AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣದ ಮತ್ತಷ್ಟು ಕರ್ಮಕಾಂಡ ಬಯಲು: ಒಬ್ಬನೇ ವ್ಯಕ್ತಿಗೆ 30ಕ್ಕೂ ಹೆಚ್ಚು ಸೈಟ್​ ಹಂಚಿಕೆ, ಇಡಿ ತನಿಖೆಯಲ್ಲಿ ಪತ್ತೆ

ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಮುಡಾ ಹಗರಣ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ. ಈ ಸಂಬಂಧ ಇ.ಡಿ ಇತ್ತೀಚೆಗೆ 160 ಆಸ್ತಿ ಮುಟ್ಟುಗೋಲು ಹಾಕಿತ್ತು. ಸದ್ಯ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆ ಆಗಿವೆ. ಒಬ್ಬನೇ ವ್ಯಕ್ತಿಗೆ ಅಕ್ರಮವಾಗಿ 30ಕ್ಕೂ ಹೆಚ್ಚು ನಿವೇಶನ ಕೊಟ್ಟಿರುವುದನ್ನು ಇ.ಡಿ ಪತ್ತೆ ಹಚ್ಚಿದೆ.

ಮುಡಾ ಹಗರಣದ ಮತ್ತಷ್ಟು ಕರ್ಮಕಾಂಡ ಬಯಲು: ಒಬ್ಬನೇ ವ್ಯಕ್ತಿಗೆ 30ಕ್ಕೂ ಹೆಚ್ಚು ಸೈಟ್​ ಹಂಚಿಕೆ, ಇಡಿ ತನಿಖೆಯಲ್ಲಿ ಪತ್ತೆ
ಮುಡಾ ಹಗರಣ
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 09, 2025 | 11:15 AM

Share

ಮೈಸೂರು, ಜುಲೈ 09: ಮುಡಾ ಪ್ರಕರಣಕ್ಕೆ (muda scam) ಸಂಬಂಧಿಸಿದಂತೆ ಈ ಹಿಂದೆ ಜಾರಿ ನಿರ್ದೇಶನಾಲಯ (ED) 300 ಕೋಟಿ ರೂ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿತ್ತು. ಈ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಬಹಿರಂಗವಾಗಿರಲಿಲ್ಲ. ಆದರೆ ಇದೀಗ ಮುಟ್ಟುಗೋಲು ಹಾಕಿದ ಪಟ್ಟಿಯನ್ನು ಮೈಸೂರು ಅಭಿವೃದ್ಧಿ ಪ್ರಾಧಿಕಾರ ಸೇರಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಇ.ಡಿ ರವಾನೆ ಮಾಡಿದೆ. ಇ.ಡಿ ಬಿಡುಗಡೆ ಮಾಡಿದ ಮೂರನೇ ಪಟ್ಟಿ ಟಿವಿ9ಗೆ ಲಭ್ಯವಾಗಿದ್ದು, ಒಬ್ಬನೇ ವ್ಯಕ್ತಿಗೆ ಅಕ್ರಮವಾಗಿ 30 ರಿಂದ 40 ನಿವೇಶನಗಳು ಕೊಟ್ಟಿರುವುದು ಪತ್ತೆ ಆಗಿದೆ. ಆ ಮೂಲಕ ಮುಡಾ ಪ್ರಕರಣದ ಮತ್ತಷ್ಟು ಕರ್ಮಕಾಂಡ ಬಯಲಾಗಿದೆ.

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ. ಮುಡಾ ಸೈಟ್​ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆ ನಡೆಸಿ ಇತ್ತೀಚೆಗೆ 300 ಕೋಟಿ ರೂ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿತ್ತು. ಸದ್ಯ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆ ಆಗಿದೆ.

ಒಬ್ಬ ವ್ಯಕ್ತಿಗೆ ಅಕ್ರಮವಾಗಿ 30ಕ್ಕೂ ಹೆಚ್ಚು ನಿವೇಶನ ಹಂಚಿಕೆ ಪತ್ತೆ

ಇ.ಡಿ ಬಿಡುಗಡೆ ಮಾಡಿದ ಮೂರನೇ ಪಟ್ಟಿ ಪ್ರಕಾರ ಒಬ್ಬನೇ ವ್ಯಕ್ತಿಗೆ ಅಕ್ರಮವಾಗಿ 30 ರಿಂದ 40 ನಿವೇಶನಗಳನ್ನು ಕೊಟ್ಟಿರುವುದನ್ನು ಇ.ಡಿ ಪತ್ತೆ ಹಚ್ಚಿದೆ. ಮೈಸೂರಿನ ಹೆಸರಾಂತ ಚರ್ಚ್ ಕ್ಯಾಥೆಡ್ರಲ್ ಪರೀಷ್ ಸೊಸೈಟಿ ಒಂದಕ್ಕೆ ನೀಡಿದ್ದ 40 ಸೈಟ್​ಗಳನ್ನು ಮುಟ್ಟುಗೋಲು ಹಾಕಲಾಗಿದೆ.

ಇದನ್ನೂ ಓದಿ
Image
ಮುಡಾ ಹಗರಣ: ಕೋರ್ಟ್ ಮೆಟ್ಟಿಲೇರಿದ​ ಇಡಿ, ಸಿದ್ದರಾಮಯ್ಯಗೆ ಢವ ಢವ
Image
ಮುಡಾ ಹಗರಣ: ‘‘ಹಲವು ದಾಖಲೆಗಳನ್ನು ನೀಡಿದ್ದೇ ಕಾಂಗ್ರೆಸ್ ಪಕ್ಷದವರು!’’
Image
ಮುಡಾ ಹಗರಣ: ಸಿದ್ದರಾಮಯ್ಯಗೆ ಬಿಗ್​ ರಿಲೀಫ್​​
Image
ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ಇಡಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ

ಇದನ್ನೂ ಓದಿ: ಮುಡಾದಲ್ಲಿ ಅಕ್ರಮ ದೃಢ: 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

7 ನೇ ವಯಸ್ಸಿನಲ್ಲಿ ಭೂಮಿ ಕಳೆದುಕೊಂಡಿದ್ದೇನೆ ಎಂದು ಅರ್ಜಿ ಹಾಕಿದ್ದ ಅಬ್ದುಲ್ ವಾಹಿದ್ ಎಂಬಾತನಿಗೆ ನೀಡಿದ್ದ 41 ಸೈಟ್​ಗಳನ್ನು ಇ.ಡಿ ವಶಕ್ಕೆ ಪಡೆದುಕೊಂಡಿದೆ. ಅಲ್ಲದೆ ಕುವೆಂಪು ನಗರದ ರವಿಕುಮಾರ್, ಸುಜಾತ, ಮಹೇಶ್ ಹಾಗೂ ರಾಜು ಕುಟುಂಬಕ್ಕೆ ನೀಡಿದ್ದ 31 ನಿವೇಶನಗಳು ಮತ್ತು ಪ್ರತಿಷ್ಠಿತ ಆಂದೋಲನ ವೃತ್ತದ ಬಳಿ ಹಲವರಿಗೆ ನೀಡಿದ್ದ 48 ಬೇನಾಮಿ ಸೈಟ್​ಗಳನ್ನು ಇಡಿ ಮುಟ್ಟುಗೋಲು ಹಾಕಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಕೋರ್ಟ್, ವಾದ-ಪ್ರತಿವಾದ ವಿವರ ಇಲ್ಲಿದೆ

ಇನ್ನು ನಗರದ ಹೃದಯ ಭಾಗದಲ್ಲೇ ಮುಡಾ ಕೈತಪ್ಪಿ ಹೋಗುತ್ತಿದ್ದ ಜಾಗವನ್ನು ಇ.ಡಿ ಸೀಜ್ ಮಾಡಿದೆ. ಕುವೆಂಪು ನಗರ, ದಟ್ಟಗಳ್ಳಿ, ಆಂದೋಲನ ವೃತ್ತ, ವಿಜಯ ನಗರ, ಜೆ.ಪಿ.ನಗರ, ದೇವನೂರು ಬಡಾವಣೆ ಆರ್.ಟಿ.ನಗರಗಳಲ್ಲಿ ಬೇನಾಮಿಯಾಗಿ ಸೈಟ್‌ಗಳು ನೀಡಲಾಗಿತ್ತು. ಇವುಗಳಲಿಂದಲೇ ಮುಡಾಗೆ ಸುಮಾರು 500 ಕೋಟಿ ರೂ ನಷ್ಟ ಸಾಧ್ಯತೆ ಎನ್ನಲಾಗಿದೆ. ಸದ್ಯ ಪಟ್ಟಿಯಲ್ಲಿರುವ ಯಾವುದೇ ನಿವೇಶನದ ಪರಭಾರೆ ಮಾಡದಂತೆ ತಡೆ‌ ನೀಡಲಾಗಿದೆ.

ಸಂಚಲನ ಸೃಷ್ಟಿಸಿದ್ದ ಪ್ರಕರಣ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿಬಂದಿತ್ತು. ಸಿಎಂ ಪತ್ನಿ ಪಾರ್ವತಿಗೆ ಮುಡಾ 14 ಸೈಟ್​ಗಳನ್ನು ಅಕ್ರಮವಾಗಿ ನೀಡಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ನಂತರ ಇಡಿ ಕೂಡ ಪ್ರಕರಣ ದಾಖಲಿಸಿತ್ತು. ಅದಾದ ಬಳಿಕ ಪ್ರಕರಣ ದೊಡ್ಡ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ ಪತ್ನಿ ಪಾರ್ವತಿ ಸೈಟ್​ಗಳನ್ನು ಮುಡಾಕ್ಕೆ ವಾಪಸ್ ನೀಡಿದ್ದರು. ಉಳಿದಂತೆ, ಮುಡಾ ಹಗರಣದಲ್ಲಿನ ಹಣಕಾಸು ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಅಕ್ರಮವಾಗಿ ಹಂಚಿಕೆಯಾದ ಸೈಟ್​​ಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಸದ್ಯ ಇಡಿ ತನಿಖೆ ಪ್ರಗತಿಯಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:45 am, Wed, 9 July 25