ಮೈಸೂರು: ತಂದೆಯ ಆತ್ಮಹತ್ಯೆಯಿಂದ ಮನನೊಂದು ಮಗ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಜಕ್ಕಳ್ಳಿ ಕಾಲೋನಿಯಲ್ಲಿ ನಡೆದಿದೆ. ತಂದೆ ನಾಗೇಗೌಡ(55), ಮಗ ಮಧು(24) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿಗಳು. ಹೌದು ಮನೆಯಲ್ಲಿ ತಂದೆ ನಾಗೇಗೌಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವಿಚಾರ ಮಗ ಮಧುವಿಗೆ ತಿಳಿದಿದೆ. ಆಘಾತಗೊಂಡ ಮಗ ಕೂಡ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇಣು ಬಿಗಿದುಕೊಂಡು ನಗರಸಭಾ ಸದಸ್ಯ ಆತ್ಮಹತ್ಯೆ
ಮಂಗಳೂರು: ಪುತ್ತೂರು ನಗರಸಭೆಯ ಸದಸ್ಯ ಶಿವರಾಮ ಸಫಲ್ಯ ಎಂಬಾತ ಉರಮಾಲ್ನ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವರಾಮ ಸಫಲ್ಯ ಅವರು ವಾರ್ಡ್ ನಂಬರ್ 1 ರ ಸದಸ್ಯರಾಗಿದ್ದರು. ಇನ್ನು ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್ ಸೇರಿದಂತೆ ಹಲವರು ಭೇಟಿಯಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ಕ್ರೈಮ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:49 am, Fri, 17 March 23