ಮೈಸೂರು ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರ: ಖಾಸಗಿ ವಾಹನಗಳಿಗೆ ನಿರ್ಬಂಧ; ಪಾಸ್ ರದ್ದು
ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಕ್ಕೆ ನಿರ್ಬಂಧ ವಿಧಿಸಿರುವ ಜೊತೆಗೆ ಚಾಮುಂಡಿ ಬೆಟ್ಟಕ್ಕೆ ತೆರಳುವ ವಾಹನಗಳಿಗೆ ನೀಡಿದ್ದ ಪಾಸ್ ರದ್ದು ಮಾಡಿಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಮೈಸೂರು: ಆಷಾಢ (Ashadha) ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ (Chamundi Hills) ಖಾಸಗಿ ವಾಹನಕ್ಕೆ ನಿರ್ಬಂಧ ವಿಧಿಸಿರುವ ಜೊತೆಗೆ ಚಾಮುಂಡಿ ಬೆಟ್ಟಕ್ಕೆ ತೆರಳುವ ವಾಹನಗಳಿಗೆ ನೀಡಿದ್ದ ಪಾಸ್ ರದ್ದು ಮಾಡಿಲಾಗಿದೆ ಎಂದು ಮೈಸೂರು (Mysore) ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಜಿಲ್ಲಾಡಳಿತ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ (Free Bus) ವ್ಯವಸ್ಥೆ ಕಲ್ಪಿಸಿದೆ. ಹೀಗಾಗಿ ಆಷಾಢ ಶುಕ್ರವಾರದಂದು ಖಾಸಗಿ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಕಳೆದ ವಾರ ಪಾಸ್ ಗೊಂದಲದಿಂದಾಗಿ ಸಾಕಷ್ಟು ಸಮಸ್ಯೆಯಾಗಿದ್ದರಿಂದ ಮುಂದಿನ ವಾರದಿಂದ ಯಾವುದೇ ಪಾಸ್ ನೀಡದಿರಲು ನಿರ್ಧರಿಸಲಾಗಿದೆ ಎಂದು ತಿಳಸಿದ್ದಾರೆ.
ಜುಲೈ 15, 22ರಂದು ಆಷಾಢ ಶುಕ್ರವಾರ ಮತ್ತು ಜುಲೈ 20ರಂದು ವರ್ಧಂತಿಗೂ ಪಾಸ್ ಕೊಡದಿರಲು ನಿರ್ಧರಿಸಲಾಗಿದೆ. ಚಾಮುಂಡಿಬೆಟ್ಟಕ್ಕೆ ತೆರಳುವವರು ಬಸ್ನಲ್ಲೇ ತೆರಳುವಂತೆ ಸೂಚನೆ ನೀಡಿದ್ದಾರೆ.
ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ತಾಯಿಗೆ ಆಷಾಢ ಮಾಸದಲ್ಲಿ ವಿಶೇಷ ಪೂಜೆಗೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೊರೊನಾ 2ನೇ ಡೋಸ್ ಪಡೆದಿರುವ ಜೊತೆಗೆ ನೆಗೆಟಿವ್ ವರದಿಯ ಪ್ರತಿ ಕಡ್ಡಾಯ ತರಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಹೇಳಿದ್ದರು. ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರ ಚಾಮುಂಡಿಶ್ವರಿ ದೇವಿಗೆ ವಿಶೇಷ ಪೂಜೆ ಮಾಡಲಾಗುತ್ತದೆ. ಈ ಪೂಜೆಯನ್ನು ಕಣ್ಣತುಂಬಿಕೊಳ್ಳಲು ಅಪಾರ ಸಂಖ್ಯೆಯ ಭಕ್ತರು ಬಂದು ತಾಯಿಯ ದರ್ಶನ ಪಡೆಯುತ್ತಾರೆ.
ಆದರೆ ಕಳೆದ 2 ವರ್ಷಗಳಿಂದ ಕೊರೊನಾ ಕಾರಣದಿಂದ ಆಷಾಢ ಮಾಸದ ವಿಶೇಷ ಪೂಜೆಗೆ ಭಕ್ತರಿಲ್ಲದೆ ದೇವಸ್ಥಾನ ಬಣಗುಡುತ್ತಿತ್ತು. ಕೊರೊನಾ ಸಮಯದಲ್ಲಿ ಮುಂಚಾನೆ 5 ಗಂಟೆಗೆ ಪೂಜೆ ಪ್ರಾರಂಭಿಸಿ 8 ಗಂಟೆಯಷ್ಟರ ಹೊತ್ತಿಗೆ ಪೂಜಾ ಕೈಂಕರ್ಯಗಳು ಮುಕ್ತಾಯಗೊಳ್ಳುತ್ತಿದ್ದವು. 8 ಗಂಟೆಗೆ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತಿತ್ತು. ಕೊರೊನಾ ಕಾರಣದಿಂದ ಭಕ್ತಿರಿಗೆ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಕಟ್ಟು ನಿಟ್ಟಿನ ನಿಯಮ ಜಾರಿಗೊಳಿಸಿದ್ದರು. ಆದರೆ ಈ ವರ್ಷ ಕೆಲವು ಸಡಿಲಿಕೆಯನ್ನು ನೀಡಿದ್ದು, ದರ್ಶನಕ್ಕೆ ಬರುವ ಭಕ್ತರು ಕಡ್ಡಾಯವಾಗಿ 2ಡೋಸ್ ಲಸಿಕೆ ಪಡೆದಿರಬೇಕು ಮತ್ತು ಕೊರೊನಾ ನೆಗಟಿವ್ ವರದಿ ತಂದಿರಬೇಕು.
Published On - 6:51 pm, Mon, 11 July 22