AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ಮೈಸೂರಿನಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ

ಮೈಸೂರಿನಲ್ಲಿ ಜನರ ಆತಂಕಕ್ಕೆ ಕಾರಣವಾಗಿದ್ದ ಮತ್ತೊಂದು ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಇನ್ನೊಂದೆಡೆ ಹಾವೇರಿಯಲ್ಲೂ ಚಿರತೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಜನರಲ್ಲಿ ಭಯ ಹುಟ್ಟಿಸಿದೆ.

Mysore News: ಮೈಸೂರಿನಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ
ಮೈಸೂರಿನಲ್ಲಿ ಸೆರೆಯಾದ ಚಿರತೆ ಮತ್ತು ಹಾವೇರಿಯಲ್ಲಿ ಪ್ರತ್ಯಕ್ಷಗೊಂಡಿರುವ ಚಿರತೆ
TV9 Web
| Edited By: |

Updated on:Dec 27, 2022 | 12:08 PM

Share

ಮೈಸೂರು: ಚಿರತೆಗಳ ವಿಪರೀತ ಹಾವಳಿ (Leopard menace in Mysore) ಇರುವ ಜಿಲ್ಲೆಗಳಲ್ಲೊಂದಾಗಿರುವ ಮೈಸೂರಿನಲ್ಲಿ ಮತ್ತೊಂದು ಚಿರತೆ ಬೋನಿಗೆ (Leopard falls into cage) ಬಿದ್ದಿದೆ. ಮೈಸೂರು ತಾಲೂಕಿನ ಕೀಳನಪುರ (Keelanapura) ಗ್ರಾಮದಲ್ಲಿ ಇಟ್ಟಿದ್ದ ಬೋನಿನೊಳಗೆ ಚಿರತೆ ಸೆರೆಯಾಗುವ ಮೂಲಕ ಗ್ರಾಮಸ್ಥರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 15 ದಿನಗಳಿಂದ ಗ್ರಾಮದ ಸುತ್ತ ಮುತ್ತ ಚಿರತೆ ಓಡಾಟ ನಡೆಸುತ್ತಿತ್ತು. ಮೂರು ದಿನಗಳ ಹಿಂದೆ ಕರು ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಇದರಿಂದಾಗಿ ಜನರು ಭೀತಿಗೊಳಲಾಗಿದ್ದರು. ಅಖಾಡಕ್ಕಿಳಿದ ಅರಣ್ಯಾಧಿಕಾರಿಗಳು ಅದೇ ಕರುವಿನ ಮೃತದೇಹವನ್ನು ಬೋನಿನಲ್ಲಿಟ್ಟು ಚಿರತೆ ಸೆರೆಗೆ ಕಾಯುತ್ತಿದ್ದರು. ಇದೀಗ ಕರು ಬಲಿ ಪಡೆದ ಚಿರತೆಯನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಸೆರೆಯಾದ ಚಿರತೆಗೆ ಸುಮಾರು 8 ವರ್ಷ ವಯಸ್ಸು ಆಗಿರಬಹುದು ಎಂದು ನಂಬಲಾಗಿದೆ. ಆರ್​ಎಫ್​​ಓ ಸುರೇಂದ್ರ, ಡಿಆರ್‌ಎಫ್‌ಓ ವಿಜಯಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಇದನ್ನೂ ಓದಿ: ಮಂಡ್ಯ: ಮನೆ ಮುಂದೆ ಕಟ್ಟಿಹಾಕಿದ್ದ ನಾಯಿಯನ್ನ ಹೊತ್ತೊಯ್ದ ಚಿರತೆ

ಕೂರಗುಂದ ಗ್ರಾಮದ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ

ಹಾವೇರಿ: ತಾಲುಕಿನ ಗುತ್ತಲ ಕೂರಗುಂದ ಬರಡಿ ಬಸಾಪುರ ಕನವಳ್ಳಿ ಕಾಟೆನಹಳ್ಳಿ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಚಿರತೆ ಭಯ ಕಾಡುತ್ತಿದೆ. ಗ್ರಾಮದ ಹೊರವಲಯದಲ್ಲಿ ಚಿರತೆ ಕಾಣಿಸಿ (Leopard Spotted)ಕೊಂಡಿದ್ದು, ಕೂರಗುಂದ ಗ್ರಾಮದ ತೋಟವೊಂದರಲ್ಲಿ ಆಕಳನ್ನು ತಿಂದುಹಾಕಿದೆ. ಅಲ್ಲದೆ, ಜಮೀನೊಂದರಲ್ಲಿ ಚಿರತೆ ರಾಜಾರೊಷವಾಗಿ ಸಂಚರಿಸುತ್ತಿರುವ ದೃಶ್ಯವನ್ನು ರೈತರೊಬ್ಬರು ಮೊಬೈಲ್ ಮೂಲಕ ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ಕಬ್ಬಿನ ಗದ್ದೆಯಲ್ಲಿ ಪತ್ತೆಯಾದ ಚಿರತೆ ಮರಿಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಿದ ರೈತ

ಇತ್ತಿಚೆಗೆ ಗಡ್ಡಿತಾಂಡ ಗ್ರಾಮದ ತೋಟದಲ್ಲಿ ಚಿರತೆಯೊಂದು ನಾಯಿ ಮೇಲೆ ದಾಳಿ ನಡೆಸಿ ಕೊಂದು ತಿಂದು ಹಾಕಿತ್ತು. ಈ ಎಲ್ಲಾ ಬೆಳವಣಿಗೆಗಳು ಸಹಜವಾಗಿ ಜನರಲ್ಲಿ ಆತಂಕ ಹೆಚ್ಚು ಮಾಡಿದೆ. ಹೀಗಾಗಿ ಕೂಡಲೇ ಚಿರತೆಯನ್ನ ಸೆರೆ ಹಿಡಿಯುವಂತೆ ಜನರು ಅರಣ್ಯಾಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Tue, 27 December 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?