AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ರಾಜಮನೆತನದ ಆನೆಗಳನ್ನು ಗುಜರಾತ್​ಗೆ ಕಳುಹಿಸಲು ನಿರ್ಧಾರ; ಕಾರಣ ಇಲ್ಲಿದೆ

ಅರಮನೆ ಆನೆಗಳು ದಸರಾ ಪರಂಪರೆಯ ಪೂಜೆ ವೇಳೆ ಬಳಕೆಯಾಗುತ್ತಿದ್ದವು. ಪೂಜಾ ಕೈಂಕರ್ಯದಲ್ಲಿ ಭಾಗಿಯಾಗುತ್ತಿದ್ದವು. ಇದೀಗ ಎರಡು ಆನೆಗಳನ್ನು ಉಳಿಸಿಕೊಂಡು ಉಳಿದ ಆನೆಗಳ ರವಾನೆಗೆ ನಿರ್ಧಾರ ಮಾಡಲಾಗಿದೆ.

ಮೈಸೂರು ರಾಜಮನೆತನದ ಆನೆಗಳನ್ನು ಗುಜರಾತ್​ಗೆ ಕಳುಹಿಸಲು ನಿರ್ಧಾರ; ಕಾರಣ ಇಲ್ಲಿದೆ
ಆನೆಗಳು
TV9 Web
| Updated By: sandhya thejappa|

Updated on: Sep 21, 2021 | 11:30 AM

Share

ಮೈಸೂರು: ರಾಜಮನೆತನದ ಆನೆಗಳನ್ನು (Elephants) ಗುಜರಾತ್​ಗೆ ಕಳುಹಿಸಲು ಸಿದ್ಧತೆ ನಡೆಯುತ್ತಿದೆ. ಅರಮನೆಯಲ್ಲಿರುವ ಪ್ರತಿ ಆನೆಗಳನ್ನು ನಿರ್ವಹಣೆ ಮಾಡಲು ದಿನಕ್ಕೆ 10 ಸಾವಿರ ರೂ. ಖರ್ಚಾಗುತ್ತಿದೆ. ತಿಂಗಳಿಗೆ 6 ಆನೆಗಳ ನಿರ್ವಹಣೆಗೆ ಸುಮಾರು 18 ಲಕ್ಷ ರೂ. ವೆಚ್ಚವಾಗುತ್ತಿದೆ. ಹೀಗಾಗಿ ನಾಲ್ಕು ಆನೆಗಳನ್ನು ಗುಜರಾತ್​ಗೆ ಕಳುಹಿಸಲು ಸಿದ್ಧತೆ ನಡೆಯುತ್ತಿದೆ. ಸದ್ಯ ಆರು ಆನೆಗಳಿದ್ದು, ಇದರಲ್ಲಿ ನಾಲ್ಕು ಆನೆಗಳು ಗುಜರಾತ್​ಗೆ ಕಳುಹಿಸಲಾಗುತ್ತದೆ. ಇನ್ನುಳಿದ ಎರಡು ಆನೆಗಳು ಅರಮನೆಯಲ್ಲೇ ಉಳಿದುಕೊಳ್ಳಲಿವೆ.

ಅರಮನೆ ಆನೆಗಳು ದಸರಾ ಪರಂಪರೆಯ ಪೂಜೆ ವೇಳೆ ಬಳಕೆಯಾಗುತ್ತಿದ್ದವು. ಪೂಜಾ ಕೈಂಕರ್ಯದಲ್ಲಿ ಭಾಗಿಯಾಗುತ್ತಿದ್ದವು. ಇದೀಗ ಎರಡು ಆನೆಗಳನ್ನು ಉಳಿಸಿಕೊಂಡು ಉಳಿದ ಆನೆಗಳ ರವಾನೆಗೆ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ರಾಜಮನೆತನದವರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ. ಸೀತಾ, ರೂಬಿ, ರಾಜೇಶ್ವರಿ, ಜೆಮಿನಿ ಹೆಸರಿನ ಆನೆಗಳು ಗುಜರಾತ್​ಗೆ ಕಳುಹಿಸಲಾಗುತ್ತದೆ. ಇನ್ನುಳಿದ ಚಂಚಲ್ ಮತ್ತು ಪ್ರೀತಿ ಹೆಸರಿನ ಎರಡು ಆನೆಗಳು ಅರಮನೆಯಲ್ಲೇ ಉಳಿಯಲಿವೆ.

ಗುಜರಾತ್ ಇಸ್ಕಾನ್​ಗೆ ಈ ಆನೆಗಳನ್ನು ಕಳುಹಿಸಲಾಗುತ್ತಿದೆ. ಅಲ್ಲಿ ಈಗಾಗಲೇ 50 ಆನೆಗಳಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.

ದಸರಾ ಉದ್ಘಾಟನೆಗೆ 15 ದಿನ ಮಾತ್ರ ಬಾಕಿ ವಿಶ್ವ ಪ್ರಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೇವಲ 15 ದಿನ ಮಾತ್ರ ಬಾಕಿಯಿದೆ. ಈವರೆಗೂ ದಸರಾ ಉದ್ಘಾಟಕರು ಯಾರೆಂದು ನಿರ್ಧರಿಸಿಲ್ಲ. ಉದ್ಘಾಟಕರ ವಿಚಾರವಾಗಿ ಯಾವುದೇ ಚರ್ಚೆಯೂ ಆಗಿಲ್ಲ. ಇದುವರೆಗೂ ಯಾರೊಬ್ಬರ ಹೆಸರನ್ನೂ ಸರ್ಕಾರ ಪ್ರಸ್ತಾಪಿಸಿಲ್ಲ.

ಇದನ್ನೂ ಓದಿ

ಬಾಗಲಕೋಟೆ: ಹಳೆ ವಿದ್ಯಾರ್ಥಿಗಳಿಂದ ಹೊಸ ರೂಪ ಪಡೆದ ಸರ್ಕಾರಿ ಶಾಲೆ; ಮಕ್ಕಳನ್ನು ಆಕರ್ಷಿಸುತ್ತಿದೆ ಸ್ಮಾರ್ಟ್​ ಕ್ಲಾಸ್​ ಪಾಠ

ಮಂಗಳೂರಿನಲ್ಲಿ ಮಹಿಳೆಯರ ಮೇಲೆ ಹಲ್ಲೆ ಪ್ರಕರಣ; ಲೆಕ್ಚರರ್ ನನ್ನ ಮೇಲೆ ಬ್ಲ್ಯಾಕ್ ಮ್ಯಾಜಿಕ್ ಮಾಡಿದ್ದಾರೆ ಎಂದ ಆರೋಪಿ

(Mysore elephants are scheduled to be sent to Gujarat)