Prahlad Modi: ಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕಾರು ಅಪಘಾತ

| Updated By: ರಮೇಶ್ ಬಿ. ಜವಳಗೇರಾ

Updated on: Dec 27, 2022 | 7:49 PM

ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ಪ್ರಹ್ಲಾದ್ ಮೋದಿ ಅವರ ಕಾರು ಮೈಸೂರು ತಾಲೂಕಿನ ಕಡಕೊಳ ಬಳಿ ಅಪಘಾತವಾಗಿದೆ.

Prahlad Modi: ಮೈಸೂರಿನಲ್ಲಿ ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕಾರು ಅಪಘಾತ
ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕಾರು ಅಪಘಾತ
Follow us on

ಮೈಸೂರು: ಬೆಂಗಳೂರಿನಿಂದ ಬಂಡೀಪುರಕ್ಕೆ (Bandipur) ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಸಹೋದರ ಪ್ರಹ್ಲಾದ್ ಮೋದಿ (Prahlad Modi) ಅವರ ಕಾರು ಅಪಘಾತ (Car Accident)ಗೊಂಡಿರುವ ಘಟನೆ ಮೈಸೂರು ತಾಲೂಕಿನ ಕಡಕೊಳ ಬಳಿ ನಡೆದಿದೆ. ಮರ್ಸಿಡಿಸ್ ಬೆಂಜ್ ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿ ಪುತ್ರ ಹಾಗೂ ಸೊಸೆಗೆ ಗಂಭೀರ ಗಾಯಗಳಾಗಿದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದ ಮೈಸೂರು ಎಸ್​ಪಿ ಸೀಮಾ ಲಾಟ್ಕರ್, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೈಸೂರು ಬಳಿ ಪ್ರಧಾನಿ ಮೋದಿ ಸಹೋದರನ ಬೆಂಜ್ ಕಾರು ಅಪಘಾತ, ಏರ್ ಬ್ಯಾಗ್ ಓಪನ್, ಪ್ರಾಣಾಪಾಯದಿಂದ ಪಾರು: ಇಲ್ಲಿವೆ ಫೋಟೋಸ್

ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನೊಳಗಿನ ಏರ್ ಬ್ಯಾಗ್ ಓಪನ್ ಆಗಿವೆ. ಇದರಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು. ಗಾಯಗೊಂಡಿರುವ ಅವರನ್ನು ಕೂಡಲೇ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಹ್ಲಾದ್ ಮೋದಿ ಅವರ ದವಡೆಗೆ ಗಾಯಗಳಾಗಿದ್ದು, ಅವರ ಸೊಸೆ ತಲೆಗೆ ಗಾಯವಾಗಿದೆ. ಇತರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಇನ್ನು ಆಸ್ಪತ್ರೆಗೆ ಸಂಸದ ಪ್ರತಾಪ್ ಸಿಂಹ ಹಾಗೂ ಸುತ್ತೂರು ಶ್ರೀಗಳು ಭೇಟಿ ನೀಡಿ ಪ್ರಹ್ಲಾದ್ ಮೋದಿ ಕುಟುಂಬ ಸದಸ್ಯರ ಆರೋಗ್ಯ ವಿಚಾರಿಸಿದರು.

ಇನ್ನಷ್ಟು ಮೈಸೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Tue, 27 December 22