Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ: ಮಾಹಿತಿ ನೀಡಿದವರಿಗೆ ಬಂಪರ್​ ಬಹುಮಾನ ಘೋಷಣೆ

ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮೈಸೂರು ಜಿಲ್ಲೆಯಲ್ಲಿಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ. ಹೀಗಾಗಿ ಮೈಸೂರು ನಗರ ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್‌ನ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಭ್ರೂಣ ಪತ್ತೆ, ಹತ್ಯೆ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ನಗದು ಬಹುಮಾನವಾಗಿ ನೀಡಲಾಗುತ್ತೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ.

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ: ಮಾಹಿತಿ ನೀಡಿದವರಿಗೆ ಬಂಪರ್​ ಬಹುಮಾನ ಘೋಷಣೆ
ಸಾಂದರ್ಭಿಕ ಚಿತ್ರ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Dec 05, 2023 | 10:31 AM

ಮೈಸೂರು, ಡಿ.05: ಮೈಸೂರಿನಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ (Female Foeticide) ಸಂಬಂಧ ಮೈಸೂರಿನ ಮಾತಾ ಆಸ್ಪತ್ರೆಯಲ್ಲೆ ಆಪರೇಷನ್ ನಡೆಯುತಿತ್ತು ಎಂಬ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಮೈಸೂರಿನ‌ ತಾಲೂಕು ಆರೋಗ್ಯಧಿಕಾರಿ ಡಾ.ರಾಜೇಶ್ವರಿ ಮತ್ತು ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಜಿಲ್ಲಾ ಕುಟುಂಬ ಕಲ್ಯಾಣಧಿಕಾರಿ ಡಾ.ರವಿ ಅವರನ್ನ ಅಮಾನತು (Suspend) ಮಾಡಲಾಗಿತ್ತು. ಇನ್ನು ಈಗ ಈ ಪ್ರಕರಣ ಹೆಚ್ಚು ತೀವ್ರತೆ ಪಡೆಯುತ್ತಿದ್ದು ಮೈಸೂರು ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್‌ ಮೇಲೆ ತೀವ್ರ ನಿಗಾ ಇಡಲಾಗುತ್ತಿದೆ. ಭ್ರೂಣ ಹತ್ಯೆ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ.

ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮೈಸೂರು ಜಿಲ್ಲೆಯಲ್ಲಿಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ. ಹೀಗಾಗಿ ಮೈಸೂರು ನಗರ ಜಿಲ್ಲೆಯ 139 ಸ್ಕ್ಯಾನಿಂಗ್ ಸೆಂಟರ್‌ನ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಟಾಸ್ಕ್‌ಪೋರ್ಸ್‌ನಿಂದ ಎಲ್ಲಾ ಕಡೆ ನಿಗಾ ಇಡಲಾಗಿದೆ. ಭ್ರೂಣ ಪತ್ತೆ, ಹತ್ಯೆ ಬಗ್ಗೆ ಮಾಹಿತಿ ನೀಡಿದರೆ 50 ಸಾವಿರ ನಗದು ಬಹುಮಾನವಾಗಿ ನೀಡಲಾಗುತ್ತೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ. ಮಾಹಿತಿ ನೀಡಿದವರ ಬಗ್ಗೆ ಗೌಪ್ಯತೆ ಕಾಪಾಡಲಾಗುವುದು. ದೊಡ್ಡ ಮಟ್ಟದ ಕಾರ್ಯಾಗಾರ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಟಿವಿ9ಗೆ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಶಾಮಿಲಾಗಿದ್ದ ನರ್ಸ್​​ ಬಂಧನ

ಭ್ರೂಣಗಳ ಲಿಂಗ ಪತ್ತೆ ಮಾಡಿ ಹತ್ಯೆ ಪ್ರಕರಣ; ನರ್ಸ್ ಅರೆಸ್ಟ್

ಭ್ರೂಣಗಳ ಲಿಂಗ ಪತ್ತೆ ಮಾಡಿ ಹತ್ಯೆ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಮೈಸೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಸರ್ಸ್ ಉಷಾರಾಣಿ ಎಂಬಾಕೆಯನ್ನ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಆರೋಪಿ ಮಹಿಳೆಯನ್ನ ಅರೆಸ್ಟ್​ ಮಾಡಿದ್ದಾರೆ. ಈ ಮೂಲಕ ಈವರೆಗೆ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಜಾಮೀನು ಪಡೆದಿರುವ ಬ್ರೋಕರ್ ಪುಟ್ಟರಾಜು ಮಾಹಿತಿ ಮೇರೆಗೆ ತನಿಖೆ ಕೈಗೊಂಡ ಪೊಲೀಸರು, ನರ್ಸ್ ಉಷಾರಾಣಿಯನ್ನ ಅರೆಸ್ಟ್ ಮಾಡಿದ್ದಾರೆ. ಆಸ್ಪತ್ರೆಯ ದಾಖಲೆಯಲ್ಲಿ ನಕಲಿ ಮಾಹಿತಿ ಸೃಷ್ಟಿಸಿ ಕೃತ್ಯ ಎಸಗುತ್ತಿದ್ದ ಆರೋಪ ನರ್ಸ್ ಉಷಾರಾಣಿ ವಿರುದ್ಧ ಕೇಳಿ ಬಂದಿದೆ.

ಮೈಸೂರು ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ