ಮೈಸೂರು, ಅ.03: ವಿಶ್ವ ಪ್ರಸಿದ್ದ ಮೈಸೂರು ದಸರಾ(Mysore Dasara) ಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಅದ್ದೂರಿ ದಸರಾಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಗಜಪಡೆಗಳ ತಲಾಮು ಕೂಡ ಮುಗಿದಿದೆ. ಈ ಹಿನ್ನಲೆ ಇಂದು(ಅ.03) ಮೈಸೂರು ಅರಮನೆ ಮಂಡಳಿಯಲ್ಲಿ ಸಚಿವರಾದ ಶಿವರಾಜ್ ತಂಗಡಗಿ (Shivaraj Tangadagi) ಹಾಗೂ ಹೆಚ್.ಸಿ ಮಹದೇವಪ್ಪ(HC mahadevappa) ಅವರು ಮೈಸೂರು ದಸರಾ ಪೋಸ್ಟರ್ ಮತ್ತು ವೆಬ್ಸೈಟ್ನ್ನು ಬಿಡುಗಡೆ ಮಾಡಿದರು.
ಇನನು ಇದೆ ವೇಳೆ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ‘ಈ ಬಾರಿ ಸಾಂಪ್ರದಾಯಿಕ ದಸರಾ ಮಾಡಲು ತೀರ್ಮಾನ ಮಾಡಿದ್ದೇವೆ. 190ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದೇವೆ. ಹಾಗಾಗಿ ಈ ಬಾರಿ ಸಾಂಪ್ರದಾಯಿಕ ದಸರಾ ಮಾಡುವುದಕ್ಕೆ ತೀರ್ಮಾನ ಮಾಡಿದ್ದು, ಅಕ್ಟೊಬರ್ 15ರಂದು ಹಂಸಲೇಖ ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಆವತ್ತೇ ದಸರಾದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ಕೂಡ ನೀಡಲಿದ್ದೇವೆ ಎಂದರು.
ಇನ್ನು ಕಳೆದ ದಸರಾಗಿಂತ ಈ ಬಾರಿ ಕಡಿಮೆ ವೆಚ್ಚದ ದಸರಾ ಆಚರಣೆ ಮಾಡುತ್ತೇವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಇದಕ್ಕೋಸ್ಕರ 15 ಕೋಟಿ ಹಣ ಬಿಡುಗಡೆಯಾಗಿದೆ. ಈ ಬಾರಿ ಯುವದಸರಾ, ಯುವ ಸಂಭ್ರಮ, ಏರ್ ಶೋ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಇರುತ್ತದೆ. ಜೊತೆಗೆ ಈ ಬಾರಿ ಹೆಚ್ಚು ಪ್ರಾಯೋಜಿಕತ್ವದ ಮೂಲಕ ದಸರಾ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ