AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Defamation case ಮಾಜಿ ಸಚಿವೆ ಮನೇಕಾ ಗಾಂಧಿಗೆ ಮೈಸೂರು ಕೋರ್ಟ್​ನಿಂದ ನೋಟಿಸ್

Mysuru Court Notice to Maneka Gandhi | ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿಗೆ ಮೈಸೂರಿನ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ ಮಾರ್ಚ್ 1ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

Defamation case ಮಾಜಿ ಸಚಿವೆ ಮನೇಕಾ ಗಾಂಧಿಗೆ ಮೈಸೂರು ಕೋರ್ಟ್​ನಿಂದ ನೋಟಿಸ್
ಮಾಜಿ ಸಚಿವೆ ಮನೇಕಾ ಗಾಂಧಿ
ಆಯೇಷಾ ಬಾನು
| Edited By: |

Updated on: Feb 09, 2021 | 3:32 PM

Share

ಮೈಸೂರು: ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿಗೆ ಕೋರ್ಟ್​ನಿಂದ ನೋಟಿಸ್ ಜಾರಿಯಾಗಿದೆ. ಮೈಸೂರಿನ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ ಮನೇಕಾ ಅವರನ್ನು ಮಾರ್ಚ್ 1ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಿದೆ. ಕರ್ನಾಟಕ & ಕೇರಳ ರಾಜ್ಯ ಉಸ್ತುವಾರಿ ಆಗಿದ್ದ, ಅನಿಮಲ್ ವೆಲ್​ಫೇರ್​ ಬೋರ್ಡ್ ಆಫ್​ ಇಂಡಿಯಾ ಸದಸ್ಯ ಮೈಸೂರು ನಿವಾಸಿ ಡಾ.ಎಸ್.ಕೆ.ಮಿತ್ತಲ್​ರಿಂದ ಕೇಸ್​ ದಾಖಲಾಗಿತ್ತು. ಈ ಸಂಬಂಧ ಮಾರ್ಚ್ 1ರಂದು ವಿಚಾರಣೆಗೆ ಹಾಜರಾಗುವಂತೆ ಮೈಸೂರು ಕೋರ್ಟ್ ನೋಟಿಸ್ ನೀಡಿದೆ.

ಪ್ರಕರಣ ಏನು? ಕಸಾಯಿಖಾನೆಗೆ ಭೇಟಿ ಸೇರಿದಂತೆ ಸಾಕಷ್ಟು ಕಾರ್ಯಗಳಲ್ಲಿ ಡಾ.ಎಸ್.ಕೆ.ಮಿತ್ತಲ್ ಸಮರ್ಪಕವಾಗಿ ಕೆಲಸಮಾಡಿಲ್ಲವೆಂದು ಮಿತ್ತಲ್​ ವಿರುದ್ಧ ಮನೇಕಾ ಗಾಂಧಿ ಆರೋಪಿಸಿದ್ದರು. ಈ ಸಂಬಂಧ ಅಂದಿನ ಕೇಂದ್ರ ಪರಿಸರ ಸಚಿವರಾಗಿದ್ದ ಡಾ.ಹರ್ಷವರ್ಧನ್​ಗೆ ಮಂಡಳಿ ಸದಸ್ಯರ ವಿರುದ್ಧ ಆರೋಪ ಮಾಡಿ ಪತ್ರ ಬರೆದಿದ್ದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಮನೇಕಾಗೆ ಪತ್ರ ಬರೆದು ಮಿತ್ತಲ್​ ಸ್ಪಷ್ಟನೆ ನೀಡಿದ್ದರು. ಆದ್ರೂ ಮನೇಕಾ, ಮಿತ್ತಲ್ ವಿರುದ್ಧ ಆರೋಪ ಮಾಡುವುದನ್ನು ಮುಂದುವರಿಸಿದ್ದರು.

ಇದರಿಂದ ಬೇಸರಗೊಂಡು ಮಿತ್ತಲ್ ಮೈಸೂರಿನ JMFC ಕೋರ್ಟ್​ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಡಾ.ಎಸ್.ಕೆ.ಮಿತ್ತಲ್​ರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತು. ನಂತರ ಮಿತ್ತಲ್ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ ಮೊರೆ ಹೋಗಿದ್ದರು. ಮೇಲ್ಮನವಿ ವಿಚಾರಣೆಗೆ ಸ್ವೀಕರಿಸಿ ಮನೇಕಾ ಗಾಂಧಿಗೆ ನೋಟಿಸ್ ಜಾರಿ ಮಾಡಲಾಗಿದೆ. ಟಿವಿ9ಗೆ ಡಾ.ಮಿತ್ತಲ್​ ಪರ ವಕೀಲ ಹೆಚ್.ಬಿ.ಪ್ರಭು ಮಾಹಿತಿ ನೀಡಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿವಿಯ 23ನೇ ಘಟಿಕೋತ್ಸವ | ವೈದ್ಯಕೀಯ ಕ್ಷೇತ್ರದಲ್ಲಿ ಹೆಣ್ಣು ಮಕ್ಕಳ ಸಾಧನೆ ಅಪಾರ: ರಾಮನಾಥ​ ಕೋವಿಂದ್

ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ