ಮೈಸೂರು, (ಆಗಸ್ಟ್ 17): ಮೀಸಲು ಅರಣ್ಯ ಪ್ರದೇಶವಾಗಿರುವ ಮೈಸೂರಿನ ಚಾಮುಂಡಿಬೆಟ್ಟ (Mysuru Chamundi Betta) ಈಗ ಕಸದ ಗುಡ್ಡೆಯಾಗಿ ಮಾರ್ಪಡುತ್ತಿದೆ. ನಾಡ ಅದಿದೇವತೆ ಚಾಮುಂಡೇಶ್ವರಿ ನೆಲೆಸಿದ್ದರೂ ಧಾರ್ಮಿಕ ಕೇಂದ್ರ ಎನ್ನುವ ಭಾವನೆಯೂ ಇಲ್ಲದಂತೆ ಎಲ್ಲೆಂದರಲ್ಲಿ ಕಸದ ರಾಶಿಯನ್ನೇ ಹಾಕಲಾಗುತ್ತಿದೆ. ಹೀಗಾಗಿ ಚಾಮುಂಡಿಬೆಟ್ಟವನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಮೈಸೂರು ಅರಣ್ಯ ಸಂರಕ್ಷಣಾಧಿಕಾರಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ರಾಜ್ಯ ಅಲ್ಲದೇ ಹೊರ ರಾಜ್ಯ, ದೇಶಗಳಿಂದಲೂ ದೇವರ ದರ್ಶನಕ್ಕಾಗಿ ನಿತ್ಯ ಸಾವಿರಾರು ಭಕ್ತರು ಬೆಟ್ಟಕ್ಕೆ ಬರುತ್ತಿದ್ದು, ಅವರು ತಿನ್ನುವ ತಿಂಡಿ ಪೊಟ್ಟಣ, ಬಿಸ್ಕತ್ ಕವರ್‌ಗಳು, ನೀರು, ಜ್ಯೂಸ್ ಬಾಟಲಿಗಳು ರಸ್ತೆಯ ಇಕ್ಕೆಲಗಳಲ್ಲಿ ಬಿದ್ದು, ಪರಿಸರಕ್ಕೆ ಹಾನಿಯುಂಟು ಮಾಡುತ್ತಿವೆ. ಇದರಿಂದ ಎಚ್ಚೆತ್ತಕೊಂಡಿರುವ ಮೈಸೂರು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದೆ.
ಚಾಮುಂಡಿಬೆಟ್ಟ ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಪ್ಲಾಸ್ಟಿಕ್ ಬಿಸಾಕಿದರೆ 500 ರೂ ದಂಡ. ಮೊದಲ ಬಾರಿಗೆ ತ್ಯಾಜ್ಯ ಬಿಸಾಡಿದರೆ 2,500 ದಂಡ, ಎರಡನೇ ಬಾರಿಗೆ 5 ಸಾವಿರ ರೂ. ಇನ್ನು ಮೂರನೇ ಬಾರಿಗೆ 10 ಸಾವಿರ ಹಾಗೂ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಚಾಮುಂಡಿಬೆಟ್ಟದ ಅಂಗಡಿಯವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಸೆಪ್ಟೆಂಬರ್ 1 ರಿಂದ ಆದೇಶ ಜಾರಿಗೆ ಬರಲಿದೆ. ಹಾಗಾದ್ರೆ, ಯಾವುದಕ್ಕೆ ಎಷ್ಟೆಷ್ಟು ದಂಡ ಎನ್ನುವ ವಿವರ ಈ ಕೆಳಗಿನಂತಿದೆ.
ಅಕ್ರಮ ಮಣ್ಣು ಸಾಗಾಟ ಮಾಡುತ್ತಿದ್ದ ಲಾರಿಯನ್ನು ರೈತರು ರೆಡ್ ಹ್ಯಾಂಡ್ ಆಗಿ ತಡೆಹಿಡಿದಿದ್ದಾರೆ. ನಂಜನಗೂಡು ತಾಲ್ಲೂಕು ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸರ್ಕಾರದ ಜಾಗದಲ್ಲಿ ಅಕ್ರಮ ಮಣ್ಣು ಸಾಗಣೆ ಮಾಡುತ್ತಿದ್ದು, ಇದಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಕಾರ್ಯಾಚರಣೆ ವೇಳೆ ರೈತರ ಮೇಲೆ ದುಷ್ಕರ್ಮಿಗಳು ಲಾರಿ ಹರಿಸಲು ಯತ್ನಿಸಿದ್ದಾರೆ ಎಂದು ರೈತ ಸಂಘದ ಜಿಲ್ಲಾ ಮುಖಂಡ ವಿದ್ಯಾಸಾಗರ್ ಮತ್ತು ಇಮ್ಮಾವು ರಘು ಆರೋಪಿಸಿದ್ದು, ಅಕ್ರಮ ಮಣ್ಣು ಸಾಗಾಣೆ ತಡೆಯುವಂತೆ ಒತ್ತಾಯಿಸಿದ್ದಾರೆ.
ಇನ್ನಷ್ಟು ಮೈಸೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 9:07 am, Thu, 17 August 23