ಮೈಸೂರು, ನವೆಂಬರ್ 09: 50:50 ಅನುಪಾತದಲ್ಲಿ ಹಂಚಿಕೆ ಮಾಡಿದ್ದ ನಿವೇಶನಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಿಂಪಡೆದಿತ್ತು. ಮುಡಾದ (Muda) ಈ ನಿರ್ಧಾರದಿಂದ ನಿವೇಶನ ಪಡೆದವರಿಗೆ ಸಂಕಷ್ಟ ಶುರುವಾಗಿದೆ. ಇನ್ನು, ಮುಡಾ ಹಂಚಿಕೆ ಮಾಡಿದ್ದ 211 ನೀವೇಶನ ಪಟ್ಟಿ ಲಭ್ಯವಾಗಿದ್ದು, ಯಾರಿಗೆ ಎಷ್ಟು ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.
ಒಟ್ಟು 241 ನಿವೇಶನ ಮಂಜೂರಾಗಿದ್ದು, ಇದರಲ್ಲಿ 211 ನಿವೇಶನಗಳ ಬಗ್ಗೆ ಮಾತ್ರ ಮಾಹಿತಿ ಲಭ್ಯವಾಗಿದೆ. ಇದರಲ್ಲಿ ಅಬ್ದುಲ್ ವಾಜಿದ್ ಎಂಬುವರಿಗೆ 26 ನಿವೇಶನ ಮಂಜೂರು ಮಾಡಲಾಗಿದೆ. ಯಾವತ್ತೋ ವಶಪಡಿಸಿಕೊಂಡ ಭೂಮಿಗಳಿಗೆ 2020 ರಿಂದ 2023ರ ಅವಧಿಯಲ್ಲಿ ಆಯುಕ್ತರ ತೀರ್ಮಾನದಂತೆ ಸೈಟ್ ಹಂಚಿಕೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಕಂಟಕ ತಂದಿಟ್ಟಿರುವ ಮುಡಾ ನಿವೇಶನ ಹಂಚಿಕೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿ ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಜುಲೈನಲ್ಲಿ ಹೈ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಆಯೋಗ ರಚಿಸಿದ್ದು, ಅವರಿಗೆ ವರದಿ ಸಲ್ಲಿಕೆಗೆ ಆರು ತಿಂಗಳ ಕಾಲಾವಕಾಶ ನೀಡಲಾಗಿದೆ.
ಇದನ್ನೂ ಓದಿ: ಮುಡಾ ಸಭೆಯಲ್ಲಿ ಮಹತ್ವದ ನಿರ್ಣಯ: 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಬಿಗ್ ಶಾಕ್
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚಿಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಲೋಕಾಯುಕ್ತ ಅಧಿಕಾರಿಗಳು ಬರೊಬ್ಬರಿ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ಸಿಎಂ ಸ್ಥಾನದಲ್ಲಿದ್ದು, ಲೋಕಾಯುಕ್ತ ವಿಚಾರಣೆಗೆ ಹಾಜರಾದ ಮೊದಲ ಮುಖ್ಯಮಂತ್ರಿ ಎಂಬ ಅಪಖ್ಯಾತಿಗೂ ಸಿದ್ದರಾಮಯ್ಯ ಭಾಜನರಾದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ