AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2023: ಈ ಬಾರಿ ದಸರಾದಲ್ಲಿ 36 ಸ್ತಬ್ಧಚಿತ್ರಗಳು ಭಾಗಿ; ಯಾವವು? ಇಲ್ಲಿದೆ ಮಾಹಿತಿ

ಈ ಬಾರಿಯೂ ದಸರಾ ಜಂಬೂಸವಾರಿಗೆ ಮೆರುಗು ನೀಡಲು 36 ಸ್ತಬ್ಧಚಿತ್ರಗಳು ಸಿದ್ದವಾಗಲಿವೆ. ರಾಜ್ಯದ 31 ಜಿಲ್ಲಾ ಪಂಚಾಯತಿಗಳು ಹಾಗೂ 5 ವಿವಿಧ ಇಲಾಖೆಯ ಸ್ತಬ್ಧಚಿತ್ರ ಸೇರಿ ಒಟ್ಟು 36 ಸ್ತಬ್ಧಚಿತ್ರಗಳು ಪ್ರದರ್ಶಗೊಳ್ಳಲಿವೆ.

ಮೈಸೂರು ದಸರಾ 2023: ಈ ಬಾರಿ ದಸರಾದಲ್ಲಿ 36 ಸ್ತಬ್ಧಚಿತ್ರಗಳು ಭಾಗಿ; ಯಾವವು? ಇಲ್ಲಿದೆ ಮಾಹಿತಿ
ಮೈಸೂರು ದಸರಾ ಸ್ತಬ್ಧಚಿತ್ರ
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ|

Updated on: Oct 09, 2023 | 3:34 PM

Share

ಮೈಸೂರು 09: ದಸರಾ (Dasara) ಮಹೋತ್ಸವಕ್ಕೆ ಸಕಲ ಸಿದ್ಧತೆ ಜೋರಾಗಿ ನಡೆದಿದೆ.‌ ಈ ಬಾರಿ ಅರ್ಥಪೂರ್ಣ ಹಾಗೂ ಸಾಂಪ್ರದಾಯಿಕ ದಸರೆಗೆ ಸರ್ಕಾರ ಹೆಚ್ಚು ಒತ್ತು ಕೊಟ್ಟಿದೆ. ಅಕ್ಟೋಬರ್ 24ರ ವಿಜಯದಶಮಿಯಂದು ವಿಶ್ವವಿಖ್ಯಾತ ಜಂಬೂಸವಾರಿ (Jambusavari) ಮೆರವಣಿಗೆ ನಡೆಯಲಿದೆ. ಗಜಪಡೆಯ ಜಂಬೂಸವಾರಿಯ ಪ್ರಮುಖ ಆಕರ್ಷಣೆ ಸ್ತಬ್ಧಚಿತ್ರಗಳು (Tablo). ಈ ಬಾರಿಯೂ ದಸರಾ ಜಂಬೂಸವಾರಿಗೆ ಮೆರುಗು ನೀಡಲು 36 ಸ್ತಬ್ಧಚಿತ್ರಗಳು ಸಿದ್ದವಾಗಲಿವೆ. ರಾಜ್ಯದ 31 ಜಿಲ್ಲಾ ಪಂಚಾಯತಿಗಳು ಹಾಗೂ 5 ವಿವಿಧ ಇಲಾಖೆಯ ಸ್ತಬ್ಧಚಿತ್ರ ಸೇರಿ ಒಟ್ಟು 36 ಸ್ತಬ್ಧಚಿತ್ರಗಳು ಪ್ರದರ್ಶಗೊಳ್ಳಲಿವೆ.

ಪ್ರಮುಖ ಆಕರ್ಷಣೆ

ಅಂಬಾರಿ ಹೊತ್ತ ಅಭಿಮನ್ಯು ನೇತೃತ್ವದ ಗಜಪಡೆ, ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಸಾಗುವುದನ್ನು ನೋಡುವುದೇ ಕಣ್ಣಿಗೆ ಹಬ್ಬ. ಇದರ ಜೊತೆ ಸ್ತಬ್ಧಚಿತ್ರಗಳು ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಲಿವೆ. ಅರಮನೆಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದವರೆಗಿನ ರಾಜಪಥದಲ್ಲಿ ಸಾಗುವ ಮೆರವಣಿಗೆಯಲ್ಲಿ ಮೈಸೂರು ಜಿಲ್ಲಾ ಪಂಚಾಯಿತಿ ಸೇರಿದಂತೆ ರಾಜ್ಯದ 31 ಜಿಲ್ಲಾ ಪಂಚಾಯತ್​ಗಳು, ವಿವಿಧ ಇಲಾಖೆಯ 5 ಸ್ತಬ್ದ ಚಿತ್ರಗಳೂ ಸೇರಿ ಒಟ್ಟು 36 ಸ್ತಬ್ಧಚಿತ್ರಗಳು ಈ ಬಾರಿಯ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಪ್ರವಾಸಿಗರು, ಸಾರ್ವಜನಿಕರನ್ನು ಆಕರ್ಷಿಸಲು ಉತ್ತಮ ರೀತಿಯಲ್ಲಿ ಸ್ತಬ್ಧಚಿತ್ರ ತಯಾರು ಮಾಡಲು ಸೂಚಿಸಲಾಗಿದೆ. ಆಯಾಯ ಜಿಲ್ಲೆಯ ಪ್ರಾಕೃತಿಕ, ಭೌಗೋಳಿಕ ಹಾಗೂ ಐತಿಹಾಸಿಕ ವಿಶೇಷತೆಗಳನ್ನು ಒಳಗೊಂಡ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲು ತೀರ್ಮಾನಿಸಲಾಗಿದೆ.

ಅಕ್ಟೋಬರ್ 10 ರಿಂದ ಸಿದ್ದತೆ

ಸ್ತಬ್ಧಚಿತ್ರ ಚಿತ್ರಗಳ ತಯಾರಿ ನಾಳೆ (ಅಕ್ಟೋಬರ್ 10)ರಿಂದ ಮೈಸೂರು-ನಂಜನಗೂಡು ರಸ್ತೆಯ ಬಂಡಿಪಾಳ್ಯದ ಆವರಣದಲ್ಲಿ ಆರಂಭವಾಗಲಿದೆ. ರಾಜ್ಯದ ಎಲ್ಲ 31 ಜಿಲ್ಲಾ ಪಂಚಾಯತಿಗಳ ಜೊತೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ, ವಾರ್ತಾ ಸಾರ್ವಜನಿಕ ಸಂಪರ್ಕ ಇಲಾಖೆ, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಮತ್ತು ಸಮಾಜ ಕಲ್ಯಾಣ ಇಲಾಖೆ ಗಳ ಒಟ್ಟು 36 ಸ್ತಬ್ಧಚಿತ್ರಳು ನಿರ್ಮಾಣವಾಗಲಿದೆ. ಇದೇ ಮೊದಲ ಬಾರಿಗೆ ಮೈಸೂರು ವೈದ್ಯಕೀಯ ಕಾಲೇಜಿನ ಸ್ತಬ್ಧಚಿತ್ರ ದಸರೆಯಲ್ಲಿ ಪಾಲ್ಗೊಳ್ಳಲಿದೆ. ಮೈಸೂರು ವೈದ್ಯಕೀಯ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾಲೇಜಿನ ಐತಿಹಾಸಿಕ ಹಿನ್ನೆಲೆ, ಭೂತ ವರ್ತಮಾನ ಮತ್ತು ಭವಿಷ್ಯದ ಚಿತ್ರಣವನ್ನು ಹೊಂದಿರುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಲು ತೀರ್ಮಾನಿಸಲಾಗಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಸರ್ಕಾರದ ಗೃಹಜ್ಯೋತಿ ಯೋಜನೆ ಮಾಹಿತಿ ಒಳಗೊಂಡ ಸ್ತಬ್ಧಚಿತ್ರ ಇರಲಿದೆ. ಇದರಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್ ವಿದ್ಯುತ್ ಬಳಕೆ ಮಾಡುವ ವಿಧಾನವನ್ನು ಪರಿಚಯಿಸುತ್ತಿರುವುದು ವಿಶೇಷ.

ಇದನ್ನೂ ಓದಿ: ಮೈಸೂರು ದಸರಾ 2023: ಸ್ಟ್ರೀಟ್ ಫೆಸ್ಟಿವಲ್ ನಡೆಸಲು ಜಿಲ್ಲಾಡಳಿತ ಸಿದ್ದತೆ, ಸಾಂಪ್ರದಾಯಿಕ ದಸರಾಗೆ ಎಳ್ಳು ನೀರು?

ಯಾವ ಯಾವ ಜಿಲ್ಲೆಯ ಸ್ತಬ್ಧಚಿತ್ರಗಳು ಪ್ರದರ್ಶನ

ಹಾಗೆಯೇ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿ ನಿಯಮಿತ (ಕೆಎಂಫ್) ದಿಂದ ಕ್ಷೀರ ಭಾಗ್ಯ ಯೋಜನೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕರ್ನಾಟಕ ಪುಣ್ಯಕೋಟಿ ದತ್ತು ಯೋಜನೆ ಬಿಂಬಿಸುವ ಸ್ತಬ್ಧಚಿತ್ರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತನ್ನ ವಿವಿಧ ಯೋಜನೆಗಳ ಮಾಹಿತಿ ಒಳ ಗೊಂಡ ಸ್ತಬ್ಧಚಿತ್ರ ಇರಲಿವೆ.

ಬಾಗಲಕೋಟೆ ಜಿಲ್ಲೆಯಿಂದ ಬಾದಾಮಿ ಚಾಲುಕ್ಯರು ಮತ್ತು ಬನಶಂಕರಿ ದೇವಿ ದೇವಸ್ಥಾನ, ಬಳ್ಳಾರಿಯಿಂದ ನಾರಿ ಹಳ್ಳ ಆಣೆಕಟ್ಟು, ಬೆಳಗಾವಿಯಿಂದ ಮಹಾಲಿಂಗೇಶ್ವರ ದೇವಸ್ಥಾನ, ಗೋಕಾಕ್ ಫಾಲ್ಸ್, ಬೆಂಗಳೂರಿನಿಂದ ಚಂದ್ರಯಾನ 3, ಚಾಮರಾಜನಗರದಿಂದ ಜಾನಪದ ಭಕ್ತಿಯ ಬೀಡು, ಆನೆ-ಹುಲಿಗಳ ಸಂತೃಪ್ತಿಯ ಕಾಡು, ಮಂಡ್ಯದಿಂದ ಸಾಂಪ್ರದಾಯಿಕ ಆಲೆಮನೆ, ಬೀದರ್‌ನಿಂದ ಕೃಷ್ಣಮೃಗ ಸಂರಕ್ಷಣಾಧಾಮ, ರಾಯಚೂರಿನಿಂದ ನವರಂಗ ದರ್ವಾಜ, ದಾಸರ ಮಂಟಪ ಮತ್ತು ಕಲ್ಲಿದ್ದಲು ವಿದ್ಯುತ್ ಸ್ಥಾವರ, ಹಾವೇರಿಯಿಂದ ಶಂಖನಾದ ಮೊಳಗಿಸುತ್ತಿರುವ ಕನಕದಾಸರು ಮತ್ತು ಕಾಗಿನೆಲೆ, ರಾಮನಗರದಿಂದ ಚನ್ನಪಟ್ಟಣದ ಬೊಂಬೆಗಳು, ಶಿವಮೊಗ್ಗದಿಂದ ಕುವೆಂಪು ಗುಡವಿ ಪಕ್ಷಿಧಾಮ, ಕೆಳದಿ ಶಿವಪ್ಪ ನಾಯಕ, ತುಮಕೂರಿನಿಂದ ಮೂಡಲಪಾಯ ಯಕ್ಷಗಾನ ಹಾಗೂ ವಾಸ್ತುಶಿಲ್ಪ ಮತ್ತು ಉಡುಪಿಯಿಂದ ತ್ಯಾಜ್ಯ ಮುಕ್ತ ಮತ್ಯ ಸ್ನೇಹಿ ಸಮುದ್ರ, ವಿಜಯನಗರದಿಂದ ವಿಜಯವಿಠಲ ದೇವಾಲಯ ಸೇರಿದಂತೆ 31 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಗಮನ ಸೆಳೆಯಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ