ಮುಡಾ ಹಗರಣ: ಪ್ರಧಾನಿ ಮೋದಿಗೆ ದೂರು ನೀಡಿದ ಮೈಸೂರು ವಕೀಲ, ಸಿಬಿಐ ತನಿಖೆಗೆ ಆಗ್ರಹ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ಕುರಿತು ವಕೀಲ ರವಿಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿಗೆ ದೂರು ಸಲ್ಲಿಸಿದ್ದಾರೆ. ಮುಡಾ ಮಾಜಿ ಆಯುಕ್ತರಾದ ದಿನೇಶ್ ಮತ್ತು ಡಿಬಿ ನಟೇಶ್ ವಿರುದ್ಧ 100 ಕೋಟಿ ರೂಪಾಯಿಗೂ ಅಧಿಕ ಆರ್ಥಿಕ ನಷ್ಟ ಉಂಟುಮಾಡಿದ ಆರೋಪ ಮಾಡಿದ್ದಾರೆ. ಸಿಬಿಐ ತನಿಖೆಗೆ ಆಗ್ರಹಿಸಿ, 296 ಪುಟಗಳ ದಾಖಲೆಗಳೊಂದಿಗೆ ದೂರು ಸಲ್ಲಿಸಲಾಗಿದೆ.

ಮುಡಾ ಹಗರಣ: ಪ್ರಧಾನಿ ಮೋದಿಗೆ ದೂರು ನೀಡಿದ ಮೈಸೂರು ವಕೀಲ, ಸಿಬಿಐ ತನಿಖೆಗೆ ಆಗ್ರಹ
ಮುಡಾ ಹಗರಣ: ಪ್ರಧಾನಿ ಮೋದಿಗೆ ದೂರು ನೀಡಿದ ಮೈಸೂರು ವಕೀಲ, ಸಿಬಿಐ ತನಿಖೆಗೆ ಆಗ್ರಹ
Follow us
ದಿಲೀಪ್​, ಚೌಡಹಳ್ಳಿ
| Updated By: Ganapathi Sharma

Updated on: Dec 07, 2024 | 12:01 PM

ಮೈಸೂರು, ಡಿಸೆಂಬರ್ 7: ಮುಡಾ ಹಗರಣ ಸಂಬಂಧ ಮೈಸೂರಿನ ವಕೀಲರೊಬ್ಬರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ದೂರು ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ವಕೀಲ ರವಿಕುಮಾರ್ ಜುಲೈ 19ರಂದೇ ಮುಡಾ ಹಗರಣ ಕುರಿತು ಪ್ರಧಾನಿ ಮೋದಿಗೆ 296 ಪುಟಗಳ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ ಎಂಬುದು ತಿಳಿದುಬಂದಿದೆ. ಜತೆಗೆ, ಮುಡಾ ಹಗರಣದ ತನಿಖೆಯನ್ನು ಸಿಬಿಐ ವಹಿಸಿಕೊಳ್ಳುವಂತೆ ನಿರ್ದೇಶನ ನೀಡುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಮುಡಾ ಮಾಜಿ ಆಯುಕ್ತರಾದ ದಿನೇಶ್, ಡಿಬಿ ನಟೇಶ್ ವಿರುದ್ಧ ಆರೋಪ ಮಾಡಲಾಗಿದ್ದು, ಇಬ್ಬರು ಸೇರಿ 100 ಕೋಟಿ ರೂಪಾಯಿಗೂ ಅಧಿಕ ಆರ್ಥಿಕ ನಷ್ಟ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಸೇಲ್​ಡೀಡ್​, ಸೆಟಲ್​ಮೆಂಟ್​​ ಡೀಡ್ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ. ದಿನೇಶ್ ಕುಮಾರ್ ಮತ್ತು ನಟೇಶ್ ಬೇನಾಮಿ ವಹಿವಾಟು ನಡೆಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಮೋದಿಗೆ ಬರೆದ ದೂರು ಪತ್ರದಲ್ಲೇನಿದೆ?

‘‘ನಮ್ಮ ಪ್ರತಿಷ್ಠಿತ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು ದುಷ್ಟ ಕೈಗಳಿಂದ ರಕ್ಷಿಸುವ ಉದ್ದೇಶದಿಂದ ನಾನು ವಿ.ರವಿ ಕುಮಾರ್ ಈ ಪತ್ರವನ್ನು ಅತ್ಯಂತ ಜವಾಬ್ದಾರಿಯಿಂದ ಬರೆದಿದ್ದು, ಸಹಿ ಹಾಕಿದ್ದೇನೆ. ನಾನು ಮೈಸೂರು ನಗರದ ವಕೀಲ ಮತ್ತು ಖಾಯಂ ನಿವಾಸಿಯಾಗಿದ್ದೇನೆ. ಕಳೆದ ಹಲವಾರು ವರ್ಷಗಳಿಂದ ಮೈಸೂರು ಮಹಾರಾಜರಿಂದ ಮುಡಾ ರಚನೆಯಾದ ಕಾರಣವನ್ನೇ ಮರೆತು ದಲ್ಲಾಳಿಗಳಿಗೆ, ಎಸ್ಟೇಟ್ ಏಜೆಂಟರು ಇತ್ಯಾದಿಗಳಿಗೆ ಅನುಕೂಲ ಮಾಡಿಕೊಡುವ ಅಧಿಕಾರವಾಗಿ ಮಾರ್ಪಟ್ಟಿದೆ ಎಂದು ಹೇಳುವುದು ವಿಷಾದನೀಯ. ಪ್ರಸ್ತುತ ದಿನಗಳಲ್ಲಿ ಇದು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕಾಯುತ್ತಿರುವ ಅರ್ಜಿದಾರರಿಗೆ ಸೈಟ್‌ಗಳನ್ನು ಅಭಿವೃದ್ಧಿಪಡಿಸಿಲ್ಲ ಮತ್ತು ವಿತರಿಸಿಲ್ಲ.

‘ಕಪ್ಪು ಹಣ ವಹಿವಾಟು, ಪ್ರಭಾವಿಗಳ ಕೈವಾಡ’

ದುರದೃಷ್ಟವಶಾತ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 2020 ರಿಂದ 50:50 ಅನುಪಾತದ ಆಧಾರದ ಮೇಲೆ ಪರಿಹಾರಾತ್ಮಕ ಬದಲಿ ಸೈಟ್‌ಗಳ ಹಂಚಿಕೆಯಲ್ಲಿ ಕೋಟ್ಯಂತರ ರೂಪಾಯಿಗಳ ಕಪ್ಪುಹಣದ ವಹಿವಾಟು ನಡೆದಿದೆ. ಸುಮಾರು 5000 ಅಕ್ರಮ ನಿವೇಶನಗಳನ್ನು ಭೂಗಳ್ಳರಿಗೆ ಹಂಚಿಕೆ ಮಾಡಲಾಗಿದೆ. ರಾಜ್ಯದ ಆಸ್ತಿ ಅಥವಾ ಬೊಕ್ಕಸಕ್ಕೆ 4000 ಕೋಟಿಗೂ ಹೆಚ್ಚು ನಷ್ಟವಾಗಿದೆ. ಇದು ಮುಡಾ ಹಗರಣದ ಹಿಂದೆ ಪ್ರಬಲ ವ್ಯಕ್ತಿಗಳ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ. ಮೈಸೂರು ನಗರದ ಪ್ರಮುಖ ಬಡಾವಣೆಗಳಲ್ಲಿ ಸರ್ಕಾರಿ ಹಂಚಿಕೆ ನಿಯಮಗಳನ್ನು ಉಲ್ಲಂಘಿಸಿ ಮತ್ತು ನಿಗದಿತ ಮಾರ್ಗಸೂಚಿ ಮೌಲ್ಯವನ್ನು ಸಂಗ್ರಹಿಸದೆ ಅಕ್ರಮವಾಗಿ ನಿವೇಶನ ಹಂಚಿಕೆ ನಡೆದಿದೆ. ಮಾಧ್ಯಮ ಪ್ರಕಟಣೆಗಳನ್ನು ಇಲ್ಲಿ ಡಾಕ್ಯುಮೆಂಟ್ ಸಂಖ್ಯೆ-1 ಎಂದು ಲಗತ್ತಿಸಲಾಗಿದೆ ಎಂದು ವಕೀಲರು ಮೋದಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಮುಡಾದ ಮತ್ತೊಂದು ಹಗರಣ ಬಯಲು: ಸರ್ಕಾರದ ಬೊಕ್ಕಸಕ್ಕೆ 300 ಕೋಟಿ ರೂ. ನಷ್ಟ

ಈ ಮುಡಾ ಹಗರಣ ವ್ಯಾಪಕ ಮಾಧ್ಯಮಗಳ ಗಮನ ಸೆಳೆಯುತ್ತಿದ್ದಂತೆ, ಮುಡಾ ಆಯುಕ್ತರಾದ ಡಿಬಿ ನಟೇಶ್ ಮತ್ತು ದಿನೇಶ್ ಕುಮಾರ್ ಅವರು ಟಿಡಿಎಸ್, ನಿಜವಾದ ಪರಿಗಣನೆಯ ಮೊತ್ತ, ತೆರಿಗೆ ಮೊತ್ತವನ್ನು ಸಂಗ್ರಹಿಸದೆ ಐಟಿ ಕಾನೂನುಗಳನ್ನು ಉಲ್ಲಂಘಿಸಿ ಸಾವಿರಾರು ಸೈಟ್‌ಗಳನ್ನು ಬೇನಾಮಿ ಮತ್ತು ಅನಧಿಕೃತ ವ್ಯಕ್ತಿಗಳಿಗೆ ಹಂಚಿಕೆ ಮಾಡಿದ್ದಾರೆ ಎಂದು ನನಗೆ ವಿಶ್ವಾಸಾರ್ಹ ಮೂಲದಿಂದ ತಿಳಿದುಬಂದಿದೆ. ಫಲಾನುಭವಿಗಳು ಎಂದು ಕರೆಯಲ್ಪಡುವವರಿಂದ ಇಬ್ಬರೂ ಅನಗತ್ಯ ಲಾಭವನ್ನು ಪಡೆದುಕೊಂಡಿದ್ದಾರೆ ಮತ್ತು ಲೆಕ್ಕಕ್ಕೆ ಸಿಗದ ಆದಾಯವನ್ನು ಗಳಿಸಿದ್ದಾರೆ. ಇದರ ಅಂದಾಜು 100 ಕೋಟಿ ರೂಪಾಯಿಗೂ ಹೆಚ್ಚು ಇರಬಹುದು. ಮೇಲಿನ ಆರೋಪದ ಹೊರತಾಗಿ, ಇಬ್ಬರೂ ಆಯುಕ್ತರು ಮುಡಾ ಕಚೇರಿಯಲ್ಲಿನ ಖಾತೆಗಳು ಮತ್ತು ತೆರಿಗೆ ಪಾವತಿಗಳಿಗೆ ಸಂಬಂಧಿಸಿದ ಹಲವಾರು ದಾಖಲೆಗಳನ್ನು ಉದ್ದೇಶಪೂರ್ವಕವಾಗಿ ನಾಪತ್ತೆ ಮಾಡಿದ್ದಾರೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಒಟ್ಟು 10 ಪುಟಗಳ ದೂರಿನ ಜತೆಗೆ 296 ಪುಟಗಳ ದಾಖಲೆಯನ್ನೂ ವಕೀಲ ರವಿಕುಮಾರ್ ಮೋದಿಗೆ ಕಳುಹಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ