ಮೈಸೂರು: ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣ; ಉಪ ತಹಶೀಲ್ದಾರ್ ಅಮಾನತು
ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಚೇರಿಯ ಕಂಪ್ಯೂಟರ್ ಆಪರೇಟರ್ ಉಪ ತಹಸೀಲ್ದಾರ್ ಕಿರುಕುಳ ತಾಳಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುಕುಳ ಆರೋಪ ಎದುರಿಸುತ್ತಿರುವ ಉಪ ತಹಶೀಲ್ದಾರ್ ಶಿವಕುಮಾರ್ ಅವರನ್ನು ಅಮಾನತು ಮಾಡಿ ಪ್ರಾದೇಶಿಕ ಆಯುಕ್ತ ಪ್ರಕಾಶ್ ಆದೇಶ ಹೊರಡಿಸಿದ್ದಾರೆ.
ಮೈಸೂರು, ಜ.8: ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಚೇರಿಯ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ (Suicide) ಪ್ರಕರಣ ಸಂಬಂಧ ಕಿರುಕುಳ ಆರೋಪ ಎದುರಿಸುತ್ತಿರುವ ಉಪ ತಹಶೀಲ್ದಾರ್ ಶಿವಕುಮಾರ್ ಅವರನ್ನು ಅಮಾನತು ಮಾಡಿ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಅವರು ಆದೇಶಿಸಿದ್ದಾರೆ. ನಿರಂತರ ಕಿರುಕುಳದಿಂದ ಬೇಸತ್ತು ಡೆತ್ ನೋಟ್ ಬರೆದು ಕಂಪ್ಯೂಟರ್ ಆಪರೇಟರ್ ಪರಮೇಶ್ ಆತ್ಮಹತ್ಯೆ ಮಾಡಿಕೊಂಡಿಂದ್ದರು.
ಆತ್ಮಹತ್ಯೆಗೂ ಮುನ್ನ ಪರಮೇಶ್, ತನ್ನ ಸಾವಿಗೆ ಉಪತಹಸೀಲ್ದಾರ್ ಶಿವಕುಮಾರ್ ನೀಡುತ್ತಿರುವ ಕಿರುಕುಳವೇ ಕಾರಣ ಎಂದು ಡೆತ್ ನೋಟ್ ಬರೆದು ನಿನ್ನೆ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಾಕಿದ್ದರು. ಬಳಿಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಪರಮೇಶ್ರನ್ನು ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತದಾರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
ಇದನ್ನೂ ಓದಿ: ಮೈಸೂರಿನಲ್ಲಿ ಮಹಿಳೆಯರ ರಕ್ಷಣೆಗೆ ನಿಂತ ಚಾಮುಂಡಿ; ಚಾಮುಂಡಿ ಮಹಿಳಾ ಸುರಕ್ಷಾ ಪಡೆ ಗಸ್ತು ವಾಹನಕ್ಕೆ ಚಾಲನೆ
ಇಂದು ಶವಾಗಾರಕ್ಕೆ ನಂಜನಗೂಡು ಶಾಸಕ ದರ್ಶನ್ ಧ್ರವನಾರಾಯಣ್ ಹಾಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಉಪ ತಹಶೀಲ್ದಾರ್ ಮೇಲೆ ಕ್ರಮ ಕೈಗೊಳ್ಳುವಂತೆ ಮೃತ ಪರಮೇಶ್ ಕುಟುಂಬಸ್ಥರು ಒತ್ತಾಯಿಸಿದ್ದರು. ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಶಾಸಕ ದರ್ಶನ್ ಧೃವನಾರಾಯಣ್ ಸೂಚಿಸಿದ್ದರು. ಹೀಗಾಗಿ ಕ್ರಮಕ್ಕೆ ಮುಂದಾದ ಪ್ರಾದೇಶಿಕ ಆಯುಕ್ತ ಪ್ರಕಾಶ್ ಉಪ ತಹಶೀಲ್ದಾರ್ ಶಿವಕುಮಾರ್ ಅವರನ್ನ ಅಮಾನತ್ತು ಮಾಡಿದ್ದಾರೆ.
ಮದ್ದೂರು ಪಶು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಅಮಾನತು
ಮಂಡ್ಯ: ಸರ್ಕಾರಿ ಹಣ ದುರ್ಬಳಕೆ ಮಾಡಿ ಸುಳ್ಳು ಮಾಹಿತಿ ನೀಡಿದ್ದ ಪ್ರಕರಣ ಸಂಬಂಧ ಜಿಲ್ಲೆಯ ಮದ್ದೂರು ಪಶು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಪ್ರವೀಣ್ ಅವರನ್ನು ಅಮಾನತು ಮಾಡಲಾಗಿದೆ. ಪಾಂಡವಪುರ ಪಶು ಆಸ್ಪತ್ರೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದ ವೇಳೆ ಪ್ರವೀಣ್ ಅವರು 2018-19ನೇ ಸಾಲಿನ ಎಸ್ಸಿಪಿ, ಟಿಎಸ್ಪಿ ಯೋಜನೆಯಲ್ಲಿ ಅವ್ಯವಹಾರ ನಡೆಸಿದ್ದ ಆರೋಪ ಕೇಳಿಬಂದಿತ್ತು. ತನಿಖೆ ವೇಳೆ ನಕಲಿ ಫಲಾನುಭವಿಗಳನ್ನ ಸೃಷ್ಟಿಸಿ ಹಣ ದುರ್ಬಳಕೆ ಮಾಡಿಕೊಂಡಿರುವುದು ತಿಳಿದುಬಂದಿತ್ತು. ಹೀಗಾಗಿ ಪ್ರವೀಣ್ ಅವರನ್ನು ಅಮಾನತು ಮಾಡಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ