AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಏರ್​ ಶೋ, ಉಚಿತ ಪ್ರವೇಶ: ಈ ಸಮಯಕ್ಕೆ ಬಂದವರಿಗೆ ಮಾತ್ರ ಆದ್ಯತೆ

ಈ ಬಾರಿ ದಸರಾ ಸಂಭ್ರಮದಲ್ಲಿ ಏರ್ ಶೋ ಇರಲಿದೆ. ಸೂರ್ಯ ಕಿರಣ್ ತಂಡದಿಂದ2 ದಿನ ಬನ್ನಿಮಂಟಪದಲ್ಲಿ ಏರ್ ಶೋ ನಡೆಯಲಿದೆ. ಅಕ್ಟೋಬರ್ 22 ರಂದು ಎಲ್ಲರಿಗೂ ಉಚಿತ ಪ್ರವೇಶ ನೀಡಲಾಗಿದೆ. 23ರಂದು ಪಂಜಿನ ಕವಾಯತು ಪಾಸ್‌ ಮೂಲಕ ಏರ್ ಶೋ ನೋಡಲು ವ್ಯವಸ್ಥೆ ಮಾಡಲಾಗ್ತಿದೆ.

ಮೈಸೂರು ದಸರಾ ಏರ್​ ಶೋ, ಉಚಿತ ಪ್ರವೇಶ: ಈ ಸಮಯಕ್ಕೆ ಬಂದವರಿಗೆ ಮಾತ್ರ ಆದ್ಯತೆ
ಸಾಂದರ್ಭಿಕ ಚಿತ್ರ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Oct 17, 2023 | 1:27 PM

ಮೈಸೂರು, ಅ.17: ವಿಶ್ವವಿಖ್ಯಾತ ಮೈಸೂರು ದಸರಾ ಶುರುವಾಗಿದೆ (Mysuru Dasara 2023). ರಾಜ್ಯ, ಹೊರ ರಾಜ್ಯಗಳಿಂದ ಜನರು ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. ಜಗಮಗಿಸುವ, ಕಲರ್ ಫುಲ್ ಮೈಸೂರು ನೋಡಿ ಸಂಭ್ರಮಿಸುತ್ತಿದ್ದಾರೆ. ಮತ್ತೊಂದೆಡೆ ಅಭಿಮನ್ಯು ನೇತೃತ್ವದ ಗಜಪಡೆ ಜಂಬೂ ಸವಾರಿಗೆ ತಾಲೀಮಿನಲ್ಲಿ ತೊಡಗಿದೆ. ಈ ಬಾರಿಯ ದಸರಾ ಉತ್ಸವದಲ್ಲಿ ಏರ್ ಶೋ ಸಹ (Dasara Air Show) ಇರಲಿದೆ. ಸೂರ್ಯ-ಕಿರಣ್ ತಂಡದಿಂದ ಎರಡು ದಿನ ಬನ್ನಿಮಂಟಪದಲ್ಲಿ ಏರ್ ಶೋ ನಡೆಯಲಿದೆ. ಐದು ವರ್ಷಗಳ ಬಳಿಕ ಮೈಸೂರು ದಸರಾದಲ್ಲಿ ಏರ್​ಶೋ ನಡೆಯುತ್ತಿದೆ.

ಹೌದು ಅ.22 ಹಾಗೂ ಅ.23ರಂದು ಸಂಜೆ 4 ಗಂಟೆಯಿಂದ 5 ಗಂಟೆಯವರೆಗೆ ಏರ್ ಶೋ ನಡೆಯಲಿದೆ. ಅ.22 ರಂದು ನಡೆಯುವ ಏರ್​ ಶೋಗೆ ಪಾಸ್ ಇರುವುದಿಲ್ಲ. ಆ ದಿನ ಎಲ್ಲರಿಗೂ ಉಚಿತ ಪ್ರವೇಶ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತೆ. 3 ಗಂಟೆಯ ನಂತರ ಬಂದವರಿಗೆ ಪ್ರವೇಶವಿರುವುದಿಲ್ಲ. 23ರಂದು ಪಂಜಿನ ಕವಾಯತು ಪಾಸ್‌ ಮೂಲಕ ಏರ್ ಶೋ ನೋಡಲು ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಸ್ಟ್ರೀಟ್ ಫೆಸ್ಟಿವಲ್‌ಗೆ ಬ್ರೇಕ್ ಹಾಕಲಾಗಿದೆ. ಪರ ವಿರೋಧ ಹಿನ್ನೆಲೆ ಸ್ಟ್ರೀಟ್ ಫೆಸ್ಟಿವಲ್‌ಗೆ ಬ್ರೇಕ್ ಹಾಕಲಾಗಿದೆ. ದಸರಾ ಮುಗಿದ ನಂತರ ಬ್ರ್ಯಾಂಡ್ ಮೈಸೂರು ಹೆಸರಿನಲ್ಲಿ ನಿರಂತರ ಕಾರ್ಯಕ್ರಮಗಳಿರಲಿವೆ.

ಇದನ್ನೂ ಓದಿ: Mysuru Dasara 2023: ವಿಶ್ವವಿಖ್ಯಾತ ಮೈಸೂರು ದಸರಾ 3ನೇ ದಿನದ ಕಾರ್ಯಕ್ರಮಗಳ ವಿವರ

ಇಂದು ಮೈಸೂರು ಅರಮನೆಯ ವಸ್ತು ಪ್ರದರ್ಶನ ಆವರಣದಲ್ಲಿ 3ನೇ ಬಾರಿ ತಾಲೀಮು ನಡೆಸಲಾಗಿದೆ. ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ 7 ಫಿರಂಗಿ ಗಾಡಿಗಳಿಂದ ಒಟ್ಟು 21 ಬಾರಿ ಕುಶಾಲತೋಪು ಸಿಡಿಸಲಾಯ್ತು. 7 ಪಿರಂಗಿಗಳ ಮೂಲಕ ಮೂರು ಸುತ್ತಿನ ತಾಲೀಮು ಮಾಡಲಾಗಿದೆ. ತಾಲೀಮಿನಲ್ಲಿ 41 ಕುದುರೆಗಳು, ಜಂಬೂ ಸವಾರಿಯ ನೇತೃತ್ವ ವಹಿಸಿರುವ ಅಭಿಮನ್ಯು, 12 ಆನೆಗಳು ಭಾಗಿಯಾಗಿದ್ವು. ಮೊದಲ ಬಾರಿ ದಸರೆಗೆ ಕಾಡಿನಿಂದ ನಾಡಿಗೆ ಬಂದಿರುವ ಹಿರಣ್ಯ ಮತ್ತು ರೋಹಿತ ಆನೆಗಳು ತಾಲೀಮಿನಲ್ಲಿ ದೂರು ಉಳಿದಿವೆ.

ಅಕ್ಟೋಬರ್ 15 ರಿಂದ 24 ರವರೆಗೆ ಕುಪ್ಪಣ್ಣ ಪಾರ್ಕ್​ನಲ್ಲಿ ದಸರಾ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ. ಈ ಬಾರಿ 2 ಲಕ್ಷ ಗುಲಾಬಿ ಹೂವುಗಳಿಂದ ಚಂದ್ರಯಾನದ ಪರಿಕಲ್ಪನೆಯ ಕಲಾಕೃತಿ ನಿರ್ಮಾಣ ಮಾಡಲಾಗಿದೆ. ಇದರ ಜೊತೆಗೆ ಚಾಮುಂಡೇಶ್ವರಿ ದೇವಿ ಹಾಗು ದೇವಸ್ಥಾನದ ಗೋಪುರ, ಸುವರ್ಣ ಕರ್ನಾಟಕ – ಕರ್ನಾಟಕದ ಶ್ರೀಮಂತ ಪರಂಪರೆ, ಕ್ರೀಡೆಗಳ ಥೀಮ್, ಕ್ರಿಕೆಟ್ ಹೂವಿನ ಕಲಾಕೃತಿ, ಅಂಬಾರಿ ಹೂವಿನ ಕಲಾಕೃತಿ, ಕಾಫಿ ಕಪ್ ಹೂವಿನ ಕಲಾಕೃತಿಗಳು ಈ ಬಾರಿಯ ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಣೆಗಳಾಗಿವೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ