ಸಚಿವರಾದ ಬಿ.ಸಿ.ಪಾಟೀಲ್, ಶಿವರಾಂ ಹೆಬ್ಬಾರ್, ಸುನೀಲ್ ಕುಮಾರ್, ನಾರಾಯಣ ಗೌಡ, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಶಾಸಕರಾದ ಜಿಟಿ ದೇವೇಗೌಡ, ಎಸ್.ಎ. ರಾಮದಾಸ್, ಅರವಿಂದ ಬೆಲ್ಲದ್, ತನ್ವೀರ್ ಸೇಠ್, ಎಚ್.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ, ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ, ನಿಗಮ ಮಂಡಳಿ ಅಧ್ಯಕ್ಷರು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ.
ಇಂದು ಸಂಜೆ 6 ಗಂಟೆಗೆ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆಯನ್ನು ಸಿಎಂ ಬಸವರಾಜ ಬೊಮ್ಮಾಯಿಂದ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ, 7.30ಕ್ಕೆ ಸಾಂಸ್ಕೃತಿಕ ಕಲಾ ತಂಡದಿಂದ ನೃತ್ಯ ರೂಪಕಗಳು ನಡೆಯಲಿದೆ.
ದಸರಾಕ್ಕೆ ಚಾಲನೆ ನೀಡಿದ ಎಸ್.ಎಂ.ಕೃಷ್ಣ ಅವರನ್ನು ಗೌರವಿಸಿದ ಸಿಎಂ ಬಸವರಾಜ ಬೊಮ್ಮಾಯಿ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಕೆ:
ನಾಡದೇವತೆ ಚಾಮುಂಡೇಶ್ವರಿ ದೇವಿಗೆ ದಸರಾ ಉದ್ಘಾಟನೆಗೂ ಮುನ್ನ ಪೂಜೆ ಸಲ್ಲಿಸಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ, ದಸರಾ ಉದ್ಘಾಟಕರಾದ ಎಸ್ಎಂ ಕೃಷ್ಣ, ಸಚಿವರಾದ ಎಸ್.ಟಿ.ಸೋಮಶೇಖರ್, ಆರ್.ಅಶೋಕ್, ಸುನಿಲ್ ಕುಮಾರ್, ಭೈರತಿ ಬಸವರಾಜ್, ಬಿ.ಸಿ.ಪಾಟೀಲ್, ಶಿವರಾಮ್ ಹೆಬ್ಬಾರ್, ಕೆ.ಸಿ.ನಾರಾಯಣಗೌಡ, ಶಾಸಕ ಅರವಿಂದ ಬೆಲ್ಲದ್ ಸೇರಿ ಹಲವರು ಪೂಜೆಯಲ್ಲಿ ಭಾಗಿಯಾಗಿದ್ದರು.
ಮೈಸೂರು ಅರಮನೆಯಲ್ಲಿ ಈ ಬಾರಿ ಸಾಂಪ್ರದಾಯಿಕ ದಸರಾ:
ಕೊರೊನಾ ಹಿನ್ನೆಲೆಯಲ್ಲಿ ಸತತ 2ನೇ ವರ್ಷ ಮೈಸೂರು ಅರಮನೆಯಲ್ಲಿ ಸರಳ ದಸರಾ ನಡೆಸಲು ತೀರ್ಮಾನಿಸಲಾಗಿದೆ. ಮುಂಜಾನೆ 4.30ರಿಂದ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು, ಚಾಮುಂಡಿ ತೊಟ್ಟಿಯಲ್ಲಿ ಯದುವೀರ್ ಅವರಿಗೆ ಕಂಕಣಧಾರಣೆ ನಡೆಯಲಿದೆ. ಬೆಳಗ್ಗೆ 9ರಿಂದ 9.30ರವರೆಗೆ ಪಟ್ಟದ ಆನೆ, ಹಸು, ಒಂಟೆ, ಪಟ್ಟದ ಕುದುರೆಗೆ ಪೂಜೆ ಸಲ್ಲಿಸಲಾಗುವುದು. 11.45ರಿಂದ ಮಧ್ಯಾಹ್ನ 12.15ರೊಳಗೆ ಸಿಂಹಾಸನಾರೋಹಣ ನಡೆಯಲಿದ್ದು, ಯದುವೀರ್ ಅವರು ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಅರಮನೆ ಕಾರ್ಯಕ್ರಮಗಳಿಗೆ ರಾಜವಂಶಸ್ಥರಿಗೂ ನಿರ್ಬಂಧವಿದ್ದು, ಖಾಸಗಿ ದರ್ಬಾರ್ ವೇಳೆ ಯದುವೀರ್ ಜೊತೆಗೆ ಅವರ ತಾಯಿ, ಪತ್ನಿ ತ್ರಿಷಿಕಾ ಕುಮಾರಿ ಮಾತ್ರ ಉಪಸ್ಥಿತರಿರಲಿದ್ದಾರೆ.
ಇದನ್ನೂ ಓದಿ:
Mysuru Dasara: ಗತಕಾಲದ ಕಥೆ ಹೇಳುತ್ತಿವೆ ಮೈಸೂರು ಗೊಂಬೆಗಳು, ರಂಗೇರಿದ ಗೊಂಬೆ ಪ್ರದರ್ಶನ