ಮೋದಿ ಪರ ಹಾಡು ಬರೆದಿದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ ಆರೋಪ: ದೂರು ದಾಖಲು

| Updated By: ರಮೇಶ್ ಬಿ. ಜವಳಗೇರಾ

Updated on: Apr 19, 2024 | 7:35 PM

ಶ್ರೀರಾಮನವಮಿ ಮುಗಿಸಿ ಕಾರಿನಲ್ಲಿ ಹೋಗುತ್ತಿದ್ದ ಯುವಕರನ್ನು ಮುಸ್ಲಿಂ ಯುವಕರು ಅಡ್ಡಗಟ್ಟಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಈ ಪ್ರಕರಣದ ಬೆನ್ನಲ್ಲೇ ಇದೀಗ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಹಾಡು ಬರೆದಿದಕ್ಕೆ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಮೋದಿ ಪರ ಹಾಡು ಬರೆದಿದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ ಆರೋಪ: ದೂರು ದಾಖಲು
ರೋಹಿತ್​, ಹಲ್ಲೆಗೊಳಗಾದ ಆರೋಪಿ
Follow us on

ಮೈಸೂರು, (ಏಪ್ರಿಲ್ 19): ಪ್ರಧಾನಿ ನರೇಂದ್ರ ಮೋದಿ (Narendra Modi) ಪರ ಹಾಡು ಬರೆದಿದಕ್ಕೆ ಯುವಕನ ಮೇಲೆ ಮುಸ್ಲಿಂ (Muslim) ಯುವಕರು ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಮೈಸೂರಿನ(Mysuru) ಸರ್ಕಾರಿ ಅತಿಥಿ ಗೃಹದ ಬಳಿ ರೋಹಿತ್ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ರೋಹಿತ್ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಅಲ್ಲದೇ ಪಾಕಿಸ್ತಾನ ಹಾಗೇ ಅಲ್ಲಾಹ ಪರ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ನರೇಂದ್ರ ಮೋದಿ ಹಾಡು ಮಾಡಿದ್ದೀಯಾ ನಿನ್ನ ಸಾಯಿಸುತ್ತೇವೆಂದು ಬೆದರಿಕೆ ಹಾಕಿದ್ದಾರೆ ಎಂದು ರೋಹಿತ್ ಆರೋಪಿಸಿದ್ದಾರೆ.

ರೋಹಿತನ ಬಟ್ಟೆ ಹರಿದು ದೈಹಿಕವಾಗಿ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇನ್ನು ಹಲ್ಲೆಗೊಳಗಾದ ಯುವಕ ನೇರವಾಗಿ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬಂದು ಘಟನೆ ಸಂಬಂಧ ದೂರು ನೀಡಿದ್ದು, ಬಳಿಕ ಪೊಲೀಸರೇ ಯುವಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ಘಟನೆ ಸಂಬಂಧ ರೋಹಿತ್ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾನೆ.

ಇದನ್ನೂ ಓದಿ: ಜೈ ಶ್ರೀರಾಮ್ ಎಂದಿದ್ದಕ್ಕೆ ಹಲ್ಲೆ: ಕಾರಿನಲ್ಲಿ ಹೋಗ್ತಿದ್ದವರನ್ನ ಅಡ್ಡಗಟ್ಟಿದ್ದ ಯುವಕರು ಅಂದರ್ 

ಕೊನೆಗೂ ಎಫ್​ಐಆರ್ ದಾಖಲು

ಇನ್ನು ರೋಹಿತ್ ದೂರಿನ ಮೇರೆಗೆ ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಸಲೀಂ ಜಾವೇದ್ ಪಾಷಾ ಹಾಗೂ ಪೊಲೀಸರ ಮುಂದೆ ರೋಹಿತ್ ಹೇಳಿದ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಇದೀಗ ಆರೋಪಿಗಳ ಬಂಧನಕ್ಕೆ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:35 pm, Fri, 19 April 24