350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಸೈಟ್​​​ ಹಂಚಿಕೆ ಆರೋಪ: ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್

ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ನಿವೇಶನ ಹಂಚಿರುವ ವಿಚಾರವಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಸುದ್ದಿಯಲ್ಲಿದ್ದರೆ, ಮತ್ತೊಂದೆಡೆ ಪ್ರಭಾವಿ ಅಧಿಕಾರಿಗಳಿಗೆ ನಿವೇಶನ ಹಂಚಿಕೆ ಮಾಡಿರುವ ವಿಚಾರವೂ ಈಗ ಮುನ್ನೆಲೆಗೆ ಬಂದಿದೆ. ಪ್ರಕರಣ ಸಂಬಂಧ ಮುಡಾ ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ಇದೀಗ ನೋಟಿಸ್ ನೀಡಿದೆ.

350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಸೈಟ್​​​ ಹಂಚಿಕೆ ಆರೋಪ: ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್
ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್
Follow us
| Updated By: ಗಣಪತಿ ಶರ್ಮ

Updated on:Sep 10, 2024 | 9:04 AM

ಮೈಸೂರು, ಸೆಪ್ಟೆಂಬರ್ 10: 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣದಲ್ಲಿ ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್​​​​​​​ ನೀಡಿದೆ. ಮುಡಾ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಮೈಸೂರು ತಾಲೂಕಿನ ಹಿನಕಲ್​ ಗ್ರಾ.ಪಂ. ವ್ಯಾಪ್ತಿಯಲ್ಲಿ ಸೈಟ್ ಹಂಚಿಕೆ ಮಾಡಲಾಗಿತ್ತು. ಹಿನಕಲ್ ಸರ್ವೇ ನಂಬರ್ 89ರಲ್ಲಿ ಅಧಿಕಾರಿಗಳಿಗೆ ನಿವೇಶನ ಹಂಚಿಕೆ ಮಾಡಲಾಗಿತ್ತು. ಮುಡಾದ 7.18 ಗುಂಟೆ ಜಮೀನಿನಲ್ಲಿ ನಿವೇಶನ‌ ಮಾಡಿ 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಹಂಚಿರುವ ಆರೋಪ ಕೇಳಿಬಂದಿದೆ.

ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿ ಆರ್​ಟಿಐ ಕಾರ್ಯಕರ್ತ ಗಂಗರಾಜು 2017ರಲ್ಲಿ ದೂರು ನೀಡಿದ್ದರು. ಈ ಸಂಬಂಧ 2022ರಲ್ಲಿ ಮೈಸೂರು ಲೋಕಾಯುಕ್ತ ಪ್ರಕರಣ ದಾಖಲಿಸಿಕೊಂಡಿತ್ತು. ಸರ್ಕಾರದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಆರ್​ಟಿಐ ಕಾರ್ಯಕರ್ತ ಗಂಗರಾಜು ಮಾಡಿದ್ದ ಆರೋಪವೇನು?

ಮೈಸೂರು ತಾಲ್ಲೂಕು ಹಿನಕಲ್ ಗ್ರಾಮ ಸರ್ವೆ ನಂ.89ರಲ್ಲಿ 7 ಎಕರೆ 18 ಗುಂಟೆ ಜಮೀನನ್ನು ಹಿನಕಲ್ ಮಂಡಲ ಪಂಚಾಯ್ತಿಯವರು ಆಶ್ರಯ ಯೋಜನೆಯಡಿಯಲ್ಲಿ ಅನಧಿಕೃತ ಬಡಾವಣೆ ನಿರ್ಮಿಸಿ / ಉಳ್ಳವರಿಗೆ ರಾಜಕೀಯ ವ್ಯಕ್ತಿಗಳಿಗೆ ಹಂಚಿಕೆ ಮಾಡಿ ವಂಚಿಸಿದ ಬಗ್ಗೆ ದಿನಾಂಕ 01.04.2017 ರಂದು ನಾನು ತಮ್ಮ ಕಛೇರಿಗೆ ದೂರು ನೀಡಿದ್ದೆ. ಇದು ದೃಢಪಟ್ಟಿರುವುದರಿಂದ ಸಂಬಂಧಪಟ್ಟವರ ವಿರುದ್ಧ ಕ್ರಮಕ್ಕಾಗಿ ಮನವಿ ಸಲ್ಲಿಸುತ್ತಿದ್ದೇನೆ ಎಂದು 2017ರಲ್ಲಿ ಆರ್​ಟಿಐ ಕಾರ್ಯಕರ್ತ ಗಂಗರಾಜು ಭ್ರಷ್ಟಾಚಾರ ನಿಗ್ರಹ ದಳದ ಮೈಸೂರು ಜಿಲ್ಲಾ ವ್ಯಾಪ್ತಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೂ ಪತ್ರ ಬರೆದಿದ್ದರು.

ಸರ್ವೆ ನಂ.89ರಲ್ಲಿ 7 ಎಕರೆ 18 ಗುಂಟೆ ಮುಡಾ ಪ್ರಾಧಿಕಾರದ ಸ್ವತ್ತಿನಲ್ಲಿ ಅಕ್ರಮವಾಗಿ ಮುಡಾ ಅನುಮತಿಯನ್ನು ಪಡೆಯದೇ ಬಡಾವಣೆಯನ್ನು ನಿರ್ಮಿಸಿ ಆಶ್ರಯ ಯೋಜನೆ ಫಲಾನುಭವಿಗಳಿಗೆ ಹಂಚಿಕೆ ಮಾಡುತ್ತೇವೆಂದು ಸದರಿ ಹಿನಕಲ್ ಮಂಡಲ ಪಂಚಾಯ್ತಿಯ ಅಧ್ಯಕ್ಷರು, ಕಾರ್ಯದರ್ಶಿಗಳು (ಪ್ರಧಾನರು) 1990-92ನೇ ಅವಧಿಯಲ್ಲಿ ಇದ್ದಂತಹ ಪಂಚಾಯ್ತಿಯ ಸರ್ವಸದಸ್ಯರುಗಳು ಹಾಗೂ ಈ ಮೇಲ್ಕಂಡ ವಿಷಯಕ್ಕೆ ಸಂಬಂಧಪಟ್ಟಂತೆ ನಿರ್ಧಾರ ತೆಗೆದುಕೊಳ್ಳುವ ಸಮಯದಲ್ಲಿ ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಸಹಕರಿಸಿದ ಎಲ್ಲಾ ಅಧಿಕಾರಿವರ್ಗದವರ ವಿರುದ್ದ ಕ್ರಮ ತೆಗೆದುಕೊಳ್ಳಲು ತಮ್ಮ ಕಛೇರಿಗೆ ಮನವಿ ಸಲ್ಲಿಸಿದ್ದೆ. ಇದು ದೃಢವಾಗಿರುವದರಿಂದ ಮುಡಾ ಪ್ರಾಧಿಕಾರವು ಈ ಮೇಲ್ಕಂಡ ಸ್ವತ್ತನ್ನು ಭೂ ಮಾಲೀಕರಿಂದ ಭೂಸ್ವಾಧೀನ ಮಾಡಿಕೊಳ್ಳುವ ಮುಂಚೆ ಯಾವ ಉದ್ದೇಶಕ್ಕೋಸ್ಕರ ಭೂಸ್ವಾಧೀನಕ್ಕೆ ಸರ್ಕಾರಕ್ಕೆ ನಿವೇದಿಸಿಕೊಂಡಿದ್ದರೊ ಆ ಉದ್ದೇಶವನ್ನು ಜನರಿಗೆ ಈಡೇರಿಸದೆ ವಂಚಿಸಿದೆ. ಹೀಗೆ ವಂಚಿಸಿರುವ ಅಂದಿನ ಹಾಗೂ ಈ ವಿಷಯಕ್ಕೆ ಸಂಬಂಧಪಟ್ಟಂತೆ ಹಲವಾರು ಬಾರಿ ಮುಡಾ ಪ್ರಾಧಿಕಾರಕ್ಕೂ ಸಹ ನಾನು ವಿನಂತಿಸಿಕೊಂಡಿದ್ದರೂ ಸದರಿಯವರು ಯಾವುದೇ ಕ್ರಮವಹಿಸಲು ಮುಂದಾಗದೆ ಕರ್ತವ್ಯ ಲೋಪ ಎಸಗಿರುವ ಎಲ್ಲಾ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ ಎಂದು ಗಂಗರಾಜು ಪತ್ರದಲ್ಲಿ ಉಲ್ಲೇಖಿಸಿದ್ದರು.

ಇದನ್ನೂ ಓದಿ: ಸರ್ಕಾರ ಅಭದ್ರವಾಗುವ ಸಾಧ್ಯತೆ: ಅಧ್ಯಕ್ಷ ಖರ್ಗೆಗೆ ಸ್ಫೋಟಕ ಪತ್ರ ಬರೆದ ಕಾಂಗ್ರೆಸ್​​ ಎಂಎಲ್​ಸಿಗಳು

ಇದೇ ರೀತಿ ಮೈಸೂರು ನಗರದಲ್ಲಿ ಮೈಸೂರು ಜನರಿಗೋಸ್ಕರ ಬಡಾವಣೆ ನಿರ್ಮಿಸಿ ಹಾಗೂ ಉದ್ಯಾನವನ ಮತ್ತು ಇನ್ನಿತರ ಸಾರ್ವಜನಿಕರಿಗೋಸ್ಕರ ಸೌಲಭ್ಯ ನೀಡಲು ನೂರಾರು ಎಕರೆ ಭೂಮಿಯನ್ನು ಭೂಸ್ವಾಧೀನ ಮಾಡಿಕೊಂಡಿದ್ದು, ಆದರೆ ಯಾವ ಉದ್ದೇಶಕ್ಕೆ ಭೂಸ್ವಾಧೀನ ಮಾಡಿಕೊಂಡಿದ್ದಾರೋ ಅದನ್ನು ಯಥಾವತ್ತು ಜಾರಿ ಮಾಡಿ ಸಾರ್ವಜನಿಕರಿಗೆ ಹಂಚಿಕೆ ಮಾಡದೆ ವಂಚಿಸಿರುವುದು ಸಾಬೀತಾಗಿರುತ್ತದೆ. ಆದ್ದರಿಂದ ಈ ಮುಡಾ ಕರ್ಮಕಾಂಡಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶ ನೀಡಿ ಸರ್ವೆ ನಂಬರ್ 89ರಲ್ಲಿ ಒಟ್ಟು 11 ಎಕರೆ 18 ಗುಂಟೆಯನ್ನೂ ಸಹ ಅಕ್ರಮವಾಗಿ ಹಿನಕಲ್ ಮಂಡಲ ಪಂಚಾಯಿತಿಯ ಅಂದಿನ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ವಂಚಿಸಿರುತ್ತಾರೆ. ಈ ಮೇಲ್ಕಂಡ ವಿಷಯಕ್ಕೆ ಸಂಬಂಧಪಟ್ಟಂತೆ ಸ್ವಾಧೀನಪಡಿಸಿ ಕೊಂಡಿದ್ದಂತಹ ಸ್ವತ್ತಿನಲ್ಲಿ ಹಲವಾರು ಲ್ಯಾಂಡ್ ಮಾಫಿಯ ಹಾಗೂ ರಾಜಕೀಯ ಮುಖಂಡರು ಇಂತಹ ಭೂಮಿಯನ್ನು ಅಕ್ರಮವಾಗಿ ಖಾತೆ ಮಾಡಿಸಿಕೊಂಡು ಕಟ್ಟಡಗಳನ್ನು ನಿರ್ಮಿಸಿ ಹಾಗೂ ನಿವೇಶನಗಳನ್ನಾಗಿ ಮಾಡಿ ಹಂಚಿಕೆ ಮಾಡುತ್ತಿದ್ದರೂ ಸಹ ಸಂಬಂಧಪಟ್ಟ ಮುಡಾ ಅಧಿಕಾರಿಗಳು ಯಾವುದೇ ಕ್ರಮವಹಿಸದೆ ಕಣ್ಣು ಮುಚ್ಚಿ ಕುಳಿತಿರುತ್ತಾರೆ. ಹಾಗೂ ಈ ಅಕ್ರಮಕ್ಕೆ ಸದರಿ ಮುಡಾ ಅಧಿಕಾರಿಗಳೂ ಸಹ ಶಾಮಿಲಾಗಿರುತ್ತಾರೆ. ಇದಕ್ಕೆ ನಿದರ್ಶನವೆಂಬಂತೆ ಈ ಮೇಲ್ಕಂಡ ಹೆಸರಿಸಿರುವ ಇರುವ ಸರ್ವೆ ನಂಬರ್‌ನಲ್ಲಿ 7 ಎಕರೆ 18 ಗುಂಟೆ ಸ್ವತ್ತೇ ಸಾಕ್ಷಿ ಎಂದು ಗಂಗರಾಜು ಪತ್ರದಲ್ಲಿ ಆರೋಪಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:56 am, Tue, 10 September 24

ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ