ಮೈಸೂರು: ಬೈಕ್, ಲಾರಿ ನಡುವೆ ಅಪಘಾತ; ಬೈಕ್ನಲ್ಲಿದ್ದ ಇಬ್ಬರು ಸಾವು
ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ(Bike and Car Accident)ವಾಗಿದ್ದು, ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು(Nanjangud)ತಾಲೂಕಿನ ಮಲ್ಲಿಪುರ ಬಳಿ ನಡೆದಿದೆ. ಬೈಕ್ನಲ್ಲಿದ್ದ ಮಹೇಶ್(23), ಮಹೇಶ್(24) ಮೃತ ರ್ದುದೈವಿಗಳು.
ಮೈಸೂರು, ಡಿ.20: ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ(Bike and Car Accident)ವಾಗಿದ್ದು, ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು(Nanjangud)ತಾಲೂಕಿನ ಮಲ್ಲಿಪುರ ಬಳಿ ನಡೆದಿದೆ. ಬೈಕ್ನಲ್ಲಿದ್ದ ಮಹೇಶ್(23), ಮಹೇಶ್(24) ಮೃತ ರ್ದುದೈವಿಗಳು.ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಮಾಜಿ ಶಾಸಕ ಡಾ.ಯತೀಂದ್ರ ಅವರು ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ಕುರಿತು ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬೈಕ್ಗೆ ಕ್ರೊಸರ್ ವಾಹನ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಬಳಿ ಬೈಕ್ಗೆ ಕ್ರೊಸರ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ. ಸಿದ್ದಪ್ಪ ಜಂಗಣ್ಣವರ (52) ಸಾವನ್ನಪ್ಪಿದ ರ್ದುದೈವಿ. ಬೈಕ್ಗೆ ಡಿಕ್ಕಿ ಹೊಡೆದ ಕ್ರೂಸರ್, ಪೆಟ್ರೋಲ್ ಬಂಕ್ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಇದರಿಂದ ಕ್ರೊಸರ್ನಲ್ಲಿದ್ದ 15 ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅಮಿನಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಅಪಘಾತದಲ್ಲಿ ರೈತ ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್: ಕಾನ್ಸ್ಟೇಬಲ್ನಿಂದಲೇ ಹತ್ಯೆ!
ಲಾರಿ ಮತ್ತು ಸರ್ಕಾರಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ
ಯಾದಗಿರಿ: ಲಾರಿ ಮತ್ತು ಸರ್ಕಾರಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಬಸ್ನಲ್ಲಿದ್ದ 7 ಜನ ಪ್ರಯಾಣಿಕರಿಗೆ ಗಂಭೀರ ಗಾಯವಾದ ಘಟನೆ ಯಾದಗಿರಿ ತಾಲೂಕಿನ ಆಶನಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ನಡೆದಿದೆ. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಬಸ್ಗೆ ಗುದ್ದಿದ್ದ ಲಾರಿ ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಇನ್ನು ಯಾದಗಿರಿಯಿಂದ ಗುರುಮಠಕಲ್ ತಾಲೂಕಿನ ಚೆಲ್ಹೇರಿ ಗ್ರಾಮಕ್ಕೆ ಬಸ್ ಹೋಗುತ್ತಿತ್ತು. ಇತ್ತ ರಾಯಚೂರಿನಿಂದ ಯಾದಗಿರಿ ಕಡೆ ಬರ್ತಾಯಿದ್ದ ಲಾರಿ ಬಸ್ಗೆ ಗುದ್ದಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಹಾಗೂ ಯಾದಗಿರಿ ಎಸ್ ಪಿ ಜಿ.ಸಂಗೀತ ಭೇಟಿ ನೀಡಿದ್ದರು. ಶಾಸಕರು ಅಪಘಾತಕ್ಕಿಡಾದ ಬಸ್ನ ಪ್ರಯಾಣಿಕರನ್ನ ಬೇರೆ ಬಸ್ ವ್ಯವಸ್ಥೆ ಮಾಡಿ ಕಳುಹಿಸಿದರು. ಈ ಕುರಿತು ಯಾದಗಿರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‘
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ