Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಗಜಪಡೆಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಮಾಡಿಸಿದ ಅರಣ್ಯ ಇಲಾಖೆ!

Mysore Dasara 2024: ಮೈಸೂರು ದಸರಾ ಮಹೋತ್ಸವದ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿರುವ ಕರ್ನಾಟಕ ಅರಣ್ಯ ಇಲಾಖೆ ಗಜಪಡೆಗೆ ವಿಮೆ ಮಾಡಿಸಿದೆ. ಗಜಪಡೆ, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಆನೆಗಳ ತರಬೇತಿ ಹಾಗೂ ಇತರ ಸಂದರ್ಭಗಳಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದರೆ ಪರಿಹಾರಕ್ಕಾಗಿ ವಿಮೆ ಮಾಡಿಸಲಾಗಿದೆ. ಆ ಕುರಿತ ವಿವರ ಇಲ್ಲಿದೆ.

ಮೈಸೂರು ದಸರಾ ಗಜಪಡೆಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಮಾಡಿಸಿದ ಅರಣ್ಯ ಇಲಾಖೆ!
ದಸರಾ ಗಜಪಡೆ (ಸಂಗ್ರಹ ಚಿತ್ರ)
Follow us
ದಿಲೀಪ್​, ಚೌಡಹಳ್ಳಿ
| Updated By: Ganapathi Sharma

Updated on:Aug 21, 2024 | 1:47 PM

ಬೆಂಗಳೂರು, ಆಗಸ್ಟ್ 21: ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಗಜಪಡೆ ಇಂದು ಮೈಸೂರಿಗೆ ಆಗಮಿಸುತ್ತಿದ್ದು, ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡಕ್ಕೆ ಸ್ವಾಗತ ದೊರೆಯಲಿದೆ. ಈ ಮಧ್ಯೆ, ದಸರಾ ಗಜಪಡೆ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿರುವ ಅರಣ್ಯ ಇಲಾಖೆ ಗಜಪಡೆ, ಸಿಬ್ಬಂದಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ವಿಮೆ ಮಾಡಿಸಿದೆ.

ಗಜಪಡೆಗೆ 87,50,000 ರೂ. ಮೊತ್ತದ ವಿಮೆ ಮಾಡಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ರೂಪಾಯಿ, ಸಾರ್ವಜನಿಕರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 50 ಲಕ್ಷ ರೂ. ಮೊತ್ತದ ವಿಮೆ ಮಾಡಿಸಲಾಗಿದ.ಎ ಇದಕ್ಕಾಗಿ ವಿಮಾ ಕಂಪನಿಗೆ ಪ್ರೀಮಿಯಂ ಹಣ ಪಾವತಿ ಮಾಡಲಾಗಿದೆ.

ಆಗಸ್ಟ್​ 21ರಿಂದ ಆರಂಭವಾಗಿ ದಸರಾ ಮಹೋತ್ಸವ ಮುಕ್ತಾಯಗೊಂಡು ಗಜಪಡೆ ಕಾಡು ಸೇರುವವರೆಗೂ ವಿಮೆ ಚಾಲ್ತಿಯಲ್ಲಿರುತ್ತದೆ. ನಾಲ್ಕು ಮೀಸಲು ಆನೆಗಳು ಸೇರಿ ಒಟ್ಟು 18 ಆನೆಗಳಿಗೆ 87,50,000 ವಿಮೆ ಮಾಡಿಸಲಾಗಿದೆ. ಅರಣ್ಯಧಿಕಾರಿಗಳು, ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷದಂತೆ 50 ಜನರಿಗೆ 1 ಕೋಟಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.

ಗಜಪಡೆಗೆ ನಾಡಿಗೆ ಬಂದ ಸಂಧರ್ಭದಲ್ಲಿ ತಾಲೀಮು ಅಥವಾ ಇನ್ನಿತರ ಸಂಧರ್ಭದಲ್ಲಿ ಗಜಪಡೆಯಿಂದ ಸಾರ್ವಜನಿಕರಿಗೆ ಅಥವ ಸಾರ್ವಜನಿಕ ಆಸ್ತಿಗೆ ತೊಂದರೆಯಾದರೆ 50 ಲಕ್ಷ ರೂಪಾಯಿ ವರೆಗೆ ವಿಮೆ ಸೌಲಭ್ಯ ದೊರೆಯಲಿದೆ. ಅರಣ್ಯ ಇಲಾಖೆ ಒಟ್ಟು 2,37,50,000 ಕೋಟಿ ರೂಪಾಯಿ ಮೊತ್ತದ ವಿಮೆ ಮಾಡಿಸಿದೆ.

ಇದನ್ನೂ ಓದಿ: ದೇಶದ ಪ್ರಮುಖ ವ್ಯಕ್ತಿಯೊಬ್ಬರು ದಸರಾ ಅತಿಥಿಯಾಗಿ ಬರುತ್ತಾರೆ: ಸಚಿವ ಹೆಚ್​ಕೆ ಪಾಟೀಲ್

ಇಂದು ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಲಿವೆ. ನಂತರ ಎರಡನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಅಗತ್ಯವಿದ್ದರೆ ಮಾತ್ರ ಮೀಸಲು ಆನೆಗಳನ್ನು ಕರೆತರಲು ತೀರ್ಮಾ‌ನ ಕೈಗೊಳ್ಳಲಾಗಿದೆ. ಆನೆಗಳು, ಮಾವುತರ ವಾಸ್ತವ್ಯಕ್ಕಾಗಿ ಅರಮನೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:09 am, Wed, 21 August 24

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ