ಮುಡಾ ಕೇಸ್​: ಮೈಸೂರು ಭಾಗದ ಶಾಸಕರು-ಸಂಸದರು, ಅಧಿಕಾರಿಗಳಿಗೆ ಕಾದಿದ್ಯಾ ಸಂಕಷ್ಟ..?

ಮುಡಾ ಹಗರಣ ರಾಷ್ಟ್ರವ್ಯಾಪಿ ಸದ್ದು ಮಾಡಿದೆ. ಮುಡಾ ಹಗರಣದ ವಿಚಾರವಾಗಿ ರಾಜಕೀಯ ಜಟಾಪಟಿ ಜೋರಾಗಿದೆ. ಮುಖ್ಯಮಂತ್ರಿಗಳ ರಾಜೀನಾಮೆಗಾಗಿ ಬಿಜೆಪಿ ಆಗ್ರಹಿಸುತ್ತಿದೆ. ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆಗಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಅನೇಕ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಆರೋಪಿಗಳಾಗಲಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಭವಿಷ್ಯ ನುಡಿದಿದ್ದಾರೆ.

ಮುಡಾ ಕೇಸ್​: ಮೈಸೂರು ಭಾಗದ ಶಾಸಕರು-ಸಂಸದರು, ಅಧಿಕಾರಿಗಳಿಗೆ ಕಾದಿದ್ಯಾ ಸಂಕಷ್ಟ..?
ಮುಡಾ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on: Sep 29, 2024 | 1:15 PM

ಮೈಸೂರು, ಸೆಪ್ಟೆಂಬರ್​ 29: ಮುಡಾ ಹಗರಣದಲ್ಲಿ (Muda Case) ಸಚಿವ ಭೈರತಿ ಸುರೇಶ್ (Byrathi Suresh) ಕೂಡ ಆರೋಪಿಯಾಗಲಿದ್ದಾರೆ ಎಂದು ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ‌ ಕೃಷ್ಣ ಹೇಳಿದ್ದಾರೆ. ಮೈಸೂರಿನಲ್ಲಿ ಟಿವಿ9 ಪ್ರತಿನಿಧಿ ಜೊತೆ ಮಾತನಾಡಿದ ಅವರು, ಹಗರಣ ಸಂಬಂಧ ದಾಖಲಾಗಿರುವ ಎಫ್​ಐಆರ್​ನಲ್ಲಿ ಎ5ನಲ್ಲಿ ಇತರರು ಅಂತ ಇದ್ದು, ಇದರಲ್ಲಿ ಸಚಿವ ಭೈರತಿ ಸುರೇಶ್ ಸೇರಿದಂತೆ ಮೈಸೂರು ಭಾಗದ ಶಾಸಕರು, ಸಂಸದರು, ಅಧಿಕಾರಿಗಳು ಮತ್ತು ಪ್ರಭಾವಿಗಳು ತನಿಖೆ ಹಂತದಲ್ಲಿ ಆರೋಪಿಗಳಾಗಲಿದ್ದಾರೆ ಎಂದು ಹೇಳಿದರು.

ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರೇ ಫಲಾನುಭವಿ. ಅವರ ಪತ್ನಿ ಹೆಸರಿಗೆ ಮಾತ್ರ ನಿವೇಶನ ಪಡೆದಿದ್ದಾರೆ. ಈ ಹಿನ್ನೆಲೆ ಸಿದ್ದರಾಮಯ್ಯ ಪ್ರಕರಣದಲ್ಲಿ ಭಾಗಿಯಾಗಿರುವ ಜಿಲ್ಲಾಧಿಕಾರಿ ಸೇರಿದಂತೆ ಎಲ್ಲರೂ ಆರೋಪಿಗಳಾಗಲಿದ್ದಾರೆ ಎಂದರು.

ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಹರಿಬಿಟ್ಟ ವಿಚಾರವಾಗಿ ಮಾತನಾಡಿದ ಸ್ನೇಹಮಯಿ ಕೃಷ್ಣರವರು. ನನ್ನ ಹೋರಾಟ ಹತ್ತಿಕ್ಕುವ ಪ್ರಯತ್ನ ಇದು. ನಾನು ಅವರ ಬೆದರಿಕೆ ಪ್ರಭಾವಕ್ಕೆ ಬಗ್ಗದ ಹಿನ್ನೆಲೆ ಈ ರೀತಿ ಕೃತ್ಯ ಮಾಡುತ್ತಿದ್ದಾರೆ. ಈ ರೀತಿ ಪೋಸ್ಟರ್ ಹಾಕಿರುವವರು ಇದಕ್ಕೆ ಸಂಬಂಧಪಟ್ಟ ಸಾಕ್ಷ್ಯಾಧಾರ ನೀಡಲಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಮುಡಾ ಪ್ರಕರಣ ನಿಭಾಯಿಸುವಲ್ಲಿ ಸಿಎಂ ಫೇಲ್​​, ಸಿದ್ದರಾಮಯ್ಯ ವಿರುದ್ಧ ಸಚಿವರು ಬೇಸರ

ಮುಡಾ ಪ್ರಕರಣದಲ್ಲಿ ಖುದ್ದು ಸಿಎಂ 62 ಕೋಟಿ ಹಣದ ಬಗ್ಗೆ ಹೇಳಿದ್ದಾರೆ. ಜೊತೆಗೆ ಮುಡಾದಲ್ಲಿ 5 ಸಾವಿರ ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿದೆಹೀಗಾಗಿ ಜಾರಿ ನಿರ್ದೇಶನಾಲಯದ ತನಿಖೆಯ ಅವಶ್ಯಕತೆ ಇದೆ. ಈ ಬಗ್ಗೆ ಇಡಿ ಅಧಿಕಾರಿಗಳಿಗೆ ಇ-ಮೇಲ್ ಮೂಲಕ ದೂರು ನೀಡಿದ್ದೇನೆ. ಸೋಮವಾರ ಇಡಿ ಕಚೇರಿಗೆ ತೆರಳಿ ದೂರು ದಾಖಲಿಸುತ್ತೇನೆ ಎಂದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನೇಡೆದಿದೆ. ಪ್ರಕರಣದ ತನಿಖೆಯನ್ನು ದೇಸಾಯಿ ಆಯೋಗ, ಲೋಕಾಯುಕ್ತ, ಸಿಬಿಐ, ಇಡಿ ಕೂಡ ತನಿಖೆ ನಡೆಸಲಿ. ಇದರಿಂದ ಯಾವುದೇ ಗೊಂದಲ ಆಗುವುದಿಲ್ಲ ಎಂದ ಸ್ನೇಹಮಯಿ‌ ಕೃಷ್ಣ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್