ಮೈಸೂರು: ವಿದ್ಯುತ್ ತಂತಿ ತಗುಲಿ 20 ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶ

| Updated By: Rakesh Nayak Manchi

Updated on: Dec 20, 2022 | 9:34 AM

ವಿದ್ಯುತ್ ತಂತಿ ತಗುಲಿ 20 ಎಕರೆ ಜಮೀನಿನಲ್ಲಿದ್ದ ಕಬ್ಬ ಬೆಳೆ ನಾಶಗೊಂಡ ಘಟನೆ ಮೈಸೂರಿನಲ್ಲಿ ನಡೆದ್ದಿದ್ದು, ಭಾರೀ ಅನಾಹುತ ತಪ್ಪಿದೆ.

ಮೈಸೂರು: ವಿದ್ಯುತ್ ತಂತಿ ತಗುಲಿ 20 ಎಕರೆ ಕಬ್ಬು ಬೆಳೆ ಸಂಪೂರ್ಣ ನಾಶ
ಬೆಂಕಿ ಅವಘಡಕ್ಕೆ ನಾಶಗೊಂಡ ಕಬ್ಬು ಬೆಳೆ
Follow us on

ಮೈಸೂರು: ವಿದ್ಯುತ್ ತಂತಿ ತಗುಲಿ ಕಾಣಿಸಿಕೊಂಡ ಬೆಂಕಿಯ ಕಿನ್ನಾಲಿಗೆ ಸುಮಾರು 20 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಬೆಳೆ (Sugarcane crop) ಸಂಪೂರ್ಣ ನಾಶಗೊಂಡಿರುವ ಘಟನೆ ಜಿಲ್ಲೆಯ ಟಿ.ನರಸೀಪುರ (T.Narasipura) ತಾಲೂಕಿನ ಕುರುಬಾಳಹುಂಡಿ ಗ್ರಾಮದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಮತ್ತು ನಾಗ ಎಂಬುವರಿಗೆ ಸೇರಿದ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿದೆ. ಸುಮಾರು 50 ಲಕ್ಷ ರೂಪಾಯಿ ಖರ್ಚು ಮಾಡಿ 20 ಎಕರೆ ಜಮೀನಿನಲ್ಲಿ ಕಬ್ಬು ಬೆಳೆ ಬೆಳೆದಿದ್ದು, ಚೆನ್ನಾಗಿ ಬೆಳೆದು ಕಟಾವಿಗೂ ಬಂದಿತ್ತು. ಅದರಂತೆ ಕಾರ್ಮಿಕರು ಕಬ್ಬು ಕಟಾವು (Sugarcane harvesting) ಮಾಡುವುದರಲ್ಲಿ ನಿರತರಾಗಿದ್ದರು. ಅದೃಷ್ಟವಶಾತ್ ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ತಾಯಿ, ಮಗಳು ಹಾಗೂ ಮಗ ಸೇರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಳೆಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಸ್ಪರ್ಶವಾಗಿದ್ದು, ಇದೇ ವೇಳೆ ಜೋರಾಗಿ ಗಾಳಿ ಬೀಸಿದ ಪರಿಣಾಮ ಪಕ್ಕದ ಗದ್ದೆಗಳಿಗೂ ಬೆಂಕಿ ಆವರಿಸಿ ಹೆಚ್ಚಿನ ನಷ್ಟಕ್ಕೆ ಕಾರಣವಾಗಿದೆ. ರೈತ ಸುಬ್ರಮಣ್ಯ ಎಂಬುವರಿಗೆ ಸೇರಿದ 7ಎಕರೆ ಮತ್ತು ರೈತ ನಾಗ ಎಂಬುವರ 7ಎಕರೆ ಕಬ್ಬು ಬೆಳೆಗೆ ಬೆಂಕಿ ತಗುಲಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ತಲುಪಿಸಲಾಗಿದೆ. ಕೂಡಲೇ ಎರಡು ಅಗ್ನಿಶಾಮಕ ವಾಹದೊಂದಿಗೆ ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಬೆಂಕಿ ಬಂದಿಸಲು ಎಷ್ಟೇ ಯತ್ನಿಸಿದರೂ ಸಾಧ್ಯವಾಗಿಲ್ಲ.

ಇದನ್ನೂ ಓದಿ: ಮೈಸೂರು ಜಿಲ್ಲೆಯಲ್ಲಿ ನಿಲ್ಲದ ಚಿರತೆ ಹಾವಳಿ: ಕಬ್ಬಿನ ಗದ್ದೆಗೆ ನೀರು ಬಿಡಲು ಹೋದ ವ್ಯಕ್ತಿಯ ಮೇಲೆ ದಾಳಿ

ಬೆಂಕಿ ವೇಗವಾಗಿ ಹರಡಿದ ಹಿನ್ನೆಲೆ ಬೆಂಕಿ ಆರಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ವಿಫಲರಾಗಿದ್ದು, ಬೆಂಕಿಯ ಕೆನ್ನಾಲಿಗೆಗೆ ಕ್ಷಣ ಮಾತ್ರದಲ್ಲಿ ಕಬ್ಬು ಬೆಳೆ ಬೂದಿಯಾಗಿದೆ. ಸ್ಥಳದಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕರು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 am, Tue, 20 December 22