AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ: ಜಂಬೂಸವಾರಿ ಪ್ರಮುಖ ಆಕರ್ಷಣೆಯಾದ 31 ಜಿಲ್ಲೆಗಳ 51 ಸ್ಥಬ್ಧಚಿತ್ರಗಳು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ರ ಜಂಬೂಸವಾರಿ ಮೆರವಣಿಗೆಯಲ್ಲಿ ಈ ಬಾರಿ 51 ಸ್ತಬ್ಧಚಿತ್ರಗಳ ಪ್ರದರ್ಶನಗೊಳ್ಳುತ್ತಿವೆ. ಮೈಸೂರು ಬಂಡಿಪಾಳ್ಯದ ಎಪಿಎಂಸಿ ಆವರಣದಲ್ಲಿ ಈ ಸ್ತಬ್ಧ ಚಿತ್ರ ನಿರ್ಮಾಣ ಕಾರ್ಯ ನಡೆದಿದ್ದು, 31 ಆಯಾ ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ ವೈಶಿಷ್ಟ್ಯ , ಆಚಾರ ವಿಚಾರ, ಭೌಗೋಳಿಕ ಹಿನ್ನೆಲೆ ಸಾರುವ ಸ್ಥಬ್ಧ ಚಿತ್ರಗಳು ಇದಾಗಿವೆ.

ಮೈಸೂರು ದಸರಾ: ಜಂಬೂಸವಾರಿ ಪ್ರಮುಖ ಆಕರ್ಷಣೆಯಾದ 31 ಜಿಲ್ಲೆಗಳ 51 ಸ್ಥಬ್ಧಚಿತ್ರಗಳು
ಜಂಬೂಸವಾರಿ ಪ್ರಮುಖ ಆಕರ್ಷಣೆಯಾದ 31 ಜಿಲ್ಲೆಗಳ 51 ಸ್ಥಬ್ಧಚಿತ್ರಗಳು
ರಾಮ್​, ಮೈಸೂರು
| Edited By: |

Updated on:Oct 12, 2024 | 3:44 PM

Share

ಮೈಸೂರು, ಅ.12: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿಯ ಜಂಬೂಸವಾರಿ ಮೆರವಣಿಗೆಯಲ್ಲಿಂದು ಅರಮನೆಯಿಂದ ಬನ್ನಿಮಂಟಪದವರೆಗೆ 31 ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ ವೈಶಿಷ್ಟ್ಯ, ಆಚಾರ-ವಿಚಾರ, ಭೌಗೋಳಿಕ ಹಿನ್ನೆಲೆ ಹಾಗೂ ಇಲಾಖಾವಾರು, ನಿಗಮ ಮಂಡಳಿ , ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತ 51 ಸ್ತಬ್ಧಚಿತ್ರಗಳ ಪ್ರದರ್ಶನ ಮಾಡಲಾಗುತ್ತಿದೆ.

ಸ್ತಬ್ದ ಚಿತ್ರಗಳ ವಿವರ ಇಲ್ಲಿದೆ

1. ಯಾದಗಿರಿ ಜಿಲ್ಲೆ – ತಿಂಥಣಿ ಮೌನೇಶ್ವರ ದೇವಾಲಯ

2. ಕೊಡಗು ಜಿಲ್ಲೆ – ಭೂ ಸಂರಕ್ಷಣೆ, ಹಾರಂಗಿ ಜಲಾಶಯ, ಕಾಫಿ -ಕಾಳುಮೆಣಸು ತೋಟ ಹಾಗೂ ಆನೆ ಕ್ಯಾಂಪ್

3. ರಾಯಚೂರು ಜಿಲ್ಲೆ – ಮುದ್ಗಲ್ ಕೋಟೆ ಮತ್ತು ಗಾಣದಾಳ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ.

4. ಚಾಮರಾಜನಗರ ಜಿಲ್ಲೆ – ಸೋಲಿಗರ ಸೊಗಡು ಒಮ್ಮೆ ನೀ ಬಂದು ನೋಡು

5. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ – ಕ್ಷೀರ ಭಾಗ್ಯ ಮತ್ತು ಕ್ಷೀರ ಸಂಜೀವಿನಿ ಯೋಜನೆಗಳ ಯಶಸ್ವಿ ಪಥ

6. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ – ಮೈಸೂರು ಸ್ಯಾಂಡಲ್ ಸೋಪ್ ಕಿರು ಪರಿಚಯ

7. ವಿಜಯನಗರ ಜಿಲ್ಲೆ – ವಿಜಯನಗರ ಸಾಮ್ರಾಜ್ಯದ ವೈಭವ

8. ಬೆಂಗಳೂರು ನಗರ ಜಿಲ್ಲೆ – ರಾಷ್ಟಪಿತ ಮಹಾತ್ಮಗಾಂಧೀಜಿ ಮತ್ತು ವಿಧಾನಸೌಧ

9. ಬೀದರ್ ಜಿಲ್ಲೆ – ಕನ್ನಡ ಪಟ್ಟದೇವರು ಪೂಜ್ಯಶ್ರೀ ಮದ್ ಘನಲಿಂಗ ಚಕ್ರವರ್ತಿ ಚೆನ್ನಬಸವ ಪಟ್ಟದೇವರು

10. ಕೊಪ್ಪಳ ಜಿಲ್ಲೆ – ಕಿನ್ನಾಳ ಕಲೆ, ಶ್ರೀ ಹುಲಿಗಮ್ಮದೇವಿ ದೇವಸ್ಥಾನ, ಹಿರೇಬೆಣಕಲ್ ಶಿಲಾ ಸಮಾಧಿ, ಇಟಗಿಯ ಮಹದೇವ ದೇವಾಲಯ

11. ಪ್ರವಾಸೋದ್ಯಮ ಇಲಾಖೆ – ಒಂದು ರಾಜ್ಯ ಹಲವು ಜಗತ್ತುಗಳು

12. ಡಾಕ್ಟರ್ ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ – ನಿಗಮದ ಉತ್ಪನ್ನಗಳ ಮಾದರಿ

13. ಉತ್ತರ ಕನ್ನಡ ಜಿಲ್ಲೆ – ಮುರುಡೇಶ್ವರದ ಬೃಹತ್ ಶಿವನ ಮೂರ್ತಿ

14. ಬೆಂಗಳೂರು ಗ್ರಾಮಾಂತರ ಜಿಲ್ಲೆ – ಪೊಕ್ಕುಂದ/ಹೆಗ್ಗುಂದದ ರಾಮದೇವರ ಬೆಟ್ಟ, ನಿಜಗಲ್ಲು ದುರ್ಗ, ಬಿನ್ನ ಮಂಗಲ ದೇವಸ್ಥಾನ

15. ದಾವಣಗೆರೆ ಜಿಲ್ಲೆ – ನಾವು ಮನುಜರು

16. ಕೋಲಾರ ಜಿಲ್ಲೆ – ವಿಶ್ವವಿಖ್ಯಾತ ಶ್ರೀ ಕೋಟಿಲಿಂಗೇಶ್ವರ ಸ್ವಾಮಿ ದೇವಸ್ಥಾನದ ಪರಿಚಯ

17. ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ – ಕರ್ನಾಟಕ ರೇಷ್ಮೆ ನಮ್ಮ ಹೆಮ್ಮೆ

18. ಕಾರ್ಮಿಕ ಇಲಾಖೆ – ಕಾರ್ಮಿಕರ ಹಿತ ರಕ್ಷಣೆ

19. ಉಡುಪಿ ಜಿಲ್ಲೆ – ಸಾಂಸ್ಕೃತಿಕ ವೈಭವ ಹಾಗೂ ಕರಾವಳಿಯ ಸೊಬಗು

20. ಶಿವಮೊಗ್ಗ ಜಿಲ್ಲೆ – ಸೊರಬ ತಾಲೂಕಿನ ಕೋಟಿಪುರ ಕೈತಭೇಶ್ವರ ದೇವಾಲಯ

21. ಬಳ್ಳಾರಿ ಜಿಲ್ಲೆ – ಕುರುಗೋಡು ದೇವಸ್ಥಾನ

22. ಬಾಗಲಕೋಟೆ ಜಿಲ್ಲೆ – ರತ್ನನ ಕಾವ್ಯ ಗದಾಯುದ್ಧ

23. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ – ಗ್ರಾಮೀಣ ಜನರ ಆರೋಗ್ಯದಲ್ಲಿ ಸುಸ್ಥಿರತೆ ಸಾಧಿಸುವುದು

24. ಸಮಾಜ ಕಲ್ಯಾಣ ಇಲಾಖೆ – ಸಮ ಸಮಾಜ ನಿರ್ಮಾಣಕ್ಕಾಗಿ

25. ಹಾವೇರಿ ಜಿಲ್ಲೆ – ಏಲಕ್ಕಿ ಕಂಪಿನ ನಾಡು ಹಾಗೂ ಸಂತರ, ಸಾಹಿತಿಗಳ ನೆಲೆಬೀಡು

26. ಮಂಡ್ಯ ಜಿಲ್ಲೆ – ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಅಣೆಕಟ್ಟು

27. ರಾಮನಗರ ಜಿಲ್ಲೆ – ರಾಮನಗರ ಜಿಲ್ಲಾ ವೈವಿಧ್ಯತೆಗಳು

28. ಕಲಬುರ್ಗಿ ಜಿಲ್ಲೆ – ತೊಗರಿಯ ಕಣಜ ಕಲಬುರ್ಗಿ ಜಿಲ್ಲೆ ಅಭಿವೃದ್ಧಿಯತ್ತ ದಾಪುಗಾಲು

29. ಕಾವೇರಿ ನೀರಾವರಿ ನಿಗಮ – ಏಕತೆಯಲ್ಲಿ ಅನೇಕತೆ ಸಾರುವ ಅಣೆಕಟ್ಟು ಹಾಗೂ ಜಲ ಸಂರಕ್ಷಣೆ

30. ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ – ವನ್ಯಜೀವಿ ಸಂರಕ್ಷಣೆ ನಮ್ಮೆಲ್ಲರ ಹೊಣೆ

31. ವಿಜಯಪುರ ಜಿಲ್ಲೆ – ಬಸವನಬಾಗೇವಾಡಿಯ ಮೂಲ ನಂದಿ ಬಸವೇಶ್ವರ ದೇವಾಲಯ

32. ದಕ್ಷಿಣ ಕನ್ನಡ ಜಿಲ್ಲೆ – ಕರಾವಳಿಯ ವಾಣಿಜ್ಯ ಮತ್ತು ಪ್ರವಾಸೋದ್ಯಮ

33. ಮೈಸೂರು ಜಿಲ್ಲೆ – ಮಾನವಕುಲದ ಸಮಾನತೆ, ಧಾರ್ಮಿಕ ಬೆಳಕಿನಿಂದ ಸಾಂವಿಧಾನಿಕ ನ್ಯಾಯದವರೆಗೆ

34. ಬೆಳಗಾವಿ ಜಿಲ್ಲೆ – ಕಿತ್ತೂರು ಕದನದ 200ನೇ ವರ್ಷಾಚರಣೆ

35. ಕೇಂದ್ರೀಯ ಆಹಾರ ಸಂಶೋಧನಾ ಸಂಸ್ಥೆ – ಸಿಎಫ್ಟಿಆರ್‌ಐ ಮೈಸೂರು – ಕೃಷಿ ಸರಕುಗಳ ಮೌಲ್ಯವರ್ಧನೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಂಸ್ಥೆಯ ಕೊಡುಗೆ

36. ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆ – ಇಲಾಖೆಯ ಕಿರು ಪರಿಚಯ

37. ಚಿತ್ರದುರ್ಗ ಜಿಲ್ಲೆ – ಚಿತ್ರದುರ್ಗದ ಕೋಟೆ ಮತ್ತು ಗಾಳಿಯಂತ್ರಗಳು

38. ಚಿಕ್ಕ ಬಳ್ಳಾಪುರ ಜಿಲ್ಲೆ – ನಂದಿರೋಪ್ ವೇ

39. ಗದಗ ಜಿಲ್ಲೆ – ಗ್ರಾಮ ಸಭೆ-ಹಳ್ಳಿಯ ವಿಧಾನಸಭೆ

40. ಧಾರವಾಡ ಜಿಲ್ಲೆ – ಇಸ್ರೋ‌ ಗಗನಯಾನದಲ್ಲಿ ಹಣ್ಣಿನ ನೊಣಗಳು

41. ಭಾರತೀಯ ರೈಲ್ವೆ – ವಂದೇ ಭಾರತ್ ಎಕ್ಸ್‌ಪ್ರೆಸ್‌

42. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – ಹೆಣ್ಣು ಭ್ರೂಣಹತ್ಯೆ ತಡೆ ಅಂಧತ್ವ ಶ್ರವಣ ದೋಷ ನಿವಾರಣ ಕಾರ್ಯಕ್ರಮ

43. ಹಾಸನ ಜಿಲ್ಲೆ – ವಿಶ್ವ ಪಾರಂಪರಿಕ ತಾಣ ಬೇಲೂರು ಮತ್ತು ಹಳೆಬೀಡು

44. ಚಿಕ್ಕಮಗಳೂರು ಜಿಲ್ಲೆ – ತೇಜಸ್ವಿ ವಿಸ್ಮಯ ಲೋಕ

45. ತುಮಕೂರು ಜಿಲ್ಲೆ – ಔಷಧ ಸಸ್ಯಗಳ ಸಂಜೀವಿನಿ ಪರ್ವತ ಸಿದ್ದರಬೆಟ್ಟ ಮತ್ತು ಬಯಲುಸೀಮೆಯನ್ನಾಳಿದ ಹೆಮ್ಮೆಯ ಅರಸರು

46. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ – ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುಷ್ಠಾನ ಮಾಡಲಾಗುತ್ತಿರುವ ಕಾರ್ಯಕ್ರಮಗಳು

47. ವಾರ್ತಾ ಇಲಾಖೆ – ವಿಶ್ವಗುರು ಬಸವಣ್ಣ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ

48. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ – ನಿಮ್ಮ ಮನೆಯೇ ನಿರಂತರ ಪಾಠಶಾಲೆ

49. ಕೌಶಲ್ಯಾಭಿವೃದ್ಧಿ ಇಲಾಖೆ – ಕೌಶಲ್ಯ ಕರ್ನಾಟಕ

50. ಸ್ತಬ್ದಚಿತ್ರ ಉಪ ಸಮಿತಿ – ಸಾಮಾಜಿಕ ನ್ಯಾಯ

51. ಸ್ತಬ್ದಚಿತ್ರ ಉಪಸಮಿತಿ – ಆನೆ ಬಂಡಿ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ರ ಜಂಬೂಸವಾರಿ ಮೆರವಣಿಗೆಯಲ್ಲಿ ಈ ಬಾರಿ 51 ಸ್ತಬ್ಧಚಿತ್ರಗಳ ಪ್ರದರ್ಶನಗೊಳ್ಳುತ್ತಿವೆ. ಮೈಸೂರು ಬಂಡಿಪಾಳ್ಯದ ಎಪಿಎಂಸಿ ಆವರಣದಲ್ಲಿ ಈ ಸ್ತಬ್ಧ ಚಿತ್ರ ನಿರ್ಮಾಣ ಕಾರ್ಯ ನಡೆದಿದ್ದು, 31 ಆಯಾ ಜಿಲ್ಲೆಗಳ ಕಲೆ, ಸಾಹಿತ್ಯ, ಸಂಸ್ಕೃತಿ ವೈಶಿಷ್ಟ್ಯ , ಆಚಾರ ವಿಚಾರ, ಭೌಗೋಳಿಕ ಹಿನ್ನೆಲೆ ಸಾರುವ ಸ್ಥಬ್ಧ ಚಿತ್ರಗಳು ಇದಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Sat, 12 October 24

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್