Mysore Dasara 2023: ಮೈಸೂರು ದಸರಾಗೆ ಚಾಲನೆ, ಹಂಸಲೇಖ ಉದ್ಘಾಟನಾ ಭಾಷಣದ ಮುಖ್ಯಾಂಶಗಳು

ಚಾಮುಂಡಿಬೆಟ್ಟದಲ್ಲಿ, ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವವಿಖ್ಯಾತ ಮೈಸೂರು ದಸರಾಗೆ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದರು.

Mysore Dasara 2023: ಮೈಸೂರು ದಸರಾಗೆ ಚಾಲನೆ, ಹಂಸಲೇಖ ಉದ್ಘಾಟನಾ ಭಾಷಣದ ಮುಖ್ಯಾಂಶಗಳು
ಮೈಸೂರು ದಸರಾಗೆ ಚಾಲನೆ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Oct 15, 2023 | 11:19 AM

ಮೈಸೂರು ಅ.15: ನಾಡಹಬ್ಬ, ವಿಶ್ವವಿಖ್ಯಾತ ಮೈಸೂರು ದಸರಾಗೆ (Mysore Dasara) ಸಂಗೀತ ನಿರ್ದೇಶಕ ಹಂಸಲೇಖ (Hamsaleka) ಅವರು ಚಾಲನೆ ನೀಡಿದ್ದಾರೆ. ಚಾಮುಂಡಿಬೆಟ್ಟದಲ್ಲಿ, ಚಾಮುಂಡೇಶ್ವರಿ (Chamundeshwari) ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಹೆ​.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ವೆಂಕಟೇಶ್, ಮುನಿಯಪ್ಪ ಶಿವರಾಜ್ ತಂಗಡಗಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿಟಿ ದೇವೇಗೌಡ, ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಶ್ರೀವತ್ಸ, ಹರೀಶ್ ಗೌಡ, ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಮೇಯರ್ ಶಿವಕುಮಾರ್​ ಉಪಸ್ಥಿತರಿದ್ದರು.

ಉದ್ಘಾಟನೆ ಬಳಿಕ ಮಾತನಾಡಿದ ಅವರು ಕರ್ನಾಟಕ ಏಕೀಕರಣವಾಗಿ ಐವತ್ತುವರ್ಷವಾಯಿತು. ಹೀಗಾಗಿ ಕರ್ನಾಟಕ ಐದಶ ಅಂತಾ ಕರೆಯೋಣ. ಕರ್ನಾಟಕದ ಐದಶದ ಜೊತೆಗೆ ನನ್ನ ಕಲಾ ಕಾಯಕಲ್ಪಕ್ಕೂ 50 ವರ್ಷವಾಗಿದೆ. ಈ ನನ್ನ ಐದಶದಲ್ಲಿ ಸಿಕ್ಕಿದ ಈ ಅವಕಾಶ  ಬಹಳ ಬೆಲೆ ಬಾಳುವಂತಹದ್ದು. ಈ ಅವಕಾಶ ನಿರಾಯಾಸವಾಗಿ ಬಂದಿಲ್ಲ. ಇದಕ್ಕಾಗಿ ಸಾವಿರ ಮೆಟ್ಟಿಲು ಹತ್ತಿ ಬಂದಿದ್ದೇನೆ ಎಂದು ನಾದಬ್ರಹ್ಮ ಹಂಸಲೇಖ ಹೇಳಿದರು.

ಮೈಸೂರು ದಸರಾ ಚಾಲನೆ ನೀಡಲು ನನಗೆ ಅವಕಾಶ ನೀಡಿದ್ದಕ್ಕೆ ಯಾರನ್ನು ಮೊದಲು ನೆನೆಯಲಿ? ಅಪ್ಪ ಗೋವಿಂದರಾಜ ಮಾನೆ, ಅಮ್ಮ ರಾಜಮ್ಮ ಗುರು ನೀಲಕಂಠ ಅಥವಾ ನಾದ ನಾಟಕರಂಗ? ಸರ್ಕಾರ ಅಥವಾ ಸಂವಿಧಾನವನ್ನೇ? ಸಂವಿಧಾನದ ಧ್ವನಿ ಸಿದ್ದರಾಮಯ್ಯ ಅವರನ್ನೇ ? ಪ್ರಬಲ ಶಕ್ತಿ ಸಂಘಟಕ ಡಿಸಿಎಂ ಕ ಡಿ ಕೆ ಶಿವಕುಮಾರ್, ನನ್ನ ಹೆಸರು ಸೂಚಿಸಿದ ಡಾ ಎಚ್ ಸಿ ಮಹದೇವಪ್ಪ ಅವರನ್ನೇ ?  ನನ್ನ ಹೆಂಡತಿ ಮಕ್ಕಳು ಅಭಿಮಾನಿಗಳನ್ನೇ ? ಅಥವಾ ಭೂಮಿ ತಾಯಿಯನ್ನೇ ಯಾರು ಯಾರು ಅಂತ ನೆನೆಯಲ್ಲಿ ಎಂದು ಹೇಳುವ ಮೂಲಕ ಅವಕಾಶ ನೀಡಿದವರಿಗೆ ಧನ್ಯವಾದ ಹೇಳಿದರು.

ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾ ಸಾಂಸ್ಕೃತಿಕ ಉತ್ಸವ; ಸರೋದ್​ ವಾದಕ ಪಂ.ರಾಜೀವ್ ತಾರಾನಾಥ್ ಕಾರ್ಯಕ್ರಮ ನಿಗದಿ

ನಾನು ಈಗ ಕನ್ನಡದ ದೀಪ ಹಚ್ಚಿದ್ದೇನೆ. ಕನ್ನಡಿಗರ ಆಶಯದಂತೆ ದೀಪ ಹಚ್ಚಿದ್ದೇನೆ. ದಸರಾ ಎನ್ನುವುದು ಜೀವಂತ ಮಹಾಕಾವ್ಯ. ದಕ್ಷಿಣ ಭಾರತದ ವೀರರ ಕಥೆಯೆ ಈ ಮಹಾಕಾವ್ಯ, ವಿಜಯನಗರ ಮಹಾಸಾಮ್ರಾಜ್ಯದಿಂದ ಆರಂಭವಾಗಿದೆ. ದಸರಾ ಒಂದು ರೀತಿ ಕಥಾ ಕಣಜ. ಇದು ಮಹಾಕಾವ್ಯವಾಗಿ ಬೆಳಗಬೇಕು. ಕನ್ನಡ ನಮ್ಮ ಶೃತಿ ಆಗಬೇಕು, ಅಭಿವೃದ್ಧಿ ನಮ್ಮ ಕೃತಿ ಆಗಬೇಕು. ಕನ್ನಡದ ಭಾಷೆಗೆ ಮಿತಿ ಇದೆ. ಆದರೆ ಭಾವಕ್ಕೆ ಮಿತಿ ಎಲ್ಲಿದೆ? ನಮಗೆ ದೆಹಲಿ ಬೇಕು, ದೆಹಲಿಗೂ ನಾವು ಬೇಕು. ಆದರೆ ದೆಹಲಿಗೆ ಕನ್ನಡವೇ ಬೇಕಾಗುತ್ತಿಲ್ಲ ಇದಕ್ಕೆ ತಲೆ ಕೆಡಿಸಿ ಕೊಳ್ಳೋದು ಬೇಡ. ನಾವು ಕನ್ನಡವನ್ನು ಜಗತ್ತಿನಲ್ಲಿ ಮೆರೆಸಬೇಕಿದೆ. ಕರ್ನಾಟಕದ ಶಾಂತಿ ಸಮೃದ್ಧಿ ಕನ್ನಡಿಗರ ಮಂತ್ರ ಆಗಬೇಕು. ಕರ್ನಾಟಕದಲ್ಲಿ ವಾಸ ಮಾಡುವವರೆಲ್ಲಾ ಕನ್ನಡಿಗರು. ಯಾರಿಗೂ ಕನ್ನಡ ಮಾತಾಡಲು ಬರಲ್ಲ. ಯಾರಿಗೆ ಅರ್ಥವಾಗಲ್ಲ ಈ ಬಗ್ಗೆ ಒಂದು ಸಮೀಕ್ಷೆ ಆಗಬೇಕು. ಕಾರ್ಪೊರೇಟ್ ಸಂಸ್ಥೆ ಈ ಸಮೀಕ್ಷೆ ಮಾಡುತ್ತದೆ ಇದಕ್ಕೆ ಜನರ ಸಹಕಾರ ಇರಲಿ ಎಂದರು.

ನಮ್ಮ ಕಾವೇರಿಗೆ ಒಂದು ಮಿತಿಯಿದೆ, ಕನ್ನಡದ ಭಾಷೆಗೆ ಒಂದು ಮಿತಿಯಿದೆ. ಅದರ ಭಾವಕ್ಕೆ ಎಲ್ಲಿ ಮಿತಿಯಿದೆ ? ನಾಡಿಗೆ ಕನ್ನಡ ಮತ್ತು ಅಭಿವೃದ್ದಿ ಶಾಂತಿ ಮಂತ್ರ. ಹುಬ್ಬಳ್ಳಿ ಬೆಳಗಾವಿ ಜೋಡಿ ಆಗಬೇಕು, ಮಂಗಳೂರು ಮೈಸೂರು ಜೋಡಿ ಆಗಬೇಕು. ಈ ಎರಡು ಜಿಲ್ಲೆಗಳಲ್ಲಿ ವ್ಯಾಪಾರ ಇದೆ‌ ಸಂಪ್ರದಾಯಿತೆಯೂ ಇದೆ.

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:30 am, Sun, 15 October 23

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ