AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು-ಕುಶಾಲನಗರ ರೈಲು ಯೋಜನೆ ರದ್ದು: ಈ ಯೋಜನೆಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು!

ಬಹು ಚರ್ಚೆಯಲ್ಲಿದ್ದ ಮೈಸೂರು-ಕುಶಾಲನಗರ ರೈಲು ಮಾರ್ಗ ಯೋಜನೆಯನ್ನು ರೈಲ್ವೆ ಇಲಾಖೆ ರದ್ದುಗೊಳಿಸಿದೆ. ಆರ್ಥಿಕ ಹಾಗೂ ಕಾರ್ಯಾಚರಣೆಯ ಮಾನದಂಡಗಳನ್ನು ಪೂರೈಸದ ಕಾರಣ ಮತ್ತು ಕಡಿಮೆ ಬೇಡಿಕೆಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸುಮಾರು 87.2 ಕಿ.ಮೀ ಉದ್ದದ ಈ ಮಾರ್ಗಕ್ಕೆ ಹೆಚ್ಚು ಅನುದಾನ ಬೇಕಾಗುತ್ತಿತ್ತು, ಆದರೆ ದೀರ್ಘಾವಧಿಯ ಲಾಭದ ಕೊರತೆಯಿಂದಾಗಿ ಯೋಜನೆ ಕೈಬಿಡಲಾಗಿದೆ ಎಂದು ನೈಋತ್ಯ ರೈಲ್ವೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು-ಕುಶಾಲನಗರ ರೈಲು ಯೋಜನೆ ರದ್ದು: ಈ ಯೋಜನೆಯಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು!
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jan 20, 2026 | 4:34 PM

Share

ಮೈಸೂರು, ಜ.20: ಬಹು ವರ್ಷಗಳಿಂದ ಭಾರೀ ಚರ್ಚೆಯಲ್ಲಿದ್ದ ಮೈಸೂರು-ಕುಶಾಲನಗರ ರೈಲು ಮಾರ್ಗ ಯೋಜನೆಯ (Mysore-Kushalnagar railway project) ಬಗ್ಗೆ ಇಲಾಖೆ ಅಂತಿಮ ತಿರ್ಮಾನಕ್ಕೆ ಬಂದಿದೆ. ಇದೀಗ ಈ ಯೋಜನೆಯನ್ನು ಕೈಬಿಡಲಾಗಿದೆ. ರೈಲ್ವೆ ಅಧಿಕಾರಿಗಳು ಈ ರೈಲು ಮಾರ್ಗವು ಸುಮಾರು 87.2 ಕಿ.ಮೀ ಉದ್ದದ ಪ್ರಸ್ತಾವಿತ ರೈಲು ಕಾರಿಡಾರ್, ಆರ್ಥಿಕ ಮತ್ತು ಕಾರ್ಯಾಚರಣೆಯ ಮಾನದಂಡಗಳನ್ನು ಪೂರೈಸುವುದಿಲ್ಲ ಹೇಳಿದೆ. ನೈಋತ್ಯ ರೈಲ್ವೆಯ (SWR) ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಗಿರೀಶ್ ಧರ್ಮರಾಜ್ ಕಲಗೊಂಡ ಅವರು ಹೇಳಿರುವ ಪ್ರಕಾರ, ಆರ್ಥಿಕ ಆದಾಯ ವಿಚಾರಗಳು ಹಾಗೂ ಈ ಯೋಜನೆಗೆ ಆಗುವ ವೆಚ್ಚದ ಬಗ್ಗೆಯೂ ನೋಡಿಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಈ ರೈಲ್ವೆ ಮಾರ್ಗವೂ ಪ್ರಯಾಣಿಕರನ್ನು ಹಾಗೂ ಸರಕುಗಳನ್ನು ಸಾಗಾಣೆ ಮಾಡುವ ಸಾಮಾರ್ಥ್ಯವನ್ನು ಹೊಂದಿಲ್ಲ. ಇದಕ್ಕಾಗಿ ಹೆಚ್ಚಿನ ಅನುದಾನವನ್ನು ನೀಡಬೇಕಾಗುತ್ತದೆ, ಇದು ದೀರ್ಘಾವಧಿಯ ಆರ್ಥಿಕ ಲಾಭವನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ.

ಈ ರೈಲು ಮಾರ್ಗ ಮೈಸೂರಿನಿಂದ ಕುಶಾಲನಗರಕ್ಕೆ ಸಂಪರ್ಕ ಕಲ್ಪಿಸಲು ಯೋಜನೆಯನ್ನು ಹಾಕಲಾಗಿತ್ತು. ಈ ರೈಲು ಮಾರ್ಗಕ್ಕೆ ಸುಮಾರು 1,379 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆರಂಭಿಕ ಅಂದಾಜಿನ ಪ್ರಕಾರ, ಈ ಯೋಜನೆಯ ವೆಚ್ಚ ಸುಮಾರು 1,800 ಕೋಟಿ ರೂ. ಎಂದು ಅಂದಾಜಿಸಲಾಗಿತ್ತು. ಆದರೆ ಇದು ಹೆಚ್ಚಾಗುತ್ತ ಹೋಯಿತು. ಈ ಯೋಜನೆಗೆ 2018–19ರ ಆರ್ಥಿಕ ವರ್ಷದಲ್ಲಿ ಅನುಮೋದನೆ ಸಿಕ್ಕಿತ್ತು. ಅಂತಿಮ ಸ್ಥಳ ಸಮೀಕ್ಷೆ (FLS) ಟೆಂಡರ್ ಅನ್ನು ಜೂನ್ 2022 ರಲ್ಲಿ ನೀಡಲಾಯಿತು. ಆದರೆ ರೈಲ್ವೆ ಅಧಿಕಾರಿಗಳು ಈಗ ಮಾರ್ಗದ ವೆಚ್ಚ ಹಾಗೂ ಮುಂದಿನ ದಿನಗಳಲ್ಲಿ ಎಷ್ಟು ಆದಾಯಗಳು ಬರುಬಹುದು ಎಂದು ಸಮೀಕ್ಷೆಯನ್ನು ನಡೆಸಬೇಕು ಎಂದು ಹೇಳಿದ್ದರು. ನಂತರ ಈ ಯೋಜನೆಯನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈಲ್ವೆಯಲ್ಲಿ 22,000 ಖಾಲಿ ಹುದ್ದೆಗಳಿಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ಈ ರೈಲ್ವೆ ಮಾರ್ಗ ನಿರ್ಮಾಣ ರದ್ದಾಗಲು ಪ್ರಮುಖ ಕಾರಣಗಳು:

ಕಡಿಮೆ ಬೇಡಿಕೆ (Low Demand): ಒಂದು ನಿರ್ದಿಷ್ಟ ಮಾರ್ಗದಲ್ಲಿ ಪ್ರಯಾಣಿಸುವವರ ಸಂಖ್ಯೆ ಅಥವಾ ಅಲ್ಲಿಂದ ಸಾಗಣೆಯಾಗುವ ಸರಕುಗಳ (Freight) ಪ್ರಮಾಣ ಕಡಿಮೆ ಇದ್ದಾಗ, ಅಲ್ಲಿ ಸಾವಿರಾರು ಕೋಟಿ ರೂಪಾಯಿ ಹೂಡಿಕೆ ಮಾಡುವುದು ಆರ್ಥಿಕವಾಗಿ ನಷ್ಟದಾಯಕವಾಗುತ್ತದೆ. ಇದೀಗ ಈ ರೈಲ್ವೆ ಮಾರ್ಗದಲ್ಲೂ ಕೂಡ ಇದೆ ಪರಿಸ್ಥಿತಿ.

ಹೂಡಿಕೆಯ ಮೇಲಿನ ಲಾಭ (ROI): ಬೃಹತ್ ಯೋಜನೆಗಳಿಗೆ ಬ್ಯಾಂಕ್‌ಗಳಿಂದ ಅಥವಾ ವಿದೇಶಿ ಸಂಸ್ಥೆಗಳಿಂದ ಸಾಲ ಪಡೆಯಲಾಗುತ್ತದೆ. ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದರೆ ಆ ಸಾಲವನ್ನು ಮರುಪಾವತಿಸಲು ಕಷ್ಟವಾಗುತ್ತದೆ. ಮೈಸೂರು-ಕುಶಾಲನಗರ ರೈಲು ಮಾರ್ಗ ಹೆಚ್ಚಿನ ಅನುದಾನ ನೀಡಬೇಕಾದರೆ, ಈ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ.

ಪರ್ಯಾಯ ಮಾರ್ಗಗಳು: ಈಗಾಗಲೇ ಉತ್ತಮ ರಸ್ತೆ ಅಥವಾ ರೈಲ್ವೆ ಸಂಪರ್ಕವಿದ್ದು, ಹೊಸ ಯೋಜನೆಯಿಂದ ಹೆಚ್ಚಿನ ಬದಲಾವಣೆ ಸಾಧ್ಯವಿಲ್ಲ

ಯೋಜನೆಯ ರದ್ದತಿ ಅಥವಾ ವಿಳಂಬ: ಇತ್ತೀಚೆಗೆ ಕೇರಳದ ‘ಸಿಲ್ವರ್ ಲೈನ್’ (SilverLine) ರೈಲ್ವೆ ಯೋಜನೆಯ ವಿಷಯದಲ್ಲೂ ಇಂತಹದ್ದೇ ಚರ್ಚೆಗಳು ನಡೆದಿದ್ದವು. ವೆಚ್ಚಕ್ಕೆ ಹೋಲಿಸಿದರೆ ಅದರಿಂದ ಸಿಗುವ ಆರ್ಥಿಕ ಲಾಭ ಕಡಿಮೆ ಎಂಬ ಕಾರಣಕ್ಕೆ ಅನೇಕ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?