ಮುಡಾ ಹಗರಣ: ತನಿಖೆ ಮುಗಿದು ವರದಿ ಬರುವ ವರೆಗೆ ಆ ನಿವೇಶನಗಳು ನಮ್ಮದಲ್ಲವೆಂದ ಯತೀಂದ್ರ

ಮುಡಾ ಹಗರಣ ಪ್ರತಿಭಟಿಸಿ ಪ್ರತಿಪಕ್ಷಗಳ ಪ್ರತಿಭಟನೆಯ ಕಾವು ಜೋರಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಮುಡಾ ನಿವೇಶನ ಸಂಬಂಧ ಮಹತ್ವದ ಹೇಳಿಕೆ ನೀಡಿದ್ದಾರೆ. ತನಿಖೆಯಾಗಿ ವರದಿ ಬರುವವರೆಗೆ ಆ ನಿವೇಶನ ನಮ್ಮದಲ್ಲ ಎಂದು ಅವರು ಹೇಳಿದ್ದಾರೆ. ಅವರು ಹಾಗೆನ್ನಲು ಕಾರಣವೇನು? ಮುಂದಿನ ಕ್ರಮದ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ.

ಮುಡಾ ಹಗರಣ: ತನಿಖೆ ಮುಗಿದು ವರದಿ ಬರುವ ವರೆಗೆ ಆ ನಿವೇಶನಗಳು ನಮ್ಮದಲ್ಲವೆಂದ ಯತೀಂದ್ರ
ಸಿದ್ದರಾಮಯ್ಯ ಹಾಗೂ ಯತೀಂದ್ರ (ಸಂಗ್ರಹ ಚಿತ್ರ)Image Credit source: PTI
Follow us
| Updated By: ಗಣಪತಿ ಶರ್ಮ

Updated on: Aug 09, 2024 | 9:53 AM

ಮೈಸೂರು, ಆಗಸ್ಟ್ 9: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಜೆಡಿಎಸ್ ಹೋರಾಟ ತೀವ್ರಗೊಂಡಿದೆ. ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆಯೂ ನಡೆಯುತ್ತಿದೆ. ಈ ಮಧ್ಯೆ, ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖೆ ನಡೆದು ವರದಿ ಬರುವವರೆಗೂ ಆ ನಿವೇಶನಗಳು ನಮ್ಮದಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆ ಸಂಬಂಧ ನ್ಯಾಯಾಂಗ ತನಿಖೆ ಆಗುತ್ತಿದೆ. ಈಗಾಗಲೇ ಮುಡಾ ಸೈಟ್​​ ವಾಪಸ್ ಕೊಡುವ ಬಗ್ಗೆ ಹೇಳಾಗಿದೆ. 2005 ರಿಂದ ಯಾರಿಗೆಲ್ಲಾ ನಿವೇಶನ ಕೊಟ್ಟಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಅದರ ಅರ್ಥ ನಮಗೆ ಕೊಟ್ಟಿರುವ ನಿವೇಶನವೂ ರದ್ದಾಗಿದೆ ಎಂಬುದು. ಈಗ ಆ ನಿವೇಶನಗಳು ನಮ್ಮ ಸುಪರ್ದಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ.

ನ್ಯಾಯಾಂಗ ತನಿಖೆ ನಡೆದು ವರದಿ ಬರುವವರೆಗೂ ಸೈಟ್ ನಮ್ಮದಲ್ಲ. ತನಿಖೆ ಮಾಡಿ ನಮ್ಮದು ಎಂದರೆ ನಿವೇಶನ ನಮಗೆ ಕೊಡುತ್ತಾರೆ. ಇಲ್ಲದಿದ್ದರೆ ಕುಟುಂಬದವರು ನ್ಯಾಯಾಲಯದ ಮೊರೆ ಹೋಗುತ್ತೇವೆ. ನಮ್ಮ ತಂದೆ ಭ್ರಷ್ಟಾಚಾರ ಮಾಡಿದ್ದಾರೆಂದು ಬಿಂಬಿಸುವುದು ಸರಿಯಲ್ಲ ಎಂದು ಯತೀಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ಜನಾಂದೋಲನ, ಬಿಜೆಪಿ-ಜೆಡಿಎಸ್ ಸಮಾವೇಶ: ಅಪರೂಪದ ರಾಜಕೀಯ ವಿದ್ಯಮಾನಕ್ಕೆ ಸಾಕ್ಷಿಯಾದ ಮೈಸೂರು

ಈ ಮಧ್ಯೆ, ಬಿಜೆಪಿ ಜೆಡಿಎಸ್ ಪಾದಯಾತ್ರೆ 7ನೇ ದಿನಕ್ಕೆ ಕಾಲಿಟ್ಟಿದೆ. ಒಂದೆಡೆ ಪಾದಯಾತ್ರೆ ಮೈಸೂರಿನ ಬಳಿ ಸಮೀಪಿಸುತ್ತಿದ್ದಂತೆಯೇ ಅತ್ತ ಕಾಂಗ್ರೆಸ್ ಜನಾಂದೋಲನ ಸಮಾವೇಶ ಆಯೋಜಿಸಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಗಣ್ಯರು ಸಮಾವೇಶದಲ್ಲಿ ಭಾಗವಹಿಸುತ್ತಿದ್ದು, ಪ್ರತಿಪಕ್ಷಗಳ ಆರೋಪಗಳಿಗೆ ಕೌಂಟರ್ ಕೊಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ