ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ: ಜಂಬೂಸವಾರಿ ನಡೆಯುವ ಸಮಯ ಇಲ್ಲಿದೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈಗಾಗಲೆ ತಯಾರಿ ಆರಂಭವಾಗಿದೆ. ಅರಮನೆ ನಗರಿ ಜಗಮಗಿಸುವ ಲೈಟಿಂಗ್​ನಿಂದ ಕಂಗೊಳಿಸುತ್ತಿದೆ. ದಸರಾ ಉದ್ಘಾಟನೆ, ಜಂಬೂಸವಾರಿ ನಡೆಯುವ ದಿನಾಂಕವನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ.

ಮೈಸೂರು ದಸರಾ 2024 ವೇಳಾಪಟ್ಟಿ ಬಿಡುಗಡೆ: ಜಂಬೂಸವಾರಿ ನಡೆಯುವ ಸಮಯ ಇಲ್ಲಿದೆ
ಮೈಸೂರು ದಸರಾ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Sep 28, 2024 | 9:17 AM

ಮೈಸೂರು, ಸೆಪ್ಟೆಂಬರ್​ 28: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ಕ್ಕೆ (Mysore Dasara) ಬೆರಳೆಣಿಕೆಯಷ್ಟು ದಿನಗಳು ಬಾಕಿ ಇವೆ. ಮೈಸೂರು ದಸರಾ ಕಾರ್ಯಕ್ರಮದ ಪಟ್ಟಿಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ. ಅಕ್ಟೋಬರ್​ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ.

ಅಕ್ಟೋಬರ್​ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್​ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ  ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ (ಜಂಬೂ ಸವಾರಿ)ಗೆ ಚಾಲನೆ ದೊರೆಯಲಿದೆ.

ಸಂಜೆ 7ಕ್ಕೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್​ ಅನ್ನು ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಮೈಸೂರು ದಸರಾ ಗೋಲ್ಡ್​ ಕಾರ್ಡ್​, ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ ಮಾಹಿತಿ

ಯುವ ದಸರಾ

ಈ ಬಾರಿ ಯುವ ದಸರಾವನ್ನು ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಮುಕ್ತ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 5 ಗಂಟೆಯಿಂದ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ.

ಯುವ ದಸರಾಗೆ ಹೋಗಲು ನಗರದ ಪ್ರಮುಖ ಸ್ಥಳಗಳಿಂದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಲಭ್ಯವಿವೆ. ಸಾರ್ವಜನಿಕ ಬಸ್‌ಗಳು ನಿಯಮಿತವಾಗಿ ಈ ಪ್ರದೇಶಕ್ಕೆ ಓಡುತ್ತವೆ (ಸ್ಥಳೀಯ ವೇಳಾಪಟ್ಟಿಗಳನ್ನು ಪರಿಶೀಲಿಸಿ) ಖಾಸಗಿ ವಾಹನದಲ್ಲಿ ಹೋಗುವವರಿಗೆ ಕಾರ್ಯಕ್ರಮ ನಡೆಯವ ಹತ್ತಿರ ಪಾರ್ಕಿಂಗ್ ವ್ಯವಸ್ಥೆ ಇದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ, ಅಧಿಕೃತ ದಸರಾ 2024 ವೆಬ್‌ಸೈಟ್ ಅಥವಾ ಮೈಸೂರಿನ ಸ್ಥಳೀಯ ಪ್ರವಾಸೋದ್ಯಮ ಕಚೇರಿಗಳಿಗೆ ಭೇಟಿ ನೀಡಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:15 am, Sat, 28 September 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ