ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ,ಹತ್ಯೆ ಪ್ರಕರಣ ಬೆಳಕಿಗೆ ಬಂದು 6 ದಿನವಾದ್ರೂ ಮಹದೇವಪ್ಪ ಡೋಂಟ್​ಕೇರ್​

ಮೈಸೂರಿನ ಎರಡು ಅನಧಿಕೃತ ಆಸ್ಪತ್ರೆಗಳು‌ ಕಳೆದ ಮೂರು ವರ್ಷಗಳಿಂದ ಹೆಣ್ಣುಭ್ರೂಣ ಹತ್ಯೆ ನಡೆಸುತ್ತಿದ್ದವು. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಗೊತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದರಾ ಎಂಬ ಅನುಮಾನ ಜನರಲ್ಲಿ ಮೂಡಿದೆ. ಇಷ್ಟೆಲ್ಲ ವೈಫಲ್ಯಗಳಿದ್ದರೂ ಸಚಿವ ಹೆಚ್​.ಸಿ ಮಹದೇವಪ್ಪ ಅವರು ತಮಗೆ ಸಂಬಂಧವಿಲ್ಲ ಎಂಬಂತೆ ಇದ್ದಾರೆ.

ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ,ಹತ್ಯೆ ಪ್ರಕರಣ ಬೆಳಕಿಗೆ ಬಂದು 6 ದಿನವಾದ್ರೂ ಮಹದೇವಪ್ಪ ಡೋಂಟ್​ಕೇರ್​
ಸಚಿವ ಹೆಚ್​ ಸಿ ಮಹದೇವಪ್ಪ
Edited By:

Updated on: Nov 30, 2023 | 1:47 PM

ಬೆಂಗಳೂರು ನ.30: ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಕರ್ನಾಟಕದಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ (Foetus Gender Detection, Murder Case) ನಡೆದಿರುವುದು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಮೈಸೂರು (Mysore) ಜಿಲ್ಲೆಯಲ್ಲಿ ನಡೆದ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದು ಆರು ದಿನಗಳು ಕಳೆದಿವೆ. ಈ ಬಗ್ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್​. ಸಿ.ಮಹದೇವಪ್ಪ (HC Mahadevappa)  ಇದುವರೆಗೂ ತುಟಿಪಿಟಕ ಅಂದಿಲ್ಲ. ಘಟನೆ ಬಗ್ಗೆ ಒಂದು ಸಭೆ ಕೂಡ ನಡೆಸಿಲ್ಲ. ಸಚಿವರ ನಡೆ ಹಲವು ಅನುಮಾನಕ್ಕೆ ಕಾರಣವಾಗಿದೆ.

ಮೈಸೂರಿನ ಎರಡು ಅನಧಿಕೃತ ಆಸ್ಪತ್ರೆಗಳು‌ ಕಳೆದ ಮೂರು ವರ್ಷಗಳಿಂದ ಹೆಣ್ಣುಭ್ರೂಣ ಹತ್ಯೆ ನಡೆಸುತ್ತಿದ್ದವು. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಗೊತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದರಾ ಎಂಬ ಅನುಮಾನ ಜನರಲ್ಲಿ ಮೂಡಿದೆ. ಇಷ್ಟೆಲ್ಲ ವೈಫಲ್ಯಗಳಿದ್ದರೂ ಸಚಿವ ಹೆಚ್​.ಸಿ ಮಹದೇವಪ್ಪ ಅವರು ತಮಗೆ ಸಂಬಂಧವಿಲ್ಲ ಎಂಬಂತೆ ಇದ್ದಾರೆ.

ಸಿಬಿಐ ತನಿಖೆ ನಡೆಸುವಂತೆ ಸಿಎಂಗೆ ಮನವಿ: ಚಲುವರಾಯಸ್ವಾಮಿ

ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇವೆ. ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಭ್ರೂಣಲಿಂಗ ಹತ್ಯೆ ನಡೆದಿದೆ. ಹೀಗಾಗಿ ಸಿಬಿಐ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡುತ್ತೇವೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದರು.

ಮೂರು ತಿಂಗಳ ಹಿಂದೆಯೇ ಆಸ್ಪತ್ರೆ ಕ್ಲೋಸ್

ಮಂಡ್ಯದ ಆಲೆಮನೆಯಲ್ಲಿ ಗರ್ಭದ ಸ್ಕ್ಯಾನಿಂಗ್‌ ಮಾಡಿ ಲಿಂಗಪತ್ತೆ ಮಾಡ್ತಿದ್ದ ಕಿರಾತಕರು, ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ಮಾಡುತ್ತಿದ್ದರು. ಮೂರು ತಿಂಗಳ ಹಿಂದೆಯೇ ಈ ಆಸ್ಪತ್ರೆ ಕ್ಲೋಸ್ ಆಗಿದೆ. ಆದರೆ ಆರೋಗ್ಯ ಇಲಾಖೆ ಅಧಿಕಾರಿಗಳು ಮಾತ್ರ ಮಂಗಳವಾರ ರಾತ್ರಿ ಆಸ್ಪತ್ರೆ ಗೋಡೆಗೆ ನೋಟಿಸ್ ಅಂಟಿಸಿದ್ದಾರೆ. ನೋಟಿಸ್‌ನಲ್ಲಿ ಐದು ತಿಂಗಳ ಹಿಂದಿನ ದಿನಾಂಕ ನಮೂದು ಮಾಡಲಾಗಿದ್ದು, ಮೈಸೂರು ತಾಲೂಕು ಆರೋಗ್ಯಧಿಕಾರಿ ಸಹಿ ಕೂಡಾ ಇದೆ. ಇಷ್ಟಾದ್ರೂ ನೋಟಿಸ್ ಯಾರು ಕೊಟ್ಟಿದ್ದಾರೆ ಗೊತ್ತಿಲ್ಲ ಎಂದು ಡಿಹೆಚ್‌ಒ ಹೇಳುತ್ತಿದ್ದಾರೆ. ಇದನ್ನೆಲ್ಲಾ ನೋಡುತ್ತಿದ್ದರೆ ಆರೋಗ್ಯ ಅಧಿಕಾರಿಗಳೇ ಈ ಕೇಸ್‌ನಲ್ಲಿ ಭಾಗಿಯಾಗಿದ್ದಾರಾ ಎನ್ನುವ ಅನುಮಾನಗಳು ವ್ಯಕ್ತವಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ