Mysore Dasara 2021: ಜಂಬೂಸವಾರಿಯಲ್ಲಿ ಈ ಬಾರಿ ಯಾವೆಲ್ಲಾ ಸ್ತಬ್ಧಚಿತ್ರಗಳು ಭಾಗವಹಿಸಲಿವೆ?; ಇಲ್ಲಿದೆ ಸಂಪೂರ್ಣ ಮಾಹಿತಿ

ಈ ಬಾರಿ ಜಂಬೂಸವಾರಿ ಮೆರವಣಿಗೆಯಲ್ಲಿ 6 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಪ್ರತಿ ಬಾರಿ 45ಕ್ಕೂ ಹೆಚ್ಚು ಸ್ತಬ್ಧ ಚಿತ್ರಗಳು ಭಾಗಿಯಾಗುತ್ತಿದ್ದವು. ಕೊರೊನಾ ಹಿನ್ನೆಲೆಯಲ್ಲಿ ಸರಳ ದಸರಾ ಆಚರಿಸಲಾಗುತ್ತಿದ್ದು, ಸ್ತಬ್ಧಚಿತ್ರಗಳಿಗೆ ಕೊಕ್​ ನೀಡಲಾಗಿದೆ.

Mysore Dasara 2021: ಜಂಬೂಸವಾರಿಯಲ್ಲಿ ಈ ಬಾರಿ ಯಾವೆಲ್ಲಾ ಸ್ತಬ್ಧಚಿತ್ರಗಳು ಭಾಗವಹಿಸಲಿವೆ?; ಇಲ್ಲಿದೆ ಸಂಪೂರ್ಣ ಮಾಹಿತಿ
ಸ್ತಬ್ಧಚಿತ್ರದ ಒಂದು ದೃಶ್ಯ
Follow us
TV9 Web
| Updated By: shivaprasad.hs

Updated on:Oct 15, 2021 | 2:18 PM

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿ ಜಂಬೂಸವಾರಿ ಮೆರವಣಿಗೆಯಲ್ಲಿ 6 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಪ್ರತಿ ಬಾರಿ 45ಕ್ಕೂ ಹೆಚ್ಚು ಸ್ತಬ್ಧ ಚಿತ್ರಗಳು ಭಾಗಿಯಾಗುತ್ತಿದ್ದವು. ಕೊರೊನಾ ಹಿನ್ನೆಲೆಯಲ್ಲಿ ಸರಳ ದಸರಾ ಆಚರಿಸಲಾಗುತ್ತಿದ್ದು, ಸ್ತಬ್ಧಚಿತ್ರಗಳಿಗೆ ಕೊಕ್​ ನೀಡಲಾಗಿದೆ. ಮೈಸೂರಿನಲ್ಲಿ ಸೂರಿನ ಬಗ್ಗೆ ಮುಡಾದಿಂದ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಸ್ತಬ್ಧ ಚಿತ್ರ ಮೆರವಣಿಗೆ ನಡೆಯಲಿದೆ. ‘ಬೇಡ ನನಗೆ ಕೊಡಲಿ, ನೆರಳನೇಕೆ ಕೊಡಲಿ’ ಸ್ತಬ್ಧಚಿತ್ರವನ್ನು ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ವತಿಯಿಂದ ಪ್ರದರ್ಶಿಸಲಾಗುತ್ತದೆ.

ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಸಮಗ್ರ ಕೃಷಿ ಸ್ತಬ್ಧಚಿತ್ರವನ್ನು ಹಾಗೂ ಆರೋಗ್ಯ ಇಲಾಖೆಯಿಂದ ಕೊವಿಡ್​ ಮುಕ್ತ ಕರ್ನಾಟಕ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಗುತ್ತದೆ. ಮೈಸೂರು ದಸರಾ ಉಪಸಮಿತಿಯಿಂದಲೂ ಸ್ತಬ್ಧಚಿತ್ರ ಪ್ರದರ್ಶಿಸಲು ಸಿದ್ಧತೆ ನಡೆದಿದ್ದು, ‘ಆಜಾದಿ ಕಾ ಅಮೃತ‌ ಮಹೋತ್ಸವ’ವನ್ನು ಪ್ರಸ್ತುತಪಡಿಸಲಾಗುವುದು. ಅರಮನೆ ವಾದ್ಯಗೋಷ್ಠಿಯ ಸ್ತಬ್ಧಚಿತ್ರಗಳ ತಯಾರಿಕೆಗೂ ಸಿದ್ಧತೆ ನಡೆದಿದೆ.

ದಸರಾದಲ್ಲಿ ಭಾಗವಹಿಸಲಿರುವ ಟ್ಯಾಬ್ಲೋ ಹೇಗಿರಲಿವೆ? ಇಲ್ಲಿದೆ ವಿಡಿಯೋ ವರದಿ:

ಮೈಸೂರು ಅರಮನೆಯತ್ತ ಚಾಮುಂಡೇಶ್ವರಿ ಉತ್ಸವಮೂರ್ತಿ; ಮೆರವಣಿಗೆಗೆ ಚಾಲನೆ ನೀಡಿದ ಸಚಿವ ಸೋಮಶೇಖರ್ ಚಾಮುಂಡಿ ಬೆಟ್ಟದಿಂದ ಅರಮನೆಯವರೆಗೆಚಾಮುಂಡೇಶ್ವರಿನ ಉತ್ಸವವಮೂರ್ತಿಯ  ಮೆರವಣಿಗೆಗೆ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದ್ದಾರೆ. ಅಲಂಕೃತ ವಾಹನದಲ್ಲಿ ತಾಯಿ ಚಾಮುಂಡೇಶ್ವರಿ ಮೆರವಣಿಗೆ ನಡೆಸಲಾಗುತ್ತಿದ್ದು, ನಾದಸ್ವರ, ಪೊಲೀಸ್ ಬ್ಯಾಂಡ್, ಅಶ್ವದಳ, ಚಂಡೆ, ಭಜನಾ ತಂಡ, ವೇದಘೋಷ, ನವದುರ್ಗೆಯರ ಮೆರವಣಿಗೆ ಸೇರಿದಂತೆ ವಿವಿಧ ಕಲಾತಂಡಗಳ ಮೆರವಣಿಗೆಯಲ್ಲಿ ಭಾಗಿಯಾಗಿವೆ.

ಈ ಕುರಿತ ವಿಡಿಯೊ ವರದಿ ಇಲ್ಲಿದೆ:

ಇದನ್ನೂ ಓದಿ:

Jamboo Savari 2021: ಮೈಸೂರು ಅರಮನೆಯಲ್ಲಿ ವಿಜಯದಶಮಿ ಸಂಭ್ರಮ; ಇಂದು ಸಂಜೆ ಐತಿಹಾಸಿಕ ದಸರಾ ಜಂಬೂಸವಾರಿ

ಮೈಸೂರು: ಅರಮನೆ ಅಂಗಳದಲ್ಲಿ ಅಂತಿಮ ಹಂತದ ರಿಹರ್ಸಲ್​; ಜಂಬೂಸವಾರಿಯ ತಾಲೀಮಿನ ಸುಂದರ ದೃಶ್ಯಗಳನ್ನು ನೋಡಿ

Published On - 9:06 am, Fri, 15 October 21

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ