Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಪ್ರಕರಣ; ಸಿಎಂ ಪತ್ನಿಯ ಇಡಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ, ಭೈರತಿ ಸುರೇಶ್ ಅವರ ಇಡಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಣೆ ಮಾಡಿದೆ. ಈಗಾಗಲೇ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ ಚಿಟ್‌ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜ್ ಅವರಿಗೆ ಕ್ಲೀನ್ ಚಿಟ್ ನೀಡಲಾಗಿತ್ತು.

ಮುಡಾ ಪ್ರಕರಣ; ಸಿಎಂ ಪತ್ನಿಯ ಇಡಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್
Karnataka High Court
Follow us
Ramesha M
| Updated By: ಸುಷ್ಮಾ ಚಕ್ರೆ

Updated on: Feb 20, 2025 | 5:22 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಹಾಗೂ ಭೈರತಿ ಸುರೇಶ್​ಗೆ ಇಡಿ (ಜಾರಿ ನಿರ್ದೇಶನಾಲಯ) ಸಮನ್ಸ್​ಗೆ ನೀಡಲಾಗಿದ್ದ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ. ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ ಅವರಿಗೆ ಇಡಿ ಸಮನ್ಸ್ ನೀಡಿದ್ದ ಹಿನ್ನೆಲೆಯಲ್ಲಿ ಸಮನ್ಸ್ ರದ್ದು ಕೋರಿ ಪಾರ್ವತಿ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಗಿದೆ. ಜಾರಿ ನಿರ್ದೇಶನಾಲಯದಿಂದ ಸಿಎಂ ಪತ್ನಿ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡಲಾಗಿತ್ತು.

ಸಿಎಂ ಪತ್ನಿ ಪಾರ್ವತಿ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದು, ಮುಡಾದ 14 ಸೈಟ್ ಗಳನ್ನು ಈಗಾಗಲೇ ಮರಳಿಸಲಾಗಿದೆ. ಸೈಟ್ ಗಳನ್ನು ಮರಳಿಸಿರುವುದಿರಂದ ಇಡಿಗೆ ತನಿಖೆ ವ್ಯಾಪ್ತಿ ಇಲ್ಲ. ಅಪರಾಧದಿಂದ ಗಳಿಸಿದ ಸಂಪತ್ತಿದ್ದರೆ ಮಾತ್ರ ಇಡಿ ತನಿಖೆ ನಡೆಸಬಹುದು. ಆದರೆ ಸೈಟ್ ಗಳನ್ನು ಮರಳಿಸಿದ ನಂತರ ಇಡಿ ತನಿಖೆ ಆರಂಭಿಸಿದೆ. ಅಪರಾಧದಿಂದ ಗಳಿಸಿದ ಹಣ ಚಟುವಟಿಕೆಗೆ ಬಳಕೆಯಾಗಬೇಕು. ಇಲ್ಲವಾದರೆ ಪಿಎಂಎಲ್‌ಎ ಕಾಯ್ದೆಯ ಅಂಶಗಳು ಅನ್ವಯವಾಗುವುದಿಲ್ಲವೆಂದು ವಾದಿಸಿದ್ದರು.

2024ರ ಅಕ್ಟೋಬರ್ 1ರಂದೇ 14 ಸೈಟ್ ಗಳನ್ನು ಪಾರ್ವತಿ ಹಿಂತಿರುಗಿಸಿದ್ದಾರೆ. ಮುಡಾ ನೀಡಿದ ಸೈಟ್ ಗಳನ್ನು ಅವರು ಅನುಭವಿಸುತ್ತಿಲ್ಲ. ಹೀಗಾಗಿ ಅಪರಾಧದ ಸಂಪತ್ತು ಅವರ ಬಳಿ ಇಲ್ಲವೆಂದು ವಾದಿಸಿದ್ದಾರೆ. ಅಪರಾಧದ ಸಂಪತ್ತನ್ನು ಮುಚ್ಚಿಟ್ಟಿದ್ದರೆ ಆಗ ಇಡಿಗೆ ತನಿಖಾ ವ್ಯಾಪ್ತಿ ಬರುತ್ತದೆ. ಸಂಪತ್ತಿನ ಸ್ವಾಧೀನದಲ್ಲಿದ್ದರೆ, ಅನುಭವಿಸುತ್ತಿದ್ದರೆ ಇಡಿ ವ್ಯಾಪ್ತಿ ಬರುತ್ತದೆ. ಆದರೆ, ಈ ಕೇಸಿನಲ್ಲಿ ಇಡಿ ಇಸಿಐಆರ್ ದಾಖಲಿಸಿದ್ದೇ ಸರಿಯಲ್ಲವೆಂದು ಚೌಟ ವಾದಿಸಿದ್ದರು. ಹಾಗೇ, ಎಫ್‌ಐಆರ್‌ ದಾಖಲಿಸಿದ 4 ದಿನಗಳಲ್ಲೇ ಇಡಿ ಇಸಿಐಆರ್ ದಾಖಲಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆಯನ್ನೇ ಇಡಿ ಪುನರಾವರ್ತಿಸುತ್ತಿದೆ. ಇಡಿ ಸಲ್ಲಿಸಿರುವ ಆಕ್ಷೇಪಣೆಯಲ್ಲಿ14 ಸೈಟ್ ಅಪರಾಧದ ಸಂಪತ್ತೆಂದಿದೆ. ಮುಡಾದ ಬೇರೆ ಸೈಟ್ ಗಳನ್ನೂ ಜಪ್ತಿ ಮಾಡಿದೆ ಎಂದಿದ್ದರು.

ಇದನ್ನೂ ಓದಿ: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕ್ಲೀನ್ ಚಿಟ್ ಸಿಕ್ಕಿದ್ದು ಸಂತಸ ತಂದಿದೆ: ಸಂತೋಷ್ ಲಾಡ್

ಮುಡಾದ 14 ಸೈಟ್ ಗಳಲ್ಲದೇ 1708 ಸೈಟ್ ಗಳ ಬಗ್ಗೆಯೂ ತನಿಖೆ ನಡೆಸುತ್ತಿದೆ. ಈಗಾಗಲೇ 160 ಸೈಟ್ ಗಳನ್ನು ಇಡಿ ತಾತ್ಕಾಲಿಕ ಜಪ್ತಿ ಮಾಡಿದೆ. ತನ್ನ ಕಾರ್ಯವ್ಯಾಪ್ತಿ ಮೀರಿ ಇಡಿ ಪರ್ಯಾಯ ತನಿಖೆ ನಡೆಸುತ್ತಿದೆ. ಇಡಿ ತಾತ್ಕಾಲಿಕ ಜಪ್ತಿ ಆದೇಶದಲ್ಲಿ ಹಲವು ಅಂಶಗಳನ್ನು ಪ್ರಸ್ತಾಪಿಸಿದೆ. ಭೂಸ್ವಾಧೀನ, ಭೂಪರಿವರ್ತನೆ ಇತ್ಯಾದಿಗಳ ಬಗ್ಗೆಯೂ ತನಿಖೆ ನಡೆಸಿದೆ. ಲೋಕಾಯುಕ್ತ ಪೊಲೀಸರ ತನಿಖಾ ವ್ಯಾಪ್ತಿಯಲ್ಲಿ ಇಡಿ ಪ್ರವೇಶಿಸಿದೆ. ಮುಡಾಗೆ ಹಿಂತಿರುಗಿಸಿರುವ 14 ಸೈಟ್​ಗಳನ್ನು ಇಡಿ ಜಪ್ತಿ ಮಾಡಿಲ್ಲ. ಆದರೆ ಇತರೆ 160 ಸೈಟ್ ಗಳನ್ನು ಇಡಿ ಜಪ್ತಿ ಮಾಡಿದೆ. ಈಗಾಗಲೇ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ತನಿಖೆಯಲ್ಲಿ ಯಾವುದೇ ಅಕ್ರಮ ಕಂಡುಬಂದಿಲ್ಲವೆಂದು ವರದಿ ಸಲ್ಲಿಸಿದ್ದಾರೆ ಎಂದು ಸಿಎಂ ಪತ್ನಿ ಪಾರ್ವತಿ ಪರ ಸಂದೇಶ್ ಚೌಟ ವಾದ ಮಂಡಿಸಿದ್ದರು.

ಇಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ವಾದ ಮಂಡಿಸಿದ್ದು, ಭ್ರಷ್ಟಾಚಾರ ಹಾಗೂ ಅಪರಾಧದ ಹಣ ಸಯಾಮಿ ಅವಳಿಗಳಂತೆ. ಭ್ರಷ್ಟಾಚಾರ ಆಗುತ್ತಿದ್ದಂತೆ ಅಪರಾಧದ ಹಣ ಸಂಪಾದನೆಯಾಗುತ್ತದೆ. ಖಾಸಗಿ ದೂರಿನಲ್ಲಿ 5 ಸಾವಿರ ಕೋಟಿ ಮುಡಾ ಹಗರಣವನ್ನೂ ಪ್ರಸ್ತಾಪಿಸಲಾಗಿದೆ. ಈ ಖಾಸಗಿ ದೂರನ್ನು ಆಧರಿಸಿಯೇ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹೀಗಾಗಿ ಇದು ಕೇವಲ 14 ಸೈಟ್ ಗಳಿಗೆ ಸಂಬಂಧಿಸಿದ ದೂರು ಮಾತ್ರವಲ್ಲ. ಮುಡಾದ ಅಕ್ರಮಗಳ ದೂರಿನ ಬಗ್ಗೆ ಇಡಿ ತನಿಖೆ ನಡೆಸಿದೆ ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಮುಡಾ ಸಂಕಷ್ಟ: ಅಕ್ರಮ ಡಿನೋಟಿಫಿಕೇಶನ್ ಆರೋಪದಲ್ಲಿ ರಾಜ್ಯಪಾಲರಿಗೆ ಬಿಜೆಪಿ ದೂರು

ಮುಡಾದ ಅಪರಾಧದ ಸಂಪತ್ತನ್ನು ಸಂಬಂಧಿಗಳಿಗೆ ಹಸ್ತಾಂತರಿಸಲಾಗಿದೆ. ಪ್ರಭಾವಿ ವ್ಯಕ್ತಿಗಳು ನೆಂಟರ ಹೆಸರಿನಲ್ಲಿ ಸೈಟ್ ಗಳ ಹಂಚಿಕೆ ಪಡೆಯುತ್ತಿದ್ದಾರೆ. ಒತ್ತಡ ಹೇರಿ ಸೈಟ್ ಹಂಚಿಕೆ ಪಡೆದಿದ್ದಾರೆಂದು ಸಾಕ್ಷಿಯೊಬ್ಬರ ಹೇಳಿಕೆ ಇದೆ. ಮುಡಾ ಮಾಜಿ ಆಯುಕ್ತರ ಸಂಬಂಧಿಗಳಿಗೆ ಹಲವು ಸೈಟ್ ಹಂಚಲಾಗಿದೆ. ತಾತ, ಹೆಂಡತಿಯ ತಾತ, ಸಹೋದರನ ಮಗ, ಹೆಂಡತಿಯ ತಾತ ಹೀಗೆ ಹಲವು ಸೈಟ್ ಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ. ಈ ಮಾಹಿತಿಯನ್ನು ತನಿಖಾ ಸಂಸ್ಥೆಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಅರವಿಂದ್ ಕಾಮತ್ ವಾದಿಸಿದ್ದಾರೆ.

ಇಸಿಐಆರ್‌ ದಾಖಲಿಸಿದಾಗ 14 ಸೈಟ್ ಸಿಎಂ ಪತ್ನಿ ವಶದಲ್ಲಿತ್ತು. ಈ 14 ಸೈಟ್ ಅಪರಾಧದ ಸಂಪತ್ತಾಗಿರುವುದರಿಂದ ತನಿಖೆ ಅಗತ್ಯ. ಈ ಸಮನ್ಸ್ ನಲ್ಲಿ ಇಡಿ ಯಾವುದೇ ಆರೋಪಗಳನ್ನು ಮಾಡಿಲ್ಲ. ಕೇವಲ ಸಾಕ್ಷಿಯಾಗಷ್ಟೇ ಇಡಿ ಸಮನ್ಸ್ ಜಾರಿಗೊಳಿಸಿದೆ. ಅವರಿಂದ ಮಾಹಿತಿ ಪಡೆಯಲೆಂದೇ ಇಡಿ ಸಮನ್ಸ್ ಜಾರಿಗೊಳಿಸಿದೆ. ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿರಬಹುದು, ಆದರೆ ಕೋರ್ಟ್ ಇನ್ನೂ ಬಿ ರಿಪೋರ್ಟ್ ಅಂಗೀಕರಿಸಿಲ್ಲ. ಬಿ ರಿಪೋರ್ಟ್ ಪ್ರಶ್ನಿಸಲು ಇಡಿಗೂ ಅಧಿಕಾರವಿದೆ. ಸಚಿವ ಭೈರತಿ ಸುರೇಶ್ ಕಚೇರಿಯಿಂದ ಹಲವು ನಿರ್ದೇಶನಗಳು ಹೋಗಿವೆ. ಸಚಿವ ಭೈರತಿ ಸುರೇಶ್ ಕಚೇರಿಯಿಂದ ಅನುಮೋದನೆ ನೀಡಲಾಗಿದೆ. ಹೀಗಾಗಿ ಸಚಿವ ಸುರೇಶ್ ಗೆ ಇಡಿ ಸಮನ್ಸ್ ನೀಡಿದೆ ಎಂದು ಇಡಿ ಪರ ಎಎಸ್‌ಜಿ ಅರವಿಂದ್ ಕಾಮತ್ ವಾದ ಮಂಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ