ಮೈಸೂರು: ತಾಯಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣ, ಸಿಎಂ ಸಿದ್ದರಾಮಯ್ಯ ಆದೇಶ

ಮುಖ್ಯಮಂತ್ರಿಗಳು ಮೈಸೂರಿನ ನಾಡದೇವಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸಲು ಆದೇಶಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರ ಮನವಿಗೆ ಸ್ಪಂದಿಸಿ ಈ ಆದೇಶ ಹೊರಡಿಸಲಾಗಿದೆ. ಚಿನ್ನದ ರಥ ನಿರ್ಮಾಣಕ್ಕೆ ಅಗತ್ಯ ವೆಚ್ಚದ ಪ್ರಸ್ತಾವನೆ ಸಲ್ಲಿಸಲು ಕಂದಾಯ ಇಲಾಖೆಗೆ ಸೂಚಿಸಲಾಗಿದೆ. ಭಕ್ತರ ಕಾಣಿಕೆ ಮತ್ತು ಸರ್ಕಾರದ ನೆರವಿನೊಂದಿಗೆ ಈ ಯೋಜನೆ ಜಾರಿಗೆ ತರಲಾಗುವುದು.

ಮೈಸೂರು: ತಾಯಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣ, ಸಿಎಂ ಸಿದ್ದರಾಮಯ್ಯ ಆದೇಶ
ಮೈಸೂರು ಚಾಮುಂಡೇಶ್ವರಿ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Nov 25, 2024 | 11:06 AM

ಮೈಸೂರು, ನವೆಂಬರ್​ 25: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ (Mysore Chamundeshwari) ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಹಿನ್ನೆಲೆ ಸಿಎಂ ಈ ಆದೇಶ ಮಾಡಿದ್ದಾರೆ. ನಾಡದೇವಿಗೆ ಚಿನ್ನದ ರಥ ನಿರ್ಮಿಸಬೇಕು ಎಂಬ ಭಕ್ತರ, ಬೇಡಿಕೆಯನ್ನು ಅರಿತು, ಸಂಕಲ್ಪ ಮಾಡಿಕೊಂಡು ಪ್ರಯತ್ನಿಸಲಾಗಿತ್ತು. ಸಿಎಂ ಆದೇಶದಿಂದ ಈಗ ಆ ಪ್ರಯತ್ನದಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಂತಾಗಿದೆ.

ತಾಯಿ ಚಾಮುಂಡೇಶ್ವರಿ

ಚಾಮುಂಡೇಶ್ವರಿ ದೇವಿ ಕನ್ನಡ ನಾಡಿನ ಅಸ್ಮಿತೆ. ಕನ್ನಡಿಗರ ಧಾರ್ಮಿಕ ಪ್ರತಿನಿಧಿ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ, ದೇವಸ್ಥಾನಕ್ಕೆ, ದೇವಿಗೆ ಪೌರಾಣಿಕ, ಐತಿಹಾಸಿಕ ಹಿನ್ನೆಲೆ ಇದೆ. ಅದಕ್ಕಾಗಿಯೇ ಮೈಸೂರಿನಲ್ಲಿ ನಡೆಯುವ ದಸರಾವನ್ನು ನಾಡಹಬ್ಬ ಎಂದು ಕರೆಯಲಾಗುತ್ತದೆ. ಈ ನಾಡದೇವಿಯನ್ನು ಚಿನ್ನದ ರಥದಲ್ಲಿ ಕೂರಿಸಿ ಮೆರೆಸಬೇಕು ಎಂಬುದು ಭಕ್ತ ಕೋಟಿಯ ಬೇಡಿಕೆಯಾಗಿತ್ತು. ಈ ಹಿನ್ನೆಲೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದರು. ಚಿನ್ನದ ರಥ ನಿರ್ಮಾಣಕ್ಕೆ ಬೇಕಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರ ತಯಾರಿಸಬೇಕು. ದೇವಸ್ಥಾನದಲ್ಲಿ ಈ ಉದ್ದೇಶಕ್ಕೋಸ್ಕರ ಪ್ರತ್ಯೇಕ ಹುಂಡಿಯೊಂದನ್ನು ಇಡಬೇಕು. ಭಕ್ತರು ಅದರಲ್ಲಿ ಹಣ ಹಾಗೂ ಚಿನ್ನವನ್ನು ಹಾಕಲು ಅವಕಾಶ ನೀಡಬೇಕು. ಸಂಗ್ರಹಿತ ಕಾಣಿಕೆ ಹಣಕ್ಕಿಂತ ಹೆಚ್ಚಿಗೆ ಬೇಕಾಗುವ ಹಣವನ್ನು ಸರ್ಕಾರ ಭರಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಚಾಮುಂಡೇಶ್ವರಿ ಹಿನ್ನೆಲೆ?

ಪುರಾಣದ ದೇವಿ ಮಹಾತ್ಮೆಯಲ್ಲಿ ತಾಯಿ ಚಾಮುಂಡಿಯ ಪ್ರಸ್ತಾಪವಿದೆ. ಶಕ್ತಿ ದೇವತೆ ಬೆಟ್ಟದ ಮೇಲೆ ವಾಸವಾಗಿದ್ದ ಮಹಿಷಾಸುರನನ್ನು ವಧಿಸಿದಳೆಂಬ ಕಥೆ ‘ದೇವಿ ಮಹಾತ್ಮೆ’ಯಲ್ಲಿ ವರ್ಣಿತವಾಗಿದೆ ಶ್ರೀ ಚಾಮುಂಡೇಶ್ವರಿಯಿಂದಲೇ ಈ ಬೆಟ್ಟಕ್ಕೆ ಚಾಮುಂಡಿಬೆಟ್ಟವೆಂಬ ಹೆಸರು ಬಂದಿದೆ. ಸ್ಕಂದ ಪುರಾಣದಲ್ಲಿ ಎಂಟು ಬೆಟ್ಟಗಳಿಂದ ಸುತ್ತುವರಿದ ತ್ರಿಮುಕುಟ ಕ್ಷೇತ್ರವೆಂಬ ಪವಿತ್ರ ಕ್ಷೇತ್ರ ಉಲ್ಲೇಖಿತವಾಗಿದೆ. ಅವುಗಳಲ್ಲಿ ಪಶ್ಚಿಮ ಭಾಗದಲ್ಲಿರುವ ಚಾಮುಂಡಿಬೆಟ್ಟವೂ ಒಂದಾಗಿದೆ. ಚಾಮುಂಡಿಬೆಟ್ಟದಲ್ಲಿರುವ ಶ್ರೀ ಮಹಾಬಲೇಶ್ವರ ದೇವಸ್ಥಾನವು ಅತ್ಯಂತ ಪ್ರಾಚೀನವಾದುದು. ಹಿಂದೆ ಬೆಟ್ಟವನ್ನು ಮಹಾಬಲಾದ್ರಿ ಎಂದೂ ಸಹ ಕರೆಯಲಾಗುತ್ತಿತ್ತು. ಮುಖ್ಯ ದೇಗುಲದ ಗರ್ಭಗುಡಿಯಲ್ಲಿ ಮಹಿಷಮರ್ಧಿನಿಯಾದ ಚಾಮುಂಡೇಶ್ವರಿಯ ವಿಗ್ರಹವು ವಿರಾಜಮಾನವಾಗಿದೆ. ಎಂಟು ಭುಜಗಳನ್ನು ಹೊಂದಿರುವ ಚಾಮುಂಡೇಶ್ವರಿ ಇಲ್ಲಿ ಆಸೀನಳಾಗಿದ್ದಾಳೆ. ಈ ವಿಗ್ರಹವು ಬಹಳಷ್ಟು ಪುರಾತನವಾದದ್ದು. ಈ ಶಿಲಾಮೂರ್ತಿಯನ್ನು ಮಾರ್ಖಂಡೇಯ ಋಷಿಗಳು ಸ್ಥಾಪಿಸಿದರೆಂದು ಸ್ಥಳ ಪುರಾಣ ಹೇಳುತ್ತದೆ.

ಐತಿಹಾಸಿಕ ಹಿನ್ನೆಲೆ:

ಚಾಮುಂಡೇಶ್ವರಿ ದೇವಸ್ಥಾನಕ್ಕೆ 500 ವರ್ಷಕ್ಕೂ ಹೆಚ್ಚಿನ ಇತಿಹಾಸವಿದೆ. ಚಾಮುಂಡಿ ಬೆಟ್ಟದಲ್ಲಿ ಹಿಂದೆ ದೇವಿಯ ಚಿಕ್ಕದೊಂದು ದೇವಸ್ಥಾನವಿದ್ದು, ಕ್ರಮೇಣ ಅಭಿವೃದ್ಧಿ ಹೊಂದಿ, ಹೆಚ್ಚಿನ ಪ್ರಾಮುಖ್ಯತೆ ಗಳಿಸಿ, ಶ್ರೀ ಚಾಮುಂಡೇಶ್ವರಿ ಕ್ಷೇತ್ರವೆಂಬ ದೊಡ್ಡ ಧಾರ್ಮಿಕ ಕೇಂದ್ರವಾಗಿ ಅಭಿವೃದ್ಧಿಯಾಗಿದೆ ಎಂದು ತಿಳಿದುಬರುತ್ತದೆ. ಹಾಗೂ ದೇವಾಲಯವನ್ನು ಮುನ್ನೆಲೆಗೆ ತಂದಿದ್ದಾರೆ. ಚಾಮುಂಡಿ ಬೆಟ್ಟ ಅಭಿವೃದ್ಧಿಯಲ್ಲಿ ಹೊಯ್ಸಳ, ವಿಜಯನಗರ ಅರಸರ ಕೊಡುಗೆಯಿದೆ. 12ನೇ ಶತಮಾನದ ಹೊಯ್ಸಳ ದೊರೆ ವಿಷ್ಣುವರ್ಧನ ಹಾಗೂ 17ನೇ ಶತಮಾನದ ವಿಜಯನಗರದ ಅರಸರ ಹಿನ್ನೆಲೆಯನ್ನು ಗುರುತಿಸಲಾಗಿದೆ.

ಮೈಸೂರು ಅರಸರ ಕುಲದೇವತೆ

ಪ್ರಮುಖವಾಗಿ 1399 ರಲ್ಲಿ ಅಧಿಕಾರಕ್ಕೆ ಬಂದ ಮೈಸೂರು ಅರಸರು ಈ ದೇವಿ ಅರಾಧಕರಾಗಿದ್ದು, ಶ್ರದ್ಧಾ ಭಕ್ತಿಯಿಂದ ದೇವಸ್ಥಾನವನ್ನು, ಲೋಕ ಕಲ್ಯಾಣಾರ್ಥವಾಗಿ ಅಭಿವೃದ್ಧಿಪಡಿಸಿ ಅದನ್ನು ದೊಡ್ಡದಾದ ದೇವಾಲಯವನ್ನಾಗಿಸಿದ್ದಾರೆ. 1827 ರಲ್ಲಿ ಮುಮ್ಮಡಿ ಕೃಷ್ಣರಾಜಒಡೆಯರು ಸಾವಿರ ವರ್ಷಕ್ಕೂ ಹಿಂದಿನ ಹಿನ್ನಲೆಯಿರುವ ದೇವಸ್ಥಾನದ ಜೀರ್ಣೋದ್ಧಾರ ಮಾಡಿ ಮಹಾದ್ವಾರದ ಮೇಲೆ ಈ ದೊಡ್ಡ ಗೋಪುರವನ್ನು ಕಟ್ಟಿಸಿದರು ಎಂಬ ಇತಿಹಾಸವಿದೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಹೆಸರು ಬರುವುದಕ್ಕೂ ಮೊದಲು ಮೈಸೂರು ರಾಜ್ಯ ಎಂಬ ಹೆಸರಿತ್ತು. ಮೈಸೂರಿನ ಅಧಿದೇವತೆ ಚಾಮುಂಡಿ ನಾಡದೇವಿಯಾಗಿದ್ದಳು.

ಮೈಸೂರಿನ ದಸರಾ ನಾಡ ಹಬ್ಬವಾಗಿತ್ತು. ಹಾಗಾಗಿ ಕನ್ನಡ ನಾಡಿಗೂ ಮೈಸೂರಿನ ಚಾಮುಂಡಿಗೂ ಅವಿನಾಭಾವ ಸಂಬಂಧವಿದೆ. ಪೌರಾಣಿಕ, ಐತಿಹಾಸಿಕ ಹಿನ್ನೆಲೆ ಮಾತ್ರವಲ್ಲದೆ ಜನರು ಭಾವನಾತ್ಮಕವಾಗಿಯೂ, ಆಧ್ಯಾತ್ಮಿಕವಾಗಿಯೂ ಚಾಂಮುಂಡಿ ಬೆಟ್ಟದ ಜತೆ ಸಂಬಂಧವನ್ನು ಹೊಂದಿದ್ದಾರೆ. ಈ ದೇವಿಯ ದರ್ಶನಕ್ಕಾಗಿ ಬಹುದೂರದಿಂದ, ದೇಶವಿದೇಶಗಳಿಂದ ಭಕ್ತಾಧಿಗಳು ಬಂದು ತಮ್ಮ ಹರಕೆಗಳನ್ನು ಸಲ್ಲಿಸಿ ಇಷ್ಟಾರ್ಥಗಳನ್ನು ಹೊಂದುತ್ತಿರುತ್ತಾರೆ. ಈ ದೇವಿಯು ಹರಕೆ ದೇವತೆಯಾಗಿ ಆಗಮೋಕ್ತ ಪೂಜಾದಿ ಉತ್ಸವಗಳನ್ನು ಕೈಗೊಳ್ಳುತ್ತಾ ಪರ್ವತಾಗ್ರದಲ್ಲಿ ಕುಳಿತು ಭಕ್ತರ ಇಷ್ಟಾರ್ಥಗಳನ್ನು ನೆರವೇರಿಸುತ್ತಾ ಸರ್ವರನ್ನು ರಕ್ಷಿಸುತ್ತಿರುತ್ತಾಳೆ ಎಂಬುದು ಜನರ ನಂಬಿಕೆ.

ಚಾಮುಂಡಿ ರಥ

1827 ರಲ್ಲಿ ಮುಮ್ಮಡಿ ಕೃಷ್ಣರಾಜಒಡೆಯರು . ‘ಸಿಂಹವಾಹನ’ ರಥವನ್ನು ಒಂದನ್ನು ಮರದಲ್ಲಿ ನಿರ್ಮಿಸಿ ಕೊಡುಗೆ ನೀಡಿದರು. ‘ಸಿಂಹ ವಾಹನ’ ವನ್ನು ರಥೋತ್ಸವ ಸಂದರ್ಭದಲ್ಲಿ ಬಳಸಲಾಗುತ್ತಿದೆ. ಅದರಲ್ಲಿ ದೇವಿಯ ಉತ್ಸವ ಮೂರ್ತಿಯನ್ನಿಟ್ಟು ರಥವನ್ನು ಎಳೆಯಲಾಗುತ್ತದೆ. ಮುಮ್ಮಡಿ ಕೃಷ್ಣರಾಜಒಡೆಯರೇ ಮೂಲ ಮೂರ್ತಿಗೆ ಅನುಗುಣವಾಗಿ ಉತ್ಸವ ಮೂರ್ತಿಯನ್ನೂ ತಯಾರಿಸಿ ಶೈವಾಗಮದಲ್ಲಿ ನುರಿತ ದೀಕ್ಷಿತರನ್ನು ಕಂಚಿ ಕ್ಷೇತ್ರದಿಂದ ಕರೆ ತಂದು ಆಗಮೋಕ್ತವಾಗಿ ಪೂಜೆ ಸಲ್ಲಿಸುವಂತೆ ಮಾಡಿದರು ಎನ್ನುತ್ತದೆ ಇತಿಹಾಸ.

1928 ರಿಂದ ರಥೋತ್ಸವ ನಡೆಯುತ್ತ ಬಂತು ಎಂಬ ಇತಿಹಾಸವಿದೆ. ಆಶ್ವಯುಜ ಶುಕ್ಲ ಪೂರ್ಣಿಮೆಯ ಸಂದರ್ಭದಲ್ಲಿ ಪ್ರತಿ ವರ್ಷ ದೇವಿಯ ರಥಾರೋಹಣ ಮಾಡಿ, ರಥೋತ್ಸವ ನಡೆಸಲಾಗುತ್ತದೆ. ಈ ಸಂದರ್ಭದಲ್ಲಿ ಮಂಟಪೋತ್ಸವ, ಸಿಂಹವಾಹನೋತ್ಸವ, ಹಂಸವಾಹನೋತ್ಸವ ಮುಂತಾದ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ಹಾಗೂ ಬಹು ವಿಜೃಂಭಣೆಯಿಂದ ದೇವಸ್ಥಾನದ ಆವರಣದಲ್ಲಿ ಜರುಗುತ್ತವೆ.

ಸುವರ್ಣ ರಥ ಸಂಕಲ್ಪ:

ನಮ್ಮ ಶರೀರದ ಒಳಗಡೆ ಹೇಗೆ ಪರಮಾತ್ಮನಿರುತ್ತಾನೋ ಹಾಗೇ 24 ತತ್ವಗಳಿರುವ ರಥದಲ್ಲೂ ಪರಮಾತ್ಮ ನೆಲೆಸಿರುತ್ತಾನೆ ಎಂಬುದು ಹಿಂದು ಶ್ರದ್ಧಾಳುಗಳ ನಂಬಿಕೆಯಾಗಿದೆ. 1982 ಕೊಯಮುತ್ತೂರಿನ ಭಕ್ತಾದಿಗಳು ಈಗಿನ ಮರದ ರಥವನ್ನು ಮಾಡಿಸಿದರು ಎನ್ನಲಾಗುತ್ತದೆ. ಹಾಲಿ ರಥವೂ ಶಿಥಿಲವಾಗುತ್ತ ಬಂದಿವೆ. ಹಾಗಾಗಿ ಹೊಸ ಚಿನ್ನದ ರಥ ನಿರ್ಮಿಸಿ ಚಾಮುಂಡಿ ದೇವಿಯ ರಥೋತ್ಸವ ಮಾಡಬೇಕು ಎಂಬುದು ಭಕ್ತರ ಸಂಕಲ್ಪ. ದೇವಿಗೆ ಹೊಸ ಚಿನ್ನದ ರಥ ನಿರ್ಮಿಸುವ ಪ್ರಸ್ತಾವ ಈ ಹಿಂದೆಯೇ ಬಂದಿತ್ತು. ಅದಕ್ಕೆ ಸುಮಾರು 100 ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ, ವಿವಿಧ ಕಾರಣಗಳಿಂದ ಅದು ಈಡೇರಿರಲಿಲ್ಲ. ಚಿನ್ನದ ರಥ ಮಾಡಲು ಸರ್ಕಾರ ಹಣ ಹಣದ ಅವಶ್ಯಕತೆ ಜೊತೆಗೆ . ಭಕ್ತಾದಿಗಳು ದುಡ್ಡು ಮತ್ತು ಚಿನ್ನವನ್ನು ಹಾಕುತ್ತಾರೆ. ಅದಕ್ಕಾಗಿ ಹುಂಡಿಗಳನ್ನು ಪ್ರತಿಷ್ಠಾಪಿಸಬೇಕು. ಮುಂದಿನ ದಸರಾದ ಒಳಗಡೆ ರಥ ನಿರ್ಮಿಸಿ ದೇವಸ್ಥಾನದ ಒಳಗಡೆ ಆಕೆಯನ್ನು ಮೆರವಣಿಗೆ ಮಾಡಬೇಕು ಎಂಬುದು ಭಕ್ತರ ಬೇಡಿಕೆಯಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:45 am, Mon, 25 November 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ