AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2022: ಶುಭ ಮೀನ ಲಗ್ನದಲ್ಲಿ ನಾಳೆ ಜಂಬೂ ಸವಾರಿ

ಎರಡು ವರ್ಷ ಕರೋನಾದಿಂದ ಕಳೆಗುಂದಿದ್ದ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಈ ಭಾರಿ ಬಹಳ ವಿಜೃಂಭಣೆಯಿಂದ ನಡೆಯುತ್ತಿದೆ.

ಮೈಸೂರು ದಸರಾ 2022: ಶುಭ ಮೀನ ಲಗ್ನದಲ್ಲಿ ನಾಳೆ ಜಂಬೂ ಸವಾರಿ
ಮೈಸೂರು ಜಂಬು ಸವಾರಿ
TV9 Web
| Updated By: ವಿವೇಕ ಬಿರಾದಾರ|

Updated on:Oct 04, 2022 | 9:12 PM

Share

ಮೈಸೂರು: ಎರಡು ವರ್ಷ ಕರೋನಾದಿಂದ ಕಳೆಗುಂದಿದ್ದ ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ಮಹೋತ್ಸವ ಈ ಭಾರಿ ಬಹಳ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಭಾರೀ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರು ದಸರಾಕ್ಕೆ ಚಾಲನೆ ನೀಡಿದರು. ಸಾಂಕೃತಿಕ ನಗರಿ ವಿದ್ಯುತ್​ ದೀಪಗಳಿಂದ ಕಂಗೊಳಿಸುತ್ತಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಮೈಸೂರುಪಾಕ ನಗರಿಯಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ವಿವಿಧ ಸಾಂಕೃತಿಕ, ಮನರಂಜನೆ ಕಾರ್ಯಕ್ರಮಗಳು ನಡೆದವು. ದಸರಾ ಉತ್ಸವ ನಾಳೆ (ಅ.5) ಜಂಬೂ ಸವಾರಿ ಮೂಲಕ ಕೊನೆಗೊಳ್ಳುತ್ತದೆ.

ಜಂಬೂ ಸವಾರಿ

ಜಿಲ್ಲಾಡಳಿತ ನಾಳೆ ನಡೆಯಲಿರುವ ಜಂಬೂಸವಾರಿಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ಚಾಮುಂಡಿಬೆಟ್ಟದಲ್ಲಿರುವ ಮಹಿಷಾಸುರ ಮರ್ಧಿನಿ ವಿಗ್ರಹಕ್ಕೆ 9 ದಿನಗಳಕಾಲ ವಿಶೇಷ ಪೂಜೆ ನೆರವೇರಿದ್ದು, ನಾಳೆ ಅಭಿಮನ್ಯು ಅಂಬಾರಿಯನ್ನು ಹೊರಲಿದ್ದಾನೆ. ನಾಳೆ ಚಾಮುಂಡಿ ಬೆಟ್ಟದಿಂದ ವಿಗ್ರಹ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಹೊರಡಲಿದೆ. ಮತ್ತು ಇದೇ ಮೊದಲ ಬಾರಿಗೆ ತಾವರೆಕಟ್ಟೆಯಿಂದ ಅದ್ದೂರಿ ಮೆರವಣಿಗೆ ಮಾಡಲಾಗುತ್ತಿದ್ದು, ಮರವಣೆಗೆಯಲ್ಲಿ ಆನೆ ಕಲಾತಂಡಗಳು ಭಾಗಿಯಾಗಲಿವೆ.

ಈ ಬಾರಿಯೂ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದಾನೆ. ಅಭಿಮನ್ಯು ಈಗಾಗಲೇ ಎರಡು ಬಾರಿ ಅಂಬಾರಿಯನ್ನು ಹೊತ್ತಿದ್ದು, ಮೂರನೇ ಬಾರಿಗೆ ಹೊರಲಿದ್ದಾನೆ. ಅರ್ಜುನ ನಿಶಾನೆ ಆನೆ , ಚೈತ್ರ ಮತ್ತು ಕಾವೇರಿ ಕುಮ್ಕಿ ಆನೆಗಳಾಗಿ ಜಂಬೂ ಸವಾರಿಯಲ್ಲಿ ಸಾಗಲಿವೆ. ಟೋಟಲಿ 9 ಆನೆಗಳು ರಾಜ ಬೀದಗಳಲ್ಲಿ ಜಂಬೂಸವಾರಿಯೊಟ್ಟಿಗೆ ಸಂಚರಿಸಲಿವೆ.

ಮದ್ಯಾಹ್ನ 2.36 ರಿಂದ 02:50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಅವರು ನಂದಿ ಧ್ವಜ ಕಂಬಕ್ಕೆ ಪುಷ್ಪಾರ್ಚನೆ ಮಾಡುತ್ತಾರೆ. ನಂತರ ಪೂಜೆ ಬಳಿಕ ಸಂಜೆ 05:07 ರಿಂದ 5.18ರ ವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿ ಮೆರವಣಿಗೆ ಪ್ರಾರಂಭವಾಗುತ್ತದೆ. ಅರಮನೆಯಿಂದ ಕೆ.ಆರ್ ಸರ್ಕಲ್, ಸಯ್ಯಾಜಿ ರಾವ್, ರಸ್ತೆ, ಆಯುರ್ವೇದಿಕ್ ವೃತ್ತ, ಆರ್.ಎಂ.ಸಿ, ತಿಲಕ್ ನಗರ ರಸ್ತೆ ಮೂಲಕ ಜಂಬೂ ಸವಾರಿ ಬನ್ನಿ ಮಂಟಪ ತಲುಪಲಿದೆ.

ಜಂಬೂಸವಾರಿ ಮೆರವಣಿಗೆ ವೇಳೆ 47 ಸ್ತಬ್ಧಚಿತ್ರ ಪ್ರದರ್ಶನ ವಾಗಲಿವೆ. 31 ಜಿಲ್ಲೆಗಳ ಕಲೆ, ಸಾಹಿತ್ಯ, ಇತಿಹಾಸವನ್ನು ಸ್ತಬ್ಧಚಿತ್ರ ಪ್ರತಿಬಿಂಬಿಸಲಿವೆ. ಈ ಬಾರಿ ನಟ ದಿ. ಪುನೀತ್​ ರಾಜಕುಮಾರ್​ ಭಾವಚಿತ್ರ ಇರುವ ಸ್ತಬ್ಧಚಿತ್ರ ಪ್ರದರ್ಶನವಾಗಲಿದೆ.

ಸಿಎಂ ಬೊಮ್ಮಾಯಿ ಈಗಾಗಲೇ ಮೈಸೂರಿಗೆ ಆಗಮಿಸಿದ್ದು, ರಾತ್ರಿ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದರೆ. ಸಿಎಂ ಬೊಮ್ಮಾಯಿ ನಾಳೆ ಬೆಳಗ್ಗೆ 9 ಗಂಟೆಗೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಮಧ್ಯಾಹ್ನ 12.30ಕ್ಕೆ ಭೋಜನ ಮುಗಿಸಿ ಕೆಲಕಾಲ ವಿಶ್ರಾಂತಿ ಮಾಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಸಿಎಂ ನಂದಿಧ್ವಜ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ರಾತ್ರಿ 7.30 ರಿಂದ 9:30ರ ವರೆಗೆ ಬನ್ನಿಮಂಟಪ ಮೈದಾನದಲ್ಲಿ ನಡೆಯುವ ಪಂಜಿನ ಕವಾಯಿತು ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಭಾಗಿಯಾಗಲಿದ್ದರೆ.

ಜಂಬೂ ಸವಾರಿ ವೀಕ್ಷಣೆಗೆ 50 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವಿಐಪಿ ಹಾಗೂ ವಿವಿಐಪಿಗಳಿಗೆ ಅರಮನೆಯ ಮೊದಲನೇ ಮಹಡಿಯ ಪ್ರಾಂಗಣದಲ್ಲಿ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ. ಯದುವೀರ್​, ನ್ಯಾಯಾಧೀಶರು, ರಾಜ್ಯಪಾಲ ಗೆಹ್ಲೋಟ್​, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:11 pm, Tue, 4 October 22

ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?