ಮುಡಾ: ವಕ್ರತುಂಡ ಸೊಸೈಟಿ ಹೆಸರಿನಲ್ಲಿ ಅವ್ಯವಹಾರ ಆರೋಪ, ಇಡಿ ಅಧಿಕಾರಿಗಳಿಂದ ತೂರಿಬಂದ ಪ್ರಶ್ನೆಗಳಿವು

ಮುಡಾ ಹಗರಣ ಸಂಬಂಧ ದಾಖಲೆಗಳ ಪರಿಶೀಲನೆ, ವಿಚಾರಣೆಯನ್ನು ಜಾರಿ ನಿರ್ದೇಶನಾಲಯ ಚುರುಕುಗೊಳಿಸಿದೆ. ಮಂಗಳವಾರ ಮೈಸೂರಿನ ವಿವಿಧೆಡೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಕಚೇರಿ ಮೇಲೆ ದಾಳಿ ಮಾಡಿ ಕೇಳಿರುವ ಪ್ರಶ್ನೆಗಳ ಮಾಹಿತಿ ‘ಟಿವಿ9’ಗೆ ಲಭ್ಯವಾಗಿದೆ. ವಿವರ ಇಲ್ಲಿದೆ.

ಮುಡಾ: ವಕ್ರತುಂಡ ಸೊಸೈಟಿ ಹೆಸರಿನಲ್ಲಿ ಅವ್ಯವಹಾರ ಆರೋಪ, ಇಡಿ ಅಧಿಕಾರಿಗಳಿಂದ ತೂರಿಬಂದ ಪ್ರಶ್ನೆಗಳಿವು
ವಕ್ರತುಂಡ ಸೊಸೈಟಿ ಹೆಸರಿನಲ್ಲಿ ಅವ್ಯವಹಾರ ಆರೋಪ, ಇಡಿ ದಾಳಿ, ಪರಿಶೀಲನೆ
Follow us
| Updated By: ಗಣಪತಿ ಶರ್ಮ

Updated on: Oct 30, 2024 | 9:38 AM

ಮೈಸೂರು, ಅಕ್ಟೋಬರ್ 30: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದ 50:50 ಹಗರಣ ಸಂಬಂಧ ಮೈಸೂರಿನ ವಿವಿಧೆಡೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅನೇಕ ಮಹತ್ವದ ದಾಖಲೆಗಳನ್ನು ಕಲೆಹಾಕಿದ್ದರು. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಕಚೇರಿ ಮೇಲೂ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಅನೇಕ ದಾಖಲೆಗಳನ್ನು ಪರಿಶೀಲನೆ ಮಾಡಿದ್ದರು. ಇದರಿಂದ, ವಕ್ರತುಂಡ ಸೊಸೈಟಿ ಹೆಸರಿನಲ್ಲಿಯೂ ಅವ್ಯವಹಾರ ನಡೆದಿತ್ತೇ ಎಂಬ ಅನುಮಾನ ಬಲವಾಗಿತ್ತು.

ಇದೀಗ, ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘದ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಇಡಿ ಅಧಿಕಾರಿಗಳು ಕೇಳಿದ್ದು ತಿಳಿದುಬಂದಿದೆ. ಇಡಿ ಅಧಿಕಾರಿಗಳ ಪ್ರಶ್ನೆಗಳು ‘ಟಿವಿ9’ಗೆ ಲಭ್ಯವಾಗಿದೆ.

ಹಲವು ಪ್ರಶ್ನೆಗಳನ್ನ ಸಿದ್ಧಪಡಿಸಿಕೊಂಡು ಬಂದಿದ್ದ ಇಡಿ ಅಧಿಕಾರಿಗಳು ಬ್ಯುಲ್ಡರ್ ಜಯರಾಮ್​​ಗೆ ಸೇರಿದ ಎಂಎಂಜಿ ಕನ್ಸಟ್ರಕ್ಷನ್ ಕಚೇರಿ ಹಾಗೂ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘದಲ್ಲೇ ಹೇಳಿಕೆ ದಾಖಲಿಸಿದ್ದಾರೆ. ಪ್ರತಿಯೊಂದು ಪ್ರಶ್ನೆ ಹಾಗೂ ಉತ್ತರವನ್ನ ಕಚೇರಿಯಲ್ಲೇ ಕುಳಿತು ಟೈಪ್ ಮಾಡಿಕೊಂಡಿದ್ದಾರೆ. ಸಿದ್ದಪಡಿಸಿದ ಪ್ರಶ್ನೆಗಳು ಜೊತೆಗೆ ದಾಖಲೆ ಪರಿಶೀಲನೆ ನಂತರ ಬಂದ ಅನುಮಾನದ ಮೇಲೆ ಪ್ರಶ್ನೆಗಳನ್ನು ಕೇಳಲಾಗಿದೆ. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಡಿ ಅಧಿಕಾರಿಗಳು ಕೇಳಿದ್ದಾರೆ.

ಇ.ಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿವು

  1. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಎಷ್ಟು ಜನ ಸದಸ್ಯರಿದ್ದಾರೆ?
  2. ಎಷ್ಟು ಬ್ಯಾಂಕ್ ಅಕೌಂಟ್​​ಗಳನ್ನು ಹೊಂದಿದ್ದೀರಿ?
  3. ಸಂಘದ ಸಾಮಾನ್ಯ ಸಭೆ ಯಾವಾಗ ನಡೆಸಿದ್ದೀರಿ?
  4. ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಯಾವುದು?
  5. ಸಹಕಾರ ಸಂಘದ ನಿರ್ದೇಶಕರ ವಿವರ ವಿವರಿಸಿ?
  6. ಇಲ್ಲಿಯವರೆಗೆ ಎಷ್ಟು ಲೇಔಟ್ ನಿರ್ಮಾಣ ಮಾಡಿದ್ದೀರಿ?
  7. ಎಷ್ಟು ಜನರಿಂದ ಮುಂಗಡವಾಗಿ ಹಣ ಪಡೆದಿದ್ದೀರಿ?
  8. ಇನ್ನೂ ಎಷ್ಟು ಜನರಿಗೆ ನಿವೇಶನ ಕೊಡಬೇಕು?
  9. ಹಲವು ಬ್ಯಾಂಕ್ ಖಾತೆಗಳಿಗೆ kyc ಲಿಂಕ್ ಆಗಿಲ್ಲ, ದಾಖಲೆಗಳು ಇಲ್ಲದಿದ್ದರು ಹೇಗೆ ವ್ಯವಹಾರ ಮಾಡುತ್ತಿದ್ದೀರಿ?
  10. ಮುಡಾದಿಂದ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘಕ್ಕೆ 50:50 ಅನುಪಾತದಡಿ ಮುಡಾದಿಂದ ಎಷ್ಟು ನಿವೇಶನ ಬಂದಿದೆ?

ಇದನ್ನೂ ಓದಿ: ಇಡಿ ದಾಳಿ: ವಕ್ರತುಂಡ ಸೊಸೈಟಿ ಹೆಸರಿನಲ್ಲಿ ನಡೆದಿತ್ತಾ ಬಹುದೊಡ್ಡ ಭ್ರಷ್ಟಾಚಾರ?

ಕಚೇರಿಯಲ್ಲಿ ಪ್ರತಿಯೊಂದು ದಾಖಲೆಗಳನ್ನ ಪರಿಶೀಲನೆ ಮಾಡಿ ಇಡಿ ಅಧಿಕಾರಿಗಳು ಪ್ರಶ್ನೆಗಳನ್ನು ಕೇಳಿದ್ದಾರೆ.

ಕರ್ನಾಟಕ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪಕ್ಕಾ ಪ್ಲ್ಯಾನ್ ಮಾಡಿ ಎಲ್ಲರನ್ನೂ ಹೊಡೆದ ಹನುಮಂತ; ತಂತ್ರಕ್ಕೆ ಎಲ್ಲರೂ ಶಾಕ್
ಪಕ್ಕಾ ಪ್ಲ್ಯಾನ್ ಮಾಡಿ ಎಲ್ಲರನ್ನೂ ಹೊಡೆದ ಹನುಮಂತ; ತಂತ್ರಕ್ಕೆ ಎಲ್ಲರೂ ಶಾಕ್
ಸಾಲಿಗ್ರಾಮ ಮನೆಯಲ್ಲಿದ್ದರೆ ಪೂಜಿಸುವುದು ಹೇಗೆಂದು ತಿಳಿಯಿರಿ
ಸಾಲಿಗ್ರಾಮ ಮನೆಯಲ್ಲಿದ್ದರೆ ಪೂಜಿಸುವುದು ಹೇಗೆಂದು ತಿಳಿಯಿರಿ
Nithya Bhavishya: ಜಲಪೂರ್ಣ ದಿನದಂದು ಯಾವ ರಾಶಿಗೆಲ್ಲಾ ಶುಭ, ಅಶುಭ
Nithya Bhavishya: ಜಲಪೂರ್ಣ ದಿನದಂದು ಯಾವ ರಾಶಿಗೆಲ್ಲಾ ಶುಭ, ಅಶುಭ
ವಿಡಿಯೋ: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ
ವಿಡಿಯೋ: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ
ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಬಾಲಕ
ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಬಾಲಕ
ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ
ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ
ಹಾಸನಾಂಬೆಯ ದರ್ಶನಕ್ಕೆ ಪ್ರತಿದಿನ ಆಗಮಿಸುತ್ತಿರುವ ರಾಜ್ಯದ ಗಣ್ಯರ ದಂಡು
ಹಾಸನಾಂಬೆಯ ದರ್ಶನಕ್ಕೆ ಪ್ರತಿದಿನ ಆಗಮಿಸುತ್ತಿರುವ ರಾಜ್ಯದ ಗಣ್ಯರ ದಂಡು