದೆ
ಸುಮ್ಮನೆ ಮಾತಾಡಿದರೂ ಅನುಕುಮಾರ್ ತಾಯಿ ಜಯಮ್ಮಗೆ ಎದೆನೋವು ಬರುತ್ತದೆ
ಸಿಎಂರನ್ನು ಭೇಟಿಯಾಗುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ: ಕಾಶೀನಾಥಯ್ಯ
ಸಿಎಂರನ್ನು ಭೇಟಿಯಾಗುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ: ಕಾಶೀನಾಥಯ್ಯ