AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಫಲ ನೀಡದ ವಿಶೇಷ ಕಾರ್ಯಾಚರಣೆ; ಚಿರತೆ ಪತ್ತೆ ಕಾರ್ಯತಂತ್ರ ಬದಲಾಯಿಸಿದ ಅರಣ್ಯ ಇಲಾಖೆ

ಟಿ ನರಸೀಪುರ ತಾಲೂಕಿನಲ್ಲಿ ಚಿರತೆ ಪತ್ತೆಗೆ ಆರಂಭಿಸಿದ ವಿಶೇಷ ಕಾರ್ಯಾಚರಣೆ ಫಲ ನೀಡದ ಹಿನ್ನೆಲೆ ಅರಣ್ಯ ಇಲಾಖೆಯು ತನ್ನ ಕಾರ್ಯತಂತ್ರವನ್ನು ಬದಲಾಯಿಸಿದೆ. ಉತ್ತಮ ಗುಣಮಟ್ಟದ ಥರ್ಮಲ್ ಕ್ಯಾಮೆರಾದೊಂದಿಗೆ ಡ್ರೋನ್‌ನೊಂದಿಗೆ ಕಾರ್ಯಾಚರಣೆ ಸ್ಥಳಕ್ಕೆ ಆಗಮಿಸಿದರು.

ಮೈಸೂರಿನಲ್ಲಿ ಫಲ ನೀಡದ ವಿಶೇಷ ಕಾರ್ಯಾಚರಣೆ; ಚಿರತೆ ಪತ್ತೆ ಕಾರ್ಯತಂತ್ರ ಬದಲಾಯಿಸಿದ ಅರಣ್ಯ ಇಲಾಖೆ
ಚಿರತೆ ಸೆರೆಗೆ ಕೈಗೊಂಡ ವಿಶೇಷ ಕಾರ್ಯಾಚರಣೆ ವಿಫಲ; ಕಾರ್ಯತಂತ್ರ ಬದಲಾಯಿಸಿದ ಅರಣ್ಯ ಇಲಾಖೆ
TV9 Web
| Updated By: Rakesh Nayak Manchi|

Updated on: Dec 08, 2022 | 8:08 AM

Share

ಮೈಸೂರು: ಜಿಲ್ಲೆಯ ಟಿ ನರಸೀಪುರ ತಾಲೂಕಿನಲ್ಲಿ (T Narasipura Taluk) ಯುವತಿಯನ್ನು ಬಲಿ ಪಡೆದ ಚಿರತೆ ಪತ್ತೆ (Leopard found)ಗೆ ಐದು ದಿನಗಳ ಹಿಂದಷ್ಟೇ ಆರಂಭಿಸಿದ ವಿಶೇಷ ಕಾರ್ಯಾಚರಣೆ (Special operation to capture leopard) ಯಾವುದೇ ಫಲ ನೀಡದ ಹಿನ್ನೆಲೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಬುಧವಾರ ಚಿರತೆ ಪತ್ತೆ ಕಾರ್ಯತಂತ್ರ ಬದಲಿಸಿದ್ದಾರೆ. ಅರಣ್ಯದ ಹೆಚ್ಚುವರಿ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ಅವರು ಬುಧವಾರ ಮಧ್ಯಾಹ್ನ ಕಾರ್ಯಾಚರಣೆಗಾಗಿ ಉತ್ತಮ ಗುಣಮಟ್ಟದ ಥರ್ಮಲ್ ಕ್ಯಾಮೆರಾ (Thermal Camera) ಮತ್ತು ಡ್ರೋನ್‌ನೊಂದಿಗೆ ಕಾರ್ಯಾಚರಣೆ ಸ್ಥಳಕ್ಕೆ ಆಗಮಿಸಿದರು. ಹೊಸ ಡ್ರೋನ್​ನೊಂದಿಗೆ ವಿಶೇಷ ತಂಡಗಳು ಸೋಮವಾರ ಬೆಳಿಗ್ಗೆ ಚಿರತೆ ಒಂದು ಬಾರಿ ಶನಿವಾರ ರಾತ್ರಿ ಒಂದು ಬಾರಿ ಕಾಣಿಸಿಕೊಂಡಿದ್ದು, ಚಿರತೆ ಮಲ ಸಹ ಕಂಡುಬಂದಿದೆ. ಹೀಗಾಗಿ ಒಟ್ಟು ಎರಡು ಬಾರಿ ಚಿರತೆ ಕಾಣಿಸಿಕೊಂಡ ಮಲ್ಲಿಕಾರ್ಜುನಸ್ವಾಮಿ ಬೆಟ್ಟ (Mallikarjunaswamy Hill)ದ ಸುತ್ತಲೂ ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ನಿರ್ಧರಿಸಿವೆ ಎಂದು ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ಅರಣ್ಯ ಇಲಾಖೆ ಈ ರೀತಿಯ ಕ್ಯಾಮೆರಾವನ್ನು ಪ್ರಾಯೋಗಿಕವಾಗಿ ಬಳಸುತ್ತಿದೆ. ಈ ಕಾರ್ಯಾಚರಣೆ ಯಶಸ್ವಿಯಾದರೆ ಮಾನವ ಮತ್ತು ಕಾಡು ಪ್ರಾಣಿಗಳ ಸಂಘರ್ಷ ಇರುವ ಇತರೆ ಪ್ರದೇಶಗಳಲ್ಲಿ ಸಂಘರ್ಷ ನಿಭಾಯಿಸಲು ಬಳಸಲಾಗುತ್ತದೆ ಎಂದು ಕುಮಾರ್ ಪುಷ್ಕರ್ ಅವರು ಡೆಕ್ಕನ್​ ಹೆರಾಲ್ಡ್​ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ರಸ್ತೆ, ಬಸ್ ಸಮಸ್ಯೆ ನಡುವೆ ಶಾಲೆಗೆ ಹೋಗಲು ಮಕ್ಕಳಿಗೆ ಚಿರತೆ ಭಯ

“ನಾವು ಈಗಾಗಲೇ ಹೊಂದಿರುವ ಸಾಮಾನ್ಯ ಕ್ಯಾಮೆರಾ ಒಳಗೊಂಡ ಡ್ರೋನ್​ಗಳು ಬೆಳಕಿನ ಸಂಕೇತಗಳನ್ನು ಸ್ವೀಕರಿಸಿ ಅದರ ಆಧಾರದ ಮೇಲೆ ಅದು ಚಿತ್ರಗಳನ್ನು ರಚಿಸುತ್ತದೆ. ಆದರೆ ಥರ್ಮಲ್ ಕ್ಯಾಮೆರಾದ ವಿಷಯದಲ್ಲಿ ಅದು ಜೀವಂತ ವಸ್ತುವಿನ ಚಲನೆ ಇದ್ದಾಗಲೆಲ್ಲಾ ಅದು ಪ್ರಾಣಿಯಾಗಿರಲಿ ಅಥವಾ ಮನುಷ್ಯನಾಗಿರಲಿ, ತಾಪಮಾನದಲ್ಲಿನ ವ್ಯತ್ಯಾಸವನ್ನು ಗುರುತಿಸುತ್ತದೆ. ಅದರ ಆಧಾರದ ಮೇಲೆ ಕ್ಯಾಮೆರಾಗಳು ಅವುಗಳ ಆಕಾರವನ್ನು ಸರಿಯಾಗಿ ತೆಗೆದುಕೊಳ್ಳುತ್ತದೆ. ಇದನ್ನು ಪೊಲೀಸರು ಮತ್ತು ರಕ್ಷಣಾ ಪಡೆಗಳು ಕಣ್ಗಾವಲು ಉದ್ದೇಶಗಳಿಗಾಗಿ ಬಳಸುತ್ತವೆ. ಚಿರತೆ ಪತ್ತೆಗೆ ಇದೇ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಯೋಚಿಸಿದ್ದೇವೆ. ಇದು ಪರಿಣಾಮಕಾರಿಯಾದರೆ ಮಾನವ-ಪ್ರಾಣಿ ಸಂಘರ್ಷವನ್ನು ನಿಭಾಯಿಸಲು ನಾವು ಅದನ್ನು ಬಳಸಬಹುದು. ಶುಕ್ರವಾರದವರೆಗೆ ಇದನ್ನು ಇಲ್ಲಿ ಬಳಸಲಾಗುತ್ತದೆ” ಎಂದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ