ಮೈಸೂರು ದಸರಾ ಪೋಸ್ಟರ್​, ವೆಬ್​​ಸೈಟ್​ ಬಿಡುಗಡೆ ಮಾಡಿದ ಸಚಿವರು

ಈ ಬಾರಿ ಸಾಂಪ್ರದಾಯಿಕ ದಸರಾ ಮಾಡಲು ತೀರ್ಮಾನ ಮಾಡಿದ್ದೇವೆ. 190ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದೇವೆ. ಹಾಗಾಗಿ ಈ ಬಾರಿ ಸಾಂಪ್ರದಾಯಿಕ ದಸರಾ ಮಾಡುವುದಕ್ಕೆ ತೀರ್ಮಾನ ಮಾಡಿದ್ದು, ಅಕ್ಟೊಬರ್ 15ರಂದು ಹಂಸಲೇಖ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​ಸಿ ಮಹಾದೇವಪ್ಪ ಅವರು ಹೇಳಿದರು.

ಮೈಸೂರು ದಸರಾ ಪೋಸ್ಟರ್​, ವೆಬ್​​ಸೈಟ್​ ಬಿಡುಗಡೆ ಮಾಡಿದ ಸಚಿವರು
ಹೆಚ್​ಸಿ ಮಹಾದೇವಪ್ಪ, ಶಿವರಾಜ್​ ತಂಗಡಗಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 03, 2023 | 3:58 PM

ಮೈಸೂರು, ಅ.03: ವಿಶ್ವ ಪ್ರಸಿದ್ದ ಮೈಸೂರು  ದಸರಾ(Mysore Dasara) ಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಅದ್ದೂರಿ ದಸರಾಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಗಜಪಡೆಗಳ ತಲಾಮು ಕೂಡ ಮುಗಿದಿದೆ. ಈ ಹಿನ್ನಲೆ ಇಂದು(ಅ.03) ಮೈಸೂರು ಅರಮನೆ ಮಂಡಳಿಯಲ್ಲಿ ಸಚಿವರಾದ ಶಿವರಾಜ್ ತಂಗಡಗಿ (Shivaraj Tangadagi) ಹಾಗೂ  ಹೆಚ್​.ಸಿ ಮಹದೇವಪ್ಪ(HC mahadevappa) ಅವರು ಮೈಸೂರು ದಸರಾ  ಪೋಸ್ಟರ್​ ಮತ್ತು ವೆಬ್​​ಸೈಟ್​ನ್ನು ಬಿಡುಗಡೆ ಮಾಡಿದರು.

ಇನನು ಇದೆ ವೇಳೆ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಅವರು ‘ಈ ಬಾರಿ ಸಾಂಪ್ರದಾಯಿಕ ದಸರಾ ಮಾಡಲು ತೀರ್ಮಾನ ಮಾಡಿದ್ದೇವೆ. 190ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದೇವೆ. ಹಾಗಾಗಿ ಈ ಬಾರಿ ಸಾಂಪ್ರದಾಯಿಕ ದಸರಾ ಮಾಡುವುದಕ್ಕೆ ತೀರ್ಮಾನ ಮಾಡಿದ್ದು, ಅಕ್ಟೊಬರ್ 15ರಂದು ಹಂಸಲೇಖ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಆವತ್ತೇ ದಸರಾದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ಕೂಡ ನೀಡಲಿದ್ದೇವೆ ಎಂದರು.

ಇದನ್ನೂ ಓದಿ:ರಾಜ್ಯದಲ್ಲಿ ಬರದ ಛಾಯೆ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ, ಸರಳವಾಗಿ ಮೈಸೂರು ದಸರಾ ಆಚರಿಸಲು ಚಿಂತನೆ

ಕಡಿಮೆ ವೆಚ್ಚದ ದಸರಾ ಆಚರಣೆ

ಇನ್ನು ಕಳೆದ ದಸರಾಗಿಂತ ಈ ಬಾರಿ ಕಡಿಮೆ ವೆಚ್ಚದ ದಸರಾ ಆಚರಣೆ ಮಾಡುತ್ತೇವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಇದಕ್ಕೋಸ್ಕರ 15 ಕೋಟಿ ಹಣ ಬಿಡುಗಡೆಯಾಗಿದೆ. ಈ ಬಾರಿ ಯುವದಸರಾ, ಯುವ ಸಂಭ್ರಮ, ಏರ್ ಶೋ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಇರುತ್ತದೆ. ಜೊತೆಗೆ ಈ ಬಾರಿ ಹೆಚ್ಚು ಪ್ರಾಯೋಜಿಕತ್ವದ ಮೂಲಕ ದಸರಾ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ ಅವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!