AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಅಪಾರ್ಟ್ಮೆಂಟ್​ನಲ್ಲಿ ಒಂದೇ ಕುಟುಂಬದ ನಾಲ್ವರ ಸಾವು

ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್ ನಲ್ಲಿ ನಾಲ್ವರು ಒಂದೇ ಕುಟುಂಬದ ಸದಸ್ಯರು ಮೃತಪಟ್ಟಿದ್ದಾರೆ. 15 ವರ್ಷದ ಬಾಲಕ, 45 ವರ್ಷದ ಚೇತನ್, 43 ವರ್ಷದ ರೂಪಾಲಿ ಮತ್ತು 62 ವರ್ಷದ ಪ್ರಿಯಂವಧಾ ಮೃತಪಟ್ಟವರು. ಚೇತನ್ ತನ್ನ ತಾಯಿ, ಪತ್ನಿ ಮತ್ತು ಮಗನಿಗೆ ವಿಷ ನೀಡಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೈಸೂರು: ಅಪಾರ್ಟ್ಮೆಂಟ್​ನಲ್ಲಿ ಒಂದೇ ಕುಟುಂಬದ ನಾಲ್ವರ ಸಾವು
ಒಂದೇ ಕುಟುಂಬದ ನಾಲ್ವರ ಸಾವು
Follow us
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Feb 17, 2025 | 10:18 AM

ಮೈಸೂರು, ಫೆಬ್ರವರಿ 17: ಮೈಸೂರಿನ (Mysore) ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್​​ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕುಶಾಲ್ ​(15), ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62) ಮೃತ ದುರ್ದೈವಿಗಳು. ಚೇತನ್​​​ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್​ಗೆ ವಿಷವುಣಿಸಿ ಸಾಯಿಸಿರುವ ಶಂಕೆ ವ್ಯಕ್ತವಾಗಿದೆ. ಮೂವರಿಗೆ ವಿಷವುಣಿಸಿ ಸಾಯಿಸಿ ಬಳಿಕ ಚೇತನ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರು ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರಂ ಇನ್ಸ್​ಪೆಕ್ಟರ್​ ಮೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್ ಮಾತನಾಡಿ, ವಿದ್ಯಾರಣ್ಯಪುರಂ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚೇತನ್ ಕುಟುಂಬ ಹಾಗೂ ಚೇತನ್​ ತಾಯಿ ಪ್ರಿಯಂವಧಾ ಅಕ್ಕಪಕ್ಕದ ಫ್ಲ್ಯಾಟ್​ನಲ್ಲಿ ವಾಸವಿದ್ದರು. ತಾಯಿ ಒಂದು ಕಡೆ ಇದ್ದರು, ಮಗ ಇನ್ನೊಂದು ಕಡೆ ಇದ್ದರು. ತಾಯಿ ಪ್ರಿಯಂವಧಾ ಮತ್ತು ಮಗ ಚೇತನ್ ಕುಟುಂಬ ಒಟ್ಟಾಗಿ ರವಿವಾರ ಗೊರೂರಿಗೆ ಹೋಗಿದ್ದರು ಎಂದು ತಿಳಿಸಿದರು.

ಗೊರೂರು ದೇವಸ್ಥಾನಕ್ಕೆ ಹೋಗಿ ಸಂಜೆ ಮನೆಗೆ ಬಂದಿದ್ದರು. ಮೃತ ಚೇತನ್ ಹಾಸನ ಜಿಲ್ಲೆ ಗೊರೂರು ಮೂಲದ ನಿವಾಸಿಯಾಗಿದ್ದರು. ಚೇತನ್ ಪತ್ನಿ ರೂಪಾಲಿ ಮೈಸೂರಿನ ನಿವಾಸಿಯಾಗಿದ್ದರು. 2019 ರಿಂದ ಚೇತನ್ ಮತ್ತು ರೂಪಾಲಿ ಮೈಸೂರಿನಲ್ಲೇ ನೆಲೆಸಿದ್ದರು. ಕೇಸ್ ದಾಖಲಿಸಿಕೊಂಡು ತನಿಖೆ ನಡೆಸ್ತಿದ್ದೇವೆ. ಚೇತನ್​​ ಕಾರ್ಮಿಕರನ್ನು ಸೌದಿಗೆ ಕಳಿಸುವ ಕೆಲಸ ಮಾಡುತ್ತಿದ್ದರು ಎಂದು ಹೇಳಿದರು.

ಇದನ್ನೂ ಓದಿ: ಪ್ರಯಾಗ್​ರಾಜ್​ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ಕರ್ನಾಟಕದ ಯುವಕರು ಅಪಘಾತದಲ್ಲಿ ಸಾವು

ಡೆತ್​ನೋಟ್​ ಪತ್ತೆ

ಚೇತನ್ ಆತ್ಮಹತ್ಯೆಗೂ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ‌. ಹಣಕಾಸಿನ ಸಮಸ್ಯೆಯಿಂದಾಗಿ ನಾವು ಸಾಯುತ್ತಿದ್ದೇವೆ‌. ನಮ್ಮ ಸಾವಿಗೆ ಬೇರೆ ಯಾರೂ ಕಾರಣರಲ್ಲ. ನನ್ನ ಸ್ನೇಹಿತರು, ಸಂಬಂಧಕರಿಗೆ ಯಾರೂ ತೊಂದರೆ ಕೊಡಬೇಡಿ. ನಮ್ಮನ್ನು ಕ್ಷಮಿಸಿಬಿಡಿ, I AM SORRY ಎಂದು ಡೆತ್​ನೋಟ್​ನಲ್ಲಿ ಬರೆದಿದ್ದಾರೆ.​

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:46 am, Mon, 17 February 25

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ