AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇನ್ಮುಂದೆ ಕಟ್ಟುನಿಟ್ಟಿನ ಕ್ರಮ, ರೂಲ್ಸ್​ ಉಲ್ಲಂಘಿಸಿದ್ರೆ ದಂಡ ಫಿಕ್ಸ್

ಪ್ರಸಿದ್ಧ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ 'ತ್ಯಾಜ್ಯದ ಬೆಟ್ಟ' ದಿನೇ ದಿನೆ ಬೆಳೆಯುತ್ತಿದೆ. ಹೀಗಾಗಿ ಮೈಸೂರು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಎಲ್ಲೊಂದರಲ್ಲಿ ತ್ಯಾಜ್ಯ ಬಿಸಾಡುವುದು, ಪ್ಲಾಸ್ಟಿಕ್ ಬಿಸಾಕಿದರೆ ದಡ್ಡ ಹಾಕಲು ತೀರ್ಮಾನಿಸಿದ್ದು, ಒಂದೊಂದಕ್ಕೆ ಒಂದು ದಂಡ ಫಿಕ್ಸ್ ಮಾಡಲಾಗಿದೆ. ಹಾಗಾದ್ರೆ, ಯಾವುದಕ್ಕೆ ಎಷ್ಟು ದಂಡ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇನ್ಮುಂದೆ ಕಟ್ಟುನಿಟ್ಟಿನ ಕ್ರಮ, ರೂಲ್ಸ್​ ಉಲ್ಲಂಘಿಸಿದ್ರೆ ದಂಡ ಫಿಕ್ಸ್
ಚಾಮುಂಡಿಬೆಟ್ಟ
ರಾಮ್​, ಮೈಸೂರು
| Edited By: |

Updated on:Aug 17, 2023 | 9:07 AM

Share

ಮೈಸೂರು, (ಆಗಸ್ಟ್ 17): ಮೀಸಲು ಅರಣ್ಯ ಪ್ರದೇಶವಾಗಿರುವ ಮೈಸೂರಿನ ಚಾಮುಂಡಿಬೆಟ್ಟ (Mysuru Chamundi Betta) ಈಗ ಕಸದ ಗುಡ್ಡೆಯಾಗಿ ಮಾರ್ಪಡುತ್ತಿದೆ. ನಾಡ ಅದಿದೇವತೆ ಚಾಮುಂಡೇಶ್ವರಿ ನೆಲೆಸಿದ್ದರೂ ಧಾರ್ಮಿಕ ಕೇಂದ್ರ ಎನ್ನುವ ಭಾವನೆಯೂ ಇಲ್ಲದಂತೆ ಎಲ್ಲೆಂದರಲ್ಲಿ ಕಸದ ರಾಶಿಯನ್ನೇ ಹಾಕಲಾಗುತ್ತಿದೆ. ಹೀಗಾಗಿ ಚಾಮುಂಡಿಬೆಟ್ಟವನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಮೈಸೂರು ಅರಣ್ಯ ಸಂರಕ್ಷಣಾಧಿಕಾರಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ರಾಜ್ಯ ಅಲ್ಲದೇ ಹೊರ ರಾಜ್ಯ, ದೇಶಗಳಿಂದಲೂ ದೇವರ ದರ್ಶನಕ್ಕಾಗಿ ನಿತ್ಯ ಸಾವಿರಾರು ಭಕ್ತರು ಬೆಟ್ಟಕ್ಕೆ ಬರುತ್ತಿದ್ದು, ಅವರು ತಿನ್ನುವ ತಿಂಡಿ ಪೊಟ್ಟಣ, ಬಿಸ್ಕತ್ ಕವರ್‌ಗಳು, ನೀರು, ಜ್ಯೂಸ್ ಬಾಟಲಿಗಳು ರಸ್ತೆಯ ಇಕ್ಕೆಲಗಳಲ್ಲಿ ಬಿದ್ದು, ಪರಿಸರಕ್ಕೆ ಹಾನಿಯುಂಟು ಮಾಡುತ್ತಿವೆ. ಇದರಿಂದ ಎಚ್ಚೆತ್ತಕೊಂಡಿರುವ ಮೈಸೂರು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದೆ.

ಚಾಮುಂಡಿಬೆಟ್ಟ ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಪ್ಲಾಸ್ಟಿಕ್ ಬಿಸಾಕಿದರೆ 500 ರೂ ದಂಡ. ಮೊದಲ ಬಾರಿಗೆ ತ್ಯಾಜ್ಯ ಬಿಸಾಡಿದರೆ 2,500 ದಂಡ, ಎರಡನೇ ಬಾರಿಗೆ 5 ಸಾವಿರ ರೂ. ಇನ್ನು ಮೂರನೇ ಬಾರಿಗೆ 10 ಸಾವಿರ ಹಾಗೂ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಚಾಮುಂಡಿಬೆಟ್ಟದ ಅಂಗಡಿಯವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಸೆಪ್ಟೆಂಬರ್ 1 ರಿಂದ ಆದೇಶ ಜಾರಿಗೆ ಬರಲಿದೆ. ಹಾಗಾದ್ರೆ, ಯಾವುದಕ್ಕೆ ಎಷ್ಟೆಷ್ಟು ದಂಡ ಎನ್ನುವ ವಿವರ ಈ ಕೆಳಗಿನಂತಿದೆ.

ಇದನ್ನೂ ಓದಿ: ಮೈಸೂರು: ಐತಿಹಾಸಿಕ ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ: ಹೈಕೋರ್ಟ್ ಆದೇಶ, ಆತಂಕದಲ್ಲಿ ವ್ಯಾಪಾರಿಗಳು

  • ಸ್ಟಿಕ್ ಬಿಸಾಕಿದರೆ 500 ರೂ ದಂಡ
  • ಮೊದಲ ಬಾರಿಗೆ ತ್ಯಾಜ್ಯ ಬಿಸಾಡಿದರೆ 2,500 ರೂ. ದಂಡ
  • ಎರಡನೇ ಬಾರಿಗೆ 5 ಸಾವಿರ ರೂ.
  • ಮೂರನೇ ಬಾರಿಗೆ 10 ಸಾವಿರ ಹಾಗೂ ಲೈಸನ್ಸ್ ರದ್ದು
  • ಅರಣ್ಯದ ಒಳಗೆ ತೆರಳಿದರೆ 500 ರೂ. ದಂಡ
  • ನಿರ್ಬಂಧಿತ ಪ್ರದೇಶದಲ್ಲಿ ವಾಹನ ನಿಲುಗಡೆ ಮಾಡಿದರೆ 1 ಸಾವಿರ ರೂ. ದಂಡ
  • ರಾತ್ರಿ 10 ರಿಂದ ಬೆ 6 ಗಂಟೆಯವರೆಗೆ ಚಾಮುಂಡಿಬೆಟ್ಟಕ್ಕೆ ನಿರ್ಬಂಧ
  • ಮದ್ಯ ಹಾನಿಕಾರಕ ವಸ್ತು ಸಾಗಿಸಿದರೆ 5 ಸಾವಿರ ರೂ. ದಂಡ
  • ಕಾಡು ಪ್ರಾಣಿಗಳಿಗೆ ಆಹಾರ ನೀಡಿದರೆ 1 ಸಾವಿರ ರೂ. ದಂಡ

ಅಕ್ರಮ ಮಣ್ಣು ಸಾಗಾಟ ತಡೆದ ರೈತರು

ಅಕ್ರಮ ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿಯನ್ನು ರೈತರು ರೆಡ್ ಹ್ಯಾಂಡ್​ ಆಗಿ ತಡೆಹಿಡಿದಿದ್ದಾರೆ. ನಂಜನಗೂಡು ತಾಲ್ಲೂಕು ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸರ್ಕಾರದ ಜಾಗದಲ್ಲಿ ಅಕ್ರಮ ಮಣ್ಣು ಸಾಗಣೆ ಮಾಡುತ್ತಿದ್ದು, ಇದಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಕಾರ್ಯಾಚರಣೆ ವೇಳೆ ರೈತರ ಮೇಲೆ ದುಷ್ಕರ್ಮಿಗಳು ಲಾರಿ ಹರಿಸಲು ಯತ್ನಿಸಿದ್ದಾರೆ ಎಂದು ರೈತ ಸಂಘದ ಜಿಲ್ಲಾ ಮುಖಂಡ ವಿದ್ಯಾಸಾಗರ್ ಮತ್ತು ಇಮ್ಮಾವು ರಘು ಆರೋಪಿಸಿದ್ದು, ಅಕ್ರಮ ಮಣ್ಣು ಸಾಗಾಣೆ ತಡೆಯುವಂತೆ ಒತ್ತಾಯಿಸಿದ್ದಾರೆ.

ಇನ್ನಷ್ಟು ಮೈಸೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:07 am, Thu, 17 August 23

ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ