AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ನಿವೇಶನ ವಾಪಸ್ ಕೊಟ್ಟು ತನಿಖೆ ಮಾಡಿಸಿ: ಸಿಎಂ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಸಲಹೆ

ಮುಡಾ ಹಗರಣದ ವಿಚಾರವಾಗಿ ಮೈಸೂರು ಕೊಡಗು ಕ್ಷೇತ್ರದ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅಚ್ಚರಿಯ ಮಾತುಗಳನ್ನಾಡಿದ್ದಾರೆ. ಅದೇ ರೀತಿ ಸಿಎಂ ಸಿದ್ದರಾಮಯ್ಯಗೆ ಕೆಲವು ಸಲಹೆಯನ್ನೂ ನೀಡಿದ್ದಾರೆ. ಹಗರಣದಲ್ಲಿ ಸಿದ್ದರಾಮಯ್ಯ ಪಾತ್ರದ ಬಗ್ಗೆ ಪ್ರತಾಪ್ ಸಿಂಹ ಹೇಳಿದ್ದೇನು ಎಂಬುದರ ವಿವರ ಇಲ್ಲಿದೆ.

ಮುಡಾ ನಿವೇಶನ ವಾಪಸ್ ಕೊಟ್ಟು ತನಿಖೆ ಮಾಡಿಸಿ: ಸಿಎಂ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಸಲಹೆ
ಪ್ರತಾಪ್ ಸಿಂಹ
ರಾಮ್​, ಮೈಸೂರು
| Updated By: Ganapathi Sharma

Updated on:Jul 24, 2024 | 2:06 PM

Share

ಮೈಸೂರು, ಜುಲೈ 24: ‘ಸಿಎಂ ಸಿದ್ದರಾಮಯ್ಯ ಅವರೇ, ನಿಮಗೆ ಬಂದಿರುವ ನಿವೇಶನವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಾಪಾಸ್ ಕೊಟ್ಟು ತನಿಖೆ ಮಾಡಿಸಿ’ ಎಂದು ಮೈಸೂರು ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ ಸಲಹೆ ನೀಡಿದರು. ಸಿದ್ದರಾಮಯ್ಯರ 40 ವರ್ಷದ ರಾಜಕಾರಣವನ್ನು ಗಮನಿಸಿದರೆ ಅವರನ್ನು ಭ್ರಷ್ಟ ಅನ್ನಲು ಸಾಧ್ಯವಿಲ್ಲ. ಆದರೆ, ಈಗ ಸಿದ್ದರಾಮಯ್ಯ ಬಗ್ಗೆ ಅನುಮಾನ ಶುರುವಾಗಿದೆ. ಸೈಟ್ ವಾಪಾಸ್ ಕೊಟ್ಟು ತನಿಖೆ ಮಾಡಿಸುವುದೇ ಸೂಕ್ತ. ಇಲ್ಲದೇ ಇದ್ದರೆ ಸಿಎಂ‌ ಕುಟುಂಬದ ಕೇಸ್ ಇಟ್ಟುಕೊಂಡು ಹಲವರು ಬಚಾವ್ ಆಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯರನ್ನು ಉದ್ದೇಶಿಸಿ ಮಾತನಾಡಿದ ಪ್ರತಾಪ್ ಸಿಂಹ್, 40 ವರ್ಷಗಳಲ್ಲಿ ಕಳಂಕ ಅಂಟಿಸಿ ಕೊಳ್ಳದಿರುವ ನೀವು ಇದ್ಯಾವುದೋ 16 ಸೈಟಿಗೆ ಕಳಂಕ ಅಂಟಿಸಿಕೊಳ್ಳುತ್ತಾ ಇದ್ದೀರಿ. ಇದು ಬೇಕಾ ನಿಮಗೆ? ಮುಂದಿನ ಮೂರವರೆ ವರ್ಷ ನೀವೇ ಸಿಎಂ ಆಗಿ ಇರುತ್ತೀರಿ. ಇಡೀ ಮೂರೂವರೆ ವರ್ಷ ಇದೇ ಆರೋಪಕ್ಕೆ ತುತ್ತಾಗುತ್ತೀರಿ. ನೊಣ ತಿಂದು ಜಾತಿ ಕೆಡಿಸಿಕೊಳ್ಳಬೇಡಿ ಎಂದರು.

ಈ ಹಿಂದೆ ಸಿಎಂ ಆಗಿದ್ದವರ ಆಸ್ತಿಗಳನ್ನೆಲ್ಲ ನೋಡಿದರೆ ಸಿದ್ದರಾಮಯ್ಯ ಆಸ್ತಿ ಏನೂ ಅಲ್ಲ. ಮುಡಾ ಹಗರಣವನ್ನು ಸಂತೋಷ್ ಹೆಗ್ಡೆ, ಎನ್ ಕುಮಾರ್ ಅವರಂಥ ವ್ಯಕ್ತಿಗಳಿಂದ ನ್ಯಾಯಾಂಗ ತನಿಖೆ ಮಾಡಿಸಿ ಎಂದು ಪ್ರತಾಪ್ ಸಿಂಹ ಹೇಳಿದರು.

ಮರೀಗೌಡ ದಡ್ಡ ಶಿಖಾಮಣಿ. ನಾನು ಮುಡಾದಲ್ಲಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಒಂದು ಸೈಟ್ ಕೊಡಿಸಿದ್ದರೆ, ತೆಗೆದುಕೊಂಡಿದ್ದರೆ ತೋರಿಸಲಿ. ನಾನು ಮುಡಾಗೆ ಯಾವಾತ್ತೂ ವ್ಯವಹಾರಕ್ಕೆಂದು ಹೋಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಚಾಮುಂಡಿಯೇ ಮುಂದಿನ ದಾರಿ ತೋರಿಸುತ್ತಾಳೆ: ಪ್ರತಾಪ್ ಸಿಂಹ

ರಾಜಕೀಯದಲ್ಲಿ ಏನೋ ಮಾಡುತ್ತೇವೆ ಎಂದು ಹೇಳಬಾರದು. ಹೇಳಿದರೆ ಕೆಲವರು ಅದಕ್ಕೂ ಬೇರೆ ಸ್ಕೀಂ ಹಾಕಿ ಬಿಡುತ್ತಾರೆ. ತಾಯಿ ಚಾಮುಂಡಿಯೇ ನನಗೆ ಮುಂದಿನ ದಾರಿ ತೋರಿಸುತ್ತಾಳೆ. ನಾನು ಜನರಿಂದ ತಿರಸ್ಕೃತನಾದ ವ್ಯಕ್ತಿ ಅಲ್ಲ. ಏನೋ ಕೆಲವರಿಂದಾಗಿ ಟಿಕೆಟ್ ತಪ್ಪಿತು. ಹಾಗಂತ ಇದೇ ಅಂತಿಮ ಅಲ್ಲವೇ ಅಲ್ಲ ಎಂದರು.

ಸಿದ್ದರಾಮಯ್ಯ ಮೂರೂವರೆ ವರ್ಷ ಸಿಎಂ ಅಗಿರುತ್ತಾರೆ ಎಂದು ಅವರ ಹಿಂಬಾಲಕರು ಹೇಳುತ್ತಿರುತ್ತಾರೆ. ಹೀಗಾಗಿ ನಾನು ಹೇಳಿದೆ ಅಷ್ಟೇ ಎಂದು ಸಿದ್ದರಾಮಯ್ಯ ಅವಧಿ ಬಗ್ಗೆ ಸ್ಪಷ್ಟನೆಯನ್ನೂ ನೀಡಿದರು.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಬೆಂಗಳೂರು-ಮೈಸೂರು ಪಾದಯಾತ್ರೆಗೆ ಬಿಜೆಪಿ ಚಿಂತನೆ

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದರೂ ಖುಷಿಯೇ. ಅವರು ಸಹ ಹಳೇ ಮೈಸೂರು ಭಾಗದವರೇ. ಸಿದ್ದರಾಮಯ್ಯ ಸಹ ಮೈಸೂರಿನವರೇ. ಅವರು ಬೇರೆ ಪಕ್ಷದವರು ಇರಬಹುದು, ಆದರೆ ಅವರು ಮೈಸೂರಿನವರು ಎಂಬ ಹೆಮ್ಮೆ ಇದೆ ಎಂದು ಪ್ರತಾಪ್ ಸಿಂಹ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:05 pm, Wed, 24 July 24

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ