ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧವೇ ಲೋಕಾಯುಕ್ತಕ್ಕೆ ದೂರು

| Updated By: ರಮೇಶ್ ಬಿ. ಜವಳಗೇರಾ

Updated on: Oct 16, 2024 | 4:50 PM

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಕಾನೂನು ಬಾಹಿರವಾಗಿ ಸೈಟ್ ಪಡೆದುಕೊಂಡಿರುವ ಬಗ್ಗೆ ಸ್ನೇಗಮಯಿ ಕೃಷ್ಣ ದೂರು ನೀಡಿದ್ದು, ಈ ದೂರಿನ ಅನ್ವಯ ಇದೀಗ ಸಿದ್ದರಾಮಯ್ಯನವರ ಸಿಎಂ ಕುರ್ಚಿಗೆ ಕಂಟಕ ಎದುರಾಗಿದೆ. ಇದರ ಮಧ್ಯ ಇದೀಗ ಕಾಂಗ್ರೆಸ್​​ ಸ್ನೇಹಮಯಿ ಕೃಷ್ಣ ವಿರುದ್ಧವೇ ಲೋಕಾಯುಕ್ತಕ್ಕೆ ದೂರು ನೀಡಿದೆ.

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧವೇ ಲೋಕಾಯುಕ್ತಕ್ಕೆ ದೂರು
ಸ್ನೇಹಮಹಿ ಕೃಷ್ಣ
Follow us on

ಮೈಸೂರು, (ಅಕ್ಟೋಬರ್ 16): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಡಾ ಹಗರಣ ಪ್ರಕರಣ ಸಂಬಂಧ ಮೈಸೂರು ಲೋಕಾಯಕ್ತ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಈಗಾಗಲೇ ಮೊದಲ ಹಂತದಲ್ಲಿ ದಾಖಲೆ ಪರಿಶೀಲನೆ ಮಾಡಿದ್ದಾರೆ. ಇದರ ಮಧ್ಯ ಮುಡಾ ಹಗರಣದ ದೂರುದಾರ, ಆರ್​​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಲೋಕಾಯುಕ್ತಕ್ಕೆ ಕಾಂಗ್ರೆಸ್ ದೂರು ನೀಡಿದೆ. ಇಂದು (ಅಕ್ಟೋಬರ್ 26) ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಅವರು ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಇನ್ನು ಲಕ್ಷ್ಮಣ್ ಅವರಿಗೆ ಮೈಸೂರು ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.

ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಲಕ್ಷ್ಮಣ, ಲೋಕಾಯುಕ್ತ ಅಧಿಕಾರಿಗೂ ನನಗೂ ಯಾವುದೇ ಸಂಬಂಧವಿಲ್ಲ. ಆದ್ರೆ, ಲೋಕಾಯುಕ್ತ ಅಧಿಕಾರಿಗಳಿಗೆ ಲಕ್ಷ್ಮಣ ಒತ್ತಡ ಹಾಕುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಪದೇ ಪದೇ ಆರೋಪ ಮಾಡಿತ್ತಿದ್ದಾರೆ. ಸ್ನೇಹಮಯಿ ಕೃಷ್ಣ ವಿರುದ್ಧವೇ ಅನೇಕ ಪ್ರಕರಣಗಳಿವೆ. ಈ ಹಿನ್ನೆಲೆಯಲ್ಲಿ ನಾವು ಅವನ ವಿರುದ್ಧವೇ ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಮುಡಾ ಕೇಸ್​ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು

ಇನ್ನು ಮುಡಾ ಹಗರಣ ಪ್ರಕರಣದ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ. ತನಿಖೆ ವೇಳೆ ಸಾಕ್ಷಿ ನಾಶ ಮಾಡಲು ಸಾಧ್ಯವಿಲ್ಲ. ಹಾಗಾಗಿ ನಾವು ಸಾಕ್ಷಿ ನಾಶ ಮಾಡಿದ್ದೇವೆ ಎನ್ನುವುದೆಲ್ಲ ಬರೀ ಸುಳ್ಳು ಎಂದು ಸ್ಪಷ್ಟಪಡಿಸಿರುವ ಸ್ನೇಹಮಯಿ ಕೃಷ್ಣ, ಮುಡಾಗೆ ಸಿಎಂ ಸಿದ್ದರಾಮಯ್ಯ ಒಳ್ಳೆಯ ಅಧಿಕಾರಿಯನ್ನೇ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಿದ್ದಾರೆ. ಈ ಮೂಲಕ ಮುಡಾ ಶುದ್ಧೀಕರಣ ಮಾಡುವ ಕೆಲಸ ಆಗಲಿದೆ ಎಂದು ತಿಳಿಸಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮಾಡುತ್ತಿರುವ ಲೋಕಾಯುಕ್ತ ಅಧಿಕಾರಿಗಳ ಮೇಲೆ ಕಾಂಗ್ರೆಸ್ ನಾಯಕ ಲಕ್ಷ್ಮಣ ಅವರು ಒತ್ತಡ ಹಾಕುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:47 pm, Wed, 16 October 24