ಅ.13 ರಂದು ಮಹಿಷ ದಸರಾ, ಆಹ್ವಾನ ಪತ್ರಿಕೆ ಬಿಡುಗಡೆ, ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ ಹೆಸರು

ಮಹಿಷ ದಸರಾ ಆಚರಣೆ ಸಮಿತಿ, ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘದಿಂದ ಮಹಿಷಾ ದಸರಾ ಆಚರಣೆ ನಡೆಸಲಾಗುತ್ತಿದೆ. ತೀವ್ರ ವಿರೋಧದ ನಡುವೆಯೂ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಗಿದ್ದು, ಅಕ್ಟೋಬರ್ 13 ರಂದು ಮಹಿಷ ದಸರಾ ಆಚರಣೆ ಮಾಡಲಾಗುತ್ತಿದೆ. ಆಹ್ವಾನ ಪತ್ರಿಕೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಮಹಿಷಾ ಬೆಟ್ಟ ಅಂತ ನಮೂದಿಸಲಾಗಿದೆ.

ಅ.13 ರಂದು ಮಹಿಷ ದಸರಾ, ಆಹ್ವಾನ ಪತ್ರಿಕೆ ಬಿಡುಗಡೆ, ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ ಹೆಸರು
ಮಹಿಷಾಸರImage Credit source: kn.wikipedia.org
Follow us
ರಾಮ್​, ಮೈಸೂರು
| Updated By: Rakesh Nayak Manchi

Updated on:Oct 07, 2023 | 9:41 AM

ಮೈಸೂರು, ಅ.7: ಮಹಿಷ ದಸರಾ ಆಚರಣೆ ಸಮಿತಿ, ಮೈಸೂರು ವಿಶ್ವವಿದ್ಯಾಲಯ ಸಂಶೋಧಕರ ಸಂಘದಿಂದ ಮಹಿಷಾ ದಸರಾ (Mahisha Dasara) ಆಚರಣೆ ನಡೆಸಲಾಗುತ್ತಿದೆ. ತೀವ್ರ ವಿರೋಧದ ನಡುವೆಯೂ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಗಿದ್ದು, ಅಕ್ಟೋಬರ್ 13 ರಂದು ಮಹಿಷ ದಸರಾ ಆಚರಣೆ ಮಾಡಲಾಗುತ್ತಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಎರಡು‌ ದಿನಕ್ಕೂ ಮುಂಚೆ ಮಹಿಷ ದಸರಾ ಆಚರಣೆ ನಡೆಸಲಾಗುತ್ತಿದೆ. ಮಹಿಷಾಸುರನ ಭಾವಚಿತ್ರವಿರುವ ಆಹ್ವಾನ ಪತ್ರಿಕೆಯಲ್ಲಿ ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ ಅಂತಾ ನಮೂದಿಸಲಾಗಿದೆ.

ಮಹಿಷ ದಸರಾ ಕಾರ್ಯಕ್ರಮದ ವಿವರ

  • ಬೆಳಗ್ಗೆ 8ಕ್ಕೆ ತಾವರೆಕಟ್ಟೆ ಬಳಿ ಎಲ್ಲರೂ ಸೇರುವುದು
  • ಬೆಳಗ್ಗೆ 8.30ಕ್ಕೆ ಅತಿಥಿ ಗಣ್ಯರೊಡನೆ ಆದಿ ದ್ರಾವಿಡ ದೊರೆ ಮಹಿಷಾಸುರ ಮೂರ್ತಿಗೆ ಪುಷ್ಪನಮನ
  • ಬೆಳಗ್ಗೆ 9.30ಕ್ಕೆ ತಾವರೆಕಟ್ಟೆಯಿಂದ ಪುರಭವನಕ್ಕೆ ಬೈಕ್ ರಾಲಿ
  • ಜಾನಪದ ಸಂಗೀತ ಮೇಳ, ಟ್ಯಾಬ್ಲೋಗಳ ಮೆರವಣಿಗೆ
  • 11.00ಕ್ಕೆ ಪುರಭವನದ ಮಹಿಷಾಸುರ ವೇದಿಕೆಯಲ್ಲಿ ಕಾರ್ಯಕ್ರಮ
  • ಮಾಜಿ ಸಚಿವೆ ಬಿ.ಟಿ. ಲಲಿತಾನಾಯಕ್ ಅವರಿಂದ ಮಹಿಷ ದಸರ ಉದ್ಘಾಟನೆ
  • ಮುಖ್ಯ ಅತಿಥಿಗಳಾಗಿ‌ ಉರಿಲಿಂಗ ಪೆದ್ದಿ‌ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಬೌದ್ದ ಬಿಕ್ಕು ಬೋಧಿದತ್ತ ಭಂತೇಜಿ ಸೇರಿ ಹಲವರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಅ.15ಕ್ಕೆ ಉಡುಪಿಯಲ್ಲಿ ಮಹಿಷಾ ದಸರಾ ಆಚರಣೆ, ದ್ರಾವಿಡ ದೊರೆ ಮಹಿಷ ಬಗ್ಗೆ ಜಾಗೃತಿ ಕಾರ್ಯಕ್ರಮ

ಅದಾಗ್ಯೂ, ಮಹಿಷ ದಸರಾ ಆಚರಣೆಗೆ ನಾವು ಬಿಡುವುದಿಲ್ಲ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಈ ಹಿಂದೆ ಹೇಳಿಕೆ ನೀಡಿದ್ದರು. ಈ ಆಚರಣೆ ವಿರೋಧಿಸಿ ಅ.13 ರಂದು ಬಿಜೆಪಿಯಿಂದ ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 8 ಗಂಟೆಗೆ ಈ ಚಲೋ ನಡೆಯಲಿದೆ  ಎಂದು ಹೇಳಿದ್ದರು.

ಮಹಿಷಾಸುರ ಮೂಲ ನಿವಾಸಿಗಳ ದೇವರು ಯಾವಾಗ ಆಗಿದ್ದರು? ದೆವ್ವ ಯಾವಾಗ ದೇವರಾಯಿತು ಎಂದು ಗೊತ್ತಿಲ್ಲ ಎಂದ ಪ್ರತಾಪ್ ಸಿಂಹ, ದೇವಿಯನ್ನು ದೆವ್ವ, ದೆವ್ವವನ್ನು ದೇವರು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಚಾಮುಂಡೇಶ್ವರಿ ನಿಮ್ಮ ತಾಯಿಯಲ್ಲವೇ? ಎಲ್ಲರೂ ಪಕ್ಷಾತೀತವಾಗಿ ಚಲೋ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಈಗಾಗಲೇ ಮನವಿ ಮಾಡಿದ್ದಾರೆ.

ದಿಢೀರ್ ಸೃಷ್ಟಿಯಾದ ಮಹಿಷ ದಸರಾ ಆಚರಣೆ ಇತಿಹಾಸ

2015ರಲ್ಲಿ ಆರಂಭವಾದ ಮಹಿಷ ದಸರಾ ಆಚರಣೆಗೆ ದಿಢೀರ್ 50 ವರ್ಷದ ಇತಿಹಾಸ ಸೃಷ್ಟಿಯಾಗಿದೆ. ಈ ಬಾರಿ 50ನೇ ವರ್ಷದ ಮಹಿಷ ದಸರಾ ಆಚರಣೆ ನಡೆಸಲಾಗುತ್ತಿದೆ ಎಂದು ಮಹಿಷ ದಸರಾ ಆಚರಣೆ ಸಮಿತಿಯಿಂದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಈ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 am, Sat, 7 October 23

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್