ಅಕ್ಟೋಬರ್​ 6 ರಂದು ಮೈಸೂರು ಯುವ ದಸರಾ ಆರಂಭ, ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

Mysore Dasara 2024: ರವಿವಾರ (ಅ. 6) ರಂದು ಯುವ ದಸರಾ ಆರಂಭವಾಗಲಿದೆ. ಈ ಬಾರಿ ಯುವ ದಸರಾಕ್ಕೆ ದೇಶದ ಖ್ಯಾತ ಹಿನ್ನಲೆ ಗಾಯಕರು ಆಗಮಿಸಲಿದ್ದಾರೆ. ಈ ಬಾರಿ ಯುವ ದಸರಾ ಮಹರಾಜ ಕಾಲೇಜು ಮೈದಾನದಲ್ಲಿ ಇರುವುದಿಲ್ಲ. ಹಾಕಿದ್ದರೆ ಯುವ ದಸರಾ ನಡೆಯುವ ಸ್ಥಳ ಯಾವುದು? ಕಾರ್ಯಕಮಗಳ ವಿವರ ಇಲ್ಲಿದೆ.

ಅಕ್ಟೋಬರ್​ 6 ರಂದು ಮೈಸೂರು ಯುವ ದಸರಾ ಆರಂಭ, ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ
ಯುವ ದಸರಾ
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Oct 04, 2024 | 2:26 PM

ಮೈಸೂರು, ಅಕ್ಟೋಬರ್​ 04: ವಿಶ್ವವಿಖ್ಯಾತ ಮೈಸೂರು ದಸರಾಗೆ (Mysore Dasara 2024) ಚಾಲನೆ ದೊರೆತಿದೆ. ರವಿವಾರ (ಅ. 6) ರಂದು ಯುವ ದಸರಾ (Yuva Dasara) ಆರಂಭವಾಗಲಿದೆ. ಈ ಬಾರಿ ಯುವ ದಸರಾ ಮಹರಾಜ ಕಾಲೇಜು ಮೈದಾನದಿಂದ ನಗರದ ಹೊರವಲಯದ ಉತ್ತನಹಳ್ಳಿ ಬಳಿಯ 100 ಎಕರೆ ಕೃಷಿ ಭೂಮಿಯಲ್ಲಿ ನಡೆಯಲಿದೆ.

ಯುವ ದಸರಾ ಕಾರ್ಯಕ್ರಮ ನಡೆಯುವ ಸ್ಥಳವನ್ನು ಸಚಿವ ಹೆಚ್​ಸಿ ಮಹದೇವಪ್ಪ ಈಗಾಗಲೇ ಪರಿಶೀಲನೆ ನಡೆಸಿದ್ದಾರೆ. ಕಾರ್ಯಕ್ರಮಕ್ಕೆ ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಜನರು ಆಗಮಿಸುತ್ತಾರೆ, ಹೀಗಾಗಿ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಆಯೋಜಕರಿಗೆ ಸೂಚಿಸಿದ್ದಾರೆ.

ಯುವ ದಸರಾಕ್ಕೆ ಪ್ರತಿ ವರ್ಷ ದೇಶದ ಪ್ರಸಿದ್ಧ ಗಾಯಕರು ಮತ್ತು ನಟರನ್ನು ಕರೆಸಲಾಗುತ್ತದೆ. ಅದರಂತೆ ಈ ವರ್ಷವೂ ಖ್ಯಾತ ಗಾಯಕರು ಮತ್ತು ನಟರು ಆಗಮಿಸುತ್ತಿದ್ದಾರೆ. ಈ ಬಾರಿ ಯುವ ದಸರಾಗೆ ಶ್ರೇಯಾ ಘೋಷಾಲ್​, ಎಆರ್​ ರೆಹಮಾನ್​ ಮತ್ತು ಇಳಯರಾಜ ಆಗಮಿಸುತ್ತಿರುವುದು ವಿಶೇಷವಾಗಿದೆ.

ಇದನ್ನೂ ಓದಿ: ಅರಮನೆಯಲ್ಲಿ ಕಳೆಗಟ್ಟಿದ ದಸರಾ ಕಲರವ; ರಾಜ ಪೋಷಾಕಿನಲ್ಲಿ ಮಿಂಚಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಯುವ ದಸರಾ ಕಾರ್ಯಕ್ರಮ ವಿವರ

  • ಅಕ್ಟೋಬರ್ 6ರಂದು ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಮತ್ತು ತಂಡದಿಂದ ಸಂಗೀತ ಮನರಂಜನೆ ಕಾರ್ಯಕ್ರಮ ಆಯೋಜಿಸಲಾಗಿದೆ.
  • ಅ. 7ರಂದು ಸಂಗೀತ ನಿರ್ದೇಶಕ ರವಿ ಬಸ್ರೂರ್ ಮತ್ತು ತಂಡದವರಿಂದ ಸಂಗೀತ ಮನರಂಜನೆ ಕಾರ್ಯಕ್ರಮ ನಡೆಯಲಿದೆ.
  • ಅ. 8ರಂದು ಬಾಲಿಹುಡ್ ಖ್ಯಾತಿಯ ರ್ಯಾಪರ್ ಬಾದ್ ಷಾ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ಇರಲಿದೆ.
  • ಅ. 9ರಂದು ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ನೆರವೇರಲಿದೆ.
  • ಅ. 10 ರಂದು ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಮತ್ತು ತಂಡದವರಿಂದ ಸಂಗೀತ ಮನರಂಜನೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾಹಿತಿ ನೀಡಿದರು.

ಯುವ ದಸರಾಕ್ಕೆ ಹೋಗಲು ವಾಹನ ವ್ಯವಸ್ಥೆ

ಯುವ ದಸರಾಗೆ ಹೋಗಲು ನಗರದ ಪ್ರಮುಖ ಸ್ಥಳಗಳಿಂದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಲಭ್ಯವಿವೆ. ಸಾರ್ವಜನಿಕ ಬಸ್‌ಗಳು ನಿಯಮಿತವಾಗಿ ಈ ಪ್ರದೇಶಕ್ಕೆ ಓಡಾಡುತ್ತವೆ (ಸ್ಥಳೀಯ ವೇಳಾಪಟ್ಟಿಗಳನ್ನು ಪರಿಶೀಲಿಸಿ). ಖಾಸಗಿ ವಾಹನಗಳಿಗೆ ಕಾರ್ಯಕ್ರಮ ನಡೆಯವ ಹತ್ತಿರ ಪಾರ್ಕಿಂಗ್ ವ್ಯವಸ್ಥೆ ಇದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ, ಅಧಿಕೃತ ದಸರಾ 2024 ವೆಬ್‌ಸೈಟ್ ಅಥವಾ ಮೈಸೂರಿನ ಸ್ಥಳೀಯ ಪ್ರವಾಸೋದ್ಯಮ ಕಚೇರಿಗಳಿಗೆ ಭೇಟಿ ನೀಡಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:26 pm, Fri, 4 October 24

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು