ಮೈಸೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ಬಂದ್ಗೆ ಜಿಲ್ಲಾಧಿಕಾರಿ ಆದೇಶ; 15 ಲಕ್ಷ ದಂಡ
ರವಿಗೌಡ ದೊಡ್ಡಪ್ಪ ಶಿವಣ್ಣ ಎಂಬುವರು 2016ರಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ಶಿವಣ್ಣರ ಅವರನ್ನು ಮೊದಲು ಬೇರೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2017ರಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆದಿತ್ಯ ಅಧಿಕಾರಿ ಆಸ್ಪತ್ರೆಗೆ ದಾಖಲಾಗಿತ್ತು. ಒಂದು ಆಪರೇಷನ್ಗಾಗಿ ನಾಲ್ಕು ತಿಂಗಳು ಚಿಕಿತ್ಸೆ ನೀಡಲಾಗಿತ್ತು. ಆಪರೇಷನ್ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಶಿವಣ್ಣ ಮೃತಪಟ್ಟಿದ್ದರು. ಮುಂದೇನಾಯ್ತು ಓದಿ...
ಮೈಸೂರು ನ.22: ನಗರದ ಗೋಕುಲಂ ಬಡಾವಣೆಯಲ್ಲಿರುವ ಆದಿತ್ಯ ಅಧಿಕಾರಿ ಆಸ್ಪತ್ರೆಗೆ (Hospital) ಬೀಗ ಹಾಕುವಂತೆ ಮತ್ತು ವೈದ್ಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಮೈಸೂರು (Mysore) ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ತಕ್ಷಣ ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಗೆ ಬೀಗ ಏಕೆ?
ರವಿಗೌಡ ದೊಡ್ಡಪ್ಪ ಶಿವಣ್ಣ ಎಂಬುವರು 2016ರಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ಶಿವಣ್ಣರ ಅವರನ್ನು ಮೊದಲು ಬೇರೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2017ರಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆದಿತ್ಯ ಅಧಿಕಾರಿ ಆಸ್ಪತ್ರೆಗೆ ದಾಖಲಾಗಿತ್ತು. ಒಂದು ಆಪರೇಷನ್ಗಾಗಿ ನಾಲ್ಕು ತಿಂಗಳು ಚಿಕಿತ್ಸೆ ನೀಡಲಾಗಿತ್ತು. ಆಪರೇಷನ್ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಶಿವಣ್ಣ ಮೃತಪಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಮೈಸೂರಿನ ರವಿಗೌಡ ಎಂಬುವರು ಆರೋಗ್ಯ ಇಲಾಖೆಯ ಜಾಗೃತಕೋಶದ ಜಾಗೃತಾಧಿಕಾರಿಗೆ ದೂರು ನೀಡಿದ್ದರು. ವೈದ್ಯರ ನಿರ್ಲಕ್ಷ್ಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ಆಸ್ಪತ್ರೆಯನ್ನು ಬಂದ್ ಮಾಡಿಸಿಬೇಕೆಂದು ದೂರಿನಲ್ಲಿ ದಾಖಲಿಸಿದ್ದರು. ಈ ಸಂಬಂಧ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಡಾ.ಚಂದ್ರಶೇಖರ್ ವಿರುದ್ಧ ತನಿಖೆ ನಡೆಸಲು ಆದೇಶಿಸಿತ್ತು.
ಇದನ್ನೂ ಓದಿ: ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು; ವೈದ್ಯರ ವಿರುದ್ಧ ಕುಟುಂಬಸ್ಥರ ಧರಣಿ
ತನಿಖೆ ವೇಳೆ ವೈದ್ಯ ಚಂದ್ರಶೇಖರ್ ಐದು ಅಂಶಗಳ ಲೋಪ ಎಸಗಿರುವುದು ಸಾಬೀತಾಗಿದೆ. 1. ಡಾ.ಚಂದ್ರಶೇಖರ್ ಅನಸ್ತೇಷಿಯ ವೈದ್ಯರಲ್ಲ. 2. ಅವಿದ್ಯಾವಂತ ನರ್ಸಿಂಗ್ ಸ್ಟಾಫ್ ನೇಮಕ ಮಾಡಿಕೊಂಡಿದ್ದಾರೆ. 3. ಅನಸ್ತೇಷಿಯಾ ವಿಷಯದಲ್ಲಿ ವಿದ್ಯಾರ್ಹತೆ ಹೊಂದಿಲ್ಲ. 4. ಅನಧಿಕೃತವಾಗಿ ಬಿಎಎಂಎಸ್ ವ್ಯಾಸಂಗ ಮಾಡಿರುವರನ್ನು ನೇಮಕ ಮಾಡಿಕೊಂಡಿದ್ದಾರೆ. 5. ರವಿಗೌಡ ದೊಡ್ಡಪ್ಪ ಶಿವಣ್ಣ ಸಾವಿಗೆ ಕಾರಣವಾಗಿರುವುದು. ಈ ಹಿನ್ನೆಲೆಯಲ್ಲಿ ಮೃತ ಕುಟುಂಬಸ್ಥರಿಗೆ 15 ಲಕ್ಷದ 60 ಸಾವಿರ ರೂ. ಪರಿಹಾರ ನೀಡುವಂತೆ 2023 ರ ಆಗಸ್ಟ್ 8 ರಂದು ಆದೇಶ ಹೊರಡಿಸಲಾಗಿತ್ತು.
ಈ ಬಗ್ಗೆ ಆದಿತ್ಯ ಅಧಿಕಾರಿ ಆಸ್ಪತ್ರೆ ವೈದ್ಯ ಡಾ.ಚಂದ್ರಶೇಖರ್ ಮಾತನಾಡಿ, ನಮಗೆ ಜಿಲ್ಲಾಧಿಕಾರಿಯಿಂದ ಯಾವುದೇ ಆದೇಶ ಬಂದು ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:54 am, Wed, 22 November 23