AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Covid Guidelines: ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಡಿಜೆಗೆ ಅವಕಾಶವಿಲ್ಲ, ಪಟಾಕಿ ಸಿಡಿಸುವುದಕ್ಕೂ ನಿಷೇಧ

New Year Celebration Guidelines for Mysuru: ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಡಿಜೆಗೆ ಅವಕಾಶವಿಲ್ಲ, ಪಟಾಕಿ ಸಿಡಿಸುವಂತಿಲ್ಲ. ಎಲ್ಲದಕ್ಕೂ ನಿಷೇಧ ಹೇರಲಾಗಿದೆ. ಈ ಬಗ್ಗೆ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಭಾನೋತ್ ಹೇಳಿಕೆ ಇಲ್ಲಿದೆ.

Mysore Covid Guidelines: ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಡಿಜೆಗೆ ಅವಕಾಶವಿಲ್ಲ, ಪಟಾಕಿ ಸಿಡಿಸುವುದಕ್ಕೂ ನಿಷೇಧ
ಮೈಸೂರಿನಲ್ಲಿ ಹೊಸ ವರ್ಷಾಚರಣೆ (ಫೋಟೋ: ಸಾಂದರ್ಭಿಕ ಚಿತ್ರ)Image Credit source: Reuters
TV9 Web
| Edited By: |

Updated on:Dec 26, 2022 | 3:02 PM

Share

ಮೈಸೂರು: ಹೊಸ ವರ್ಷಾಚರಣೆಗೆ (New Year’s Eve) ಡಿಜೆ (DJ) ಮತ್ತು ಪಟಾಕಿ ಸಿಡಿಸಲು (Firecrackers) ಅವಕಾಶ ಇಲ್ಲ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಭಾನೋತ್ (Mysore COP Ramesh Bhanot) ಹೇಳಿದ್ದಾರೆ. ನಗರದಲ್ಲಿ ಪಟಾಕಿ ಸಿಡಿಸುವಂತಿಲ್ಲ. ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅನುಚಿತವಾಗಿ ವರ್ತಿಸಬಾರದು. ವ್ಹೀಲಿಂಗ್, ರಸ್ತೆಯಲ್ಲಿ ಗುಂಪು ಸೇರಿ ಗಲಾಟೆ ಮಾಡುವಂತಿಲ್ಲ. ಕಾನೂನು ನಿಯಮ ಉಲ್ಲಂಘಿಸಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹೊಸ ವರ್ಷ ಆಚರಣೆ ತಡಾರಾತ್ರಿವರೆಗೆ ಅವಕಾಶ ನೀಡುವಂತೆ ಒತ್ತಾಯಗಳು ಕೇಳಿಬರುತ್ತಿವೆ. ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತರು, ರಾತ್ರಿ 1ರವರೆಗೆ ಪಾರ್ಟಿ ಅವಧಿ ವಿಸ್ತರಿಸುವಂತೆ ಮನವಿ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಸರ್ಕಾರದ ಮಾರ್ಗಸೂಚಿ ಅನ್ವಯ ನಿಯಮ ಜಾರಿಗೊಳಿಸುತ್ತೇವೆ. ಬಹುತೇಕ ಇನ್ನೆರಡು ದಿನಗಳಲ್ಲಿ ಮಾರ್ಗಸೂಚಿ ಬರುವ ನಿರೀಕ್ಷೆ ಇದೆ ಎಂದರು.

ಇದನ್ನೂ ಓದಿ: Mysore Bangalore Highway: ಬೆಂಗಳೂರು ಮೈಸೂರು ದಶಪಥ ರಸ್ತೆಗೆ ಕಾವೇರಿ ಎಕ್ಸ್‌ಪ್ರೆಸ್‌ವೇ ಎಂದು ಹೆಸರಿಡಲು ಪ್ರತಾಪ್ ಸಿಂಹ​, ನಿತಿನ್​ ಗಡ್ಕರಿಗೆ ಮನವಿ

ಕಿರಣ್ ಗೌಡ ಹೆಸರಿನಲ್ಲಿ ರೌಡಿ ಶೀಟರ್ ಇಲ್ಲ

ಬಿಜೆಪಿ ನಗರ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಗೌಡ (BJP City Yuva Morcha President Kiran Gowda) ರೌಡಿ ಶೀಟರ್ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷಣ (M.Lakshman) ಆರೋಪ ಮಾಡಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿದ ಪೊಲೀಸ್ ಆಯುಕ್ತರು, ಕಿರಣ್ ಗೌಡ ಹೆಸರಿನಲ್ಲಿ ರೌಡಿ ಶೀಟರ್ ಇಲ್ಲ. ಕಿರಣ್ ಗೌಡ ಹೆಸರು ರೌಡಿ ಪಟ್ಟಿಯಲ್ಲಿಲ್ಲ. ಆತನ ಮೇಲೆ ಬೇರೆ ಒಂದೆರಡು ಪ್ರಕರಣಗಳಿವೆ ಎಂದರು. ಅಲ್ಲದೆ, ಮೈಸೂರಿನಲ್ಲಿ ರೌಡಿಗಳ ಗಡಿಪಾರಿಗೆ ಮುಂದಾಗಿದ್ದೇವೆ. ಈಗಾಗಲೇ ಇಬ್ಬರನ್ನು ಗಡಿಪಾರು ಮಾಡಲಾಗಿದೆ. ಇನ್ನೂ ಐದು ಮಂದಿ ರೌಡಿಶೀಟರ್‌ಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಆದಷ್ಟು ಬೇಗ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Mon, 26 December 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ