ಮೈಸೂರು ಜಿಲ್ಲಾ ಪೊಲೀಸರ ಮಿಂಚಿನ ಕಾರ್ಯಾಚರಣೆ; ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ಅಂಬರ್ ಗ್ರೀಸ್ ವಶ
ಕೇರಳ ಮೂಲದ ಮೂವರು ಒಂಬತ್ತುವರೆ ಕೆಜಿ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸಿದ್ದು ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್‌ನಲ್ಲಿ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಮೈಸೂರು: ಹೆಚ್.ಡಿ.ಕೋಟೆ ಮತ್ತು ಜಿಲ್ಲಾ ಸೆನ್ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಕೋಟ್ಯಾಂತರ ಬೆಲೆಬಾಳುವ ತಿಮಿಂಗಿಲದ ವಾಂತಿ ಎನ್ನಲಾಗುವ ಅಪರೂಪದ ಅಂಬರ್ ಗ್ರೀಸ್ ವಶಕ್ಕೆ ಪಡೆದಿದ್ದಾರೆ(Whale Ambergris). ಕೇರಳ ಮೂಲದ ಮೂವರು ಒಂಬತ್ತುವರೆ ಕೆಜಿ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸಿದ್ದು ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್‌ನಲ್ಲಿ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್, ಅಡಿಷನಲ್ ಎಸ್ಪಿ ನಂದಿನಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ. ಆರೋಪಿಗಳು ಕೇರಳ ರಾಜ್ಯದ ಕೊಚ್ಚಿನ್ ಸಮುದ್ರದಿಂದ ತಿಮಿಂಗಿಲದ ಅಂಬರ್ ಗ್ರೀಸ್ ತಂದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಕೇರಳ ಮೂಲದ ಮೂವರು ಆರೋಪಿಗಳ ಪೈಕಿ ಇಬ್ಬರು ಹಡಗು ನಡೆಸುವ ನಾವಿಕರು. ಇನ್ನು ಅರಣ್ಯ ಇಲಾಖೆ ಅಧಿಕಾರಿಗಳ ತಂಡ, ಆರೋಪಿಗಳು ಮಾರಲು ಯತ್ನಿಸಿದ್ದು ಅಂಬರ್ ಗ್ರೀಸ್ ಎಂದು ಖಚಿತ ಪಡಿಸಿದ್ದಾರೆ. ಅಂಬರ್ ಗ್ರೀಸ್‌ಗೆ ವಿದೇಶದಲ್ಲಿ ಅಪಾರವಾದ ಬೇಡಿಕೆ ಇದೆ. ಇದನ್ನು ತಿಳಿದ ಆರೋಪಿಗಳು ದುಡ್ಡ ಮಾಡಲು ಈ ಸಾಹಸಕ್ಕೆ ಕೈ ಹಾಕಿದ್ದಾರೆ. ಆರೋಪಿಗಳ ವಿರುದ್ದ ಹೆಚ್ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವು
ಬೆಂಗಳೂರು: ಜೈಲಿನ ಶೌಚಾಲಯದಲ್ಲಿ ಶೂ ಲೇಸ್ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್(Rowdy Sheeter) ಸಾವನ್ನಪ್ಪಿರುವ ಘಟನೆ ನಡೆದಿದೆ. ಸುನೀಲ್ ಮೃತ ರೌಡಿ ಶೀಟರ್. ಇತನ ಸಾವು ಇದೀಗ ಹಲವಾರು ಮೂಡಿಸಿದೆ. ಹೌದು ಶೂ ಲೇಸ್ನಿಂದ ನೇಣು ಬಿಗಿದುಕೊಂಡು ಸಾವನಪ್ಪಿದ ರೀತಿಯಲ್ಲಿ ಆತನ ಶವ ಪತ್ತೆಯಾಗಿದೆ. ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದ ಆತ. ಇನ್ನು ಹತ್ತು ದಿನಗಳಲ್ಲಿ ಅಂದರೆ ಜೂನ್.2 ಕ್ಕೆ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆಗಬೇಕಿದ್ದ. ಇನ್ನು ಈ ರೌಡಿಶೀಟರ್ ಸುನೀಲ್ ‘ಕಗ್ಗಲಿಪುರದಲ್ಲಿ ವಿನೋದ್ ಎಂಬಾತನನ್ನ ಕೊಲೆ ಮಾಡಿ ಜೈಲು ಸೇರಿದ್ದ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:08 am, Tue, 23 May 23