Mysore News: ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

ಕಾರು ಪಲ್ಟಿಯಾಗಿ ಮೈಸೂರು ಬಿಜೆಪಿ ಮುಖಂಡ ಸ್ವಾಮಿಗೌಡ ಎನ್ನುವವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಊಟಿ ಬಳಿ ನಡೆದಿದ್ದು, ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

Mysore News: ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ಮೈಸೂರು ಬಿಜೆಪಿ ಮುಖಂಡ ಸ್ವಾಮಿಗೌಡ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Jun 09, 2023 | 7:49 AM

ಮೈಸೂರು: ಕಾರು ಪಲ್ಟಿಯಾಗಿ ಮೈಸೂರು ಬಿಜೆಪಿ(BJP) ಮುಖಂಡ ಸ್ವಾಮಿಗೌಡ ಎನ್ನುವವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಊಟಿ (Ooty) ಬಳಿ ನಡೆದಿದೆ. ಮೈಸೂರಿನ ಎನ್.ಆರ್ ಕ್ಷೇತ್ರದ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಯಾದ ಸ್ವಾಮಿಗೌಡ ಅವರು ಸ್ನೇಹಿತರ ಕುಟುಂಬದವರ ಜೊತೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ದುರಂತ ನಡೆದಿದ್ದು, ಸ್ವಾಮಿಗೌಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ನದಿಗೆ ಹಾರಿ ಆತ್ಮಹತ್ಯೆ

ಮೈಸೂರು: ಹುಣಸೂರು ನಗರದ ಬಳಿಯ ಲಕ್ಷ್ಮಣ ತೀರ್ಥ ನದಿಗೆ ಹಾರಿ ರಾಮಚಂದ್ರಪ್ಪ(65) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ವಿಶೇಷಚೇತನರಾಗಿದ್ದರು. ಹೌದು ರಾಮಚಂದ್ರಪ್ಪಗೆ ಮಾತು ಬರುತ್ತಿರಲಿಲ್ಲ. ಜೊತೆಗೆ ಇತ ಲೋಕೋಪಯೋಗಿ ಇಲಾಖೆಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡುತ್ತಿದ್ದ. ಇತ 3 ತಿಂಗಳಿಂದ ಕಿಡ್ನಿ ಸಮಸ್ಯೆಯಿಂದ ಕೂಡ ಬಳಲುತ್ತಿದ್ದ. ಇದೀಗ ನದಿಗೆ ಹಾರಿ ಸಾವನ್ನಪ್ಪಿದ್ದು, ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಪರಿಹಾರ ಧನ ಪಡೆಯಲು ರೈಲು ಅಪಘಾತದಲ್ಲಿ ಪತಿ ಸಾವಿಗೀಡಾಗಿದ್ದಾನೆ ಎಂದು ಸುಳ್ಳು ಹೇಳಿದ ಮಹಿಳೆ; ಗಂಡನಿಂದಲೇ ದೂರು

ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ: ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವು

ಬಾಗಲಕೋಟೆ: ಬೈಕ್​ಗೆ ಹಿಂಬದಿಯಿಂದ ಲಾರಿ ಡಿಕ್ಕಿ  ಹೊಡೆದ ಪರಿಣಾಮ ವೃದ್ಧೆ ಸೇರಿದಂತೆ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಹುನಗುಂದ ತಾಲೂಕಿನ ರಕ್ಕಸಗಿ ಬಳಿ ನಡೆದಿದೆ. ರಕ್ಕಸಗಿ ಗ್ರಾಮದ ನಿವಾಸಿಗಳಾದ ಶ್ರೀಕಾಂತ್ ಮಾದಾರ(39), ಶಾಂತವ್ವ ಕಟ್ಟಿಮನಿ(43), ಮಾಂತವ್ವ ಮುರಡಿ(75) ಮೃತರು. ಸ್ಥಳಕ್ಕೆ ಅಮೀನ್​ಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ, ಮೂವರು ಸಾವು

ಚಿತ್ರದುರ್ಗ: ತಾಲೂಕಿನ ಮಲ್ಲಾಪುರ ಬಳಿ ಲಾರಿಗೆ ಡಿಕ್ಕಿಯಾಗಿ ಌಂಬುಲೆನ್ಸ್​ನಲ್ಲಿದ್ದ ಮೂವರು ಮೃತಪಟ್ಟ ಘಟನೆ ನಡೆದಿದೆ. ಌಂಬುಲೆನ್ಸ್​ನಲ್ಲಿದ್ದ ಕನಕಮಣಿ(72), ಆಕಾಶ್(17), ಚಾಲಕ ಮೃತರು. ಮತ್ತಿಬ್ಬರಿಗೆ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗುಜರಾತ್​ನಿಂದ ತಮಿಳುನಾಡಿಗೆ ತೆರಳುತ್ತಿದ್ದ ಌಂಬುಲೆನ್ಸ್, ಅಹಮದಾಬಾದ್​ನಿಂದ ತಿರುನೆಲ್ವೇಲಿಗೆ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:48 am, Fri, 9 June 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ