ಮೈಸೂರು: ಕೇಂದ್ರ ಆಹಾರ ಸಂಶೋಧನಾಲಯದ ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಶಾಲೆಗೆ ರಜೆ ಘೋಷಣೆ
ಮೈಸೂರಿನ ಕೇಂದ್ರ ಆಹಾರ ಸಂಶೋಧನಾಲಯದ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಈ ಹಿನ್ನೆಲೆ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.
ಮೈಸೂರು: ನಗರದ ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ(CFTRI) ಯ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗೆ ಬಂದಿದ್ದ ಮಕ್ಕಳನ್ನು ಶಿಕ್ಷಕರು ವಾಪಾಸ್ ಮನೆಗೆ ಕಳುಹಿಸಿ ಶಾಲೆಗೆ ರಜೆ ಘೋಷಣೆ ಮಾಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, CFTRI ಆವರಣದಲ್ಲಿ ಕಾಣಿಸಿಕೊಂಡ ಚಿರತೆ ಸೆರೆಗೆ ಬಲೆ ಬಿಸಿದ್ದಾರೆ.
ನೆಲಮಂಗಲ ತಾಲೂಕಿನ ಭೂಸಂದ್ರ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಮನೆಯ ಮುಂದೆ ಇದ್ದ ನಾಯಿಯನ್ನು ಹೊತ್ತೊಯ್ದ ಚಿರತೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ಭೂಸಂದ್ರ ಗ್ರಾಮದಲ್ಲಿ ಮನೆಯ ಮುಂದೆ ಇದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದ್ದು, ಚಿರತೆಯು ಓಡಾಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಅರಣ್ಯ ಇಲಾಖೆಯು ಚಿರತೆ ಹಿಡಿಯಲು ಬೋನನ್ನು ರೆಡಿ ಮಾಡಿದ್ದು ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಚಿರತೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವು
ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಸ್ಥಳಕ್ಕೆ ಶಿರಾ ವಲಯ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:Mandya News: ಮಂಡ್ಯದಲ್ಲಿ ಮುಂದುವರೆದ ಚಿರತೆ ದಾಳಿ, ಚಿರತೆ ಬಾಯಿಗೆ ತುತ್ತಾದ ಹಸು, ಮಾಲೀಕನ ಗೋಳಾಟ
ಶಿರಾ ತಾಲೂಕಿನ ಕಲ್ಲಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಬಿದ್ದ ಕರಡಿಗಳು
ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಲ್ಲಹಳ್ಳಿ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಳೆದ ಒಂದು ತಿಂಗಳಿನಿಂದ ಕಾಟ ಕೊಡುತ್ತಿದ್ದ ಕರಡಿಗಳು ಇದೀಗ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದ್ದು, ಸ್ಥಳಿಯರು ನಿಟ್ಟುಸಿರು ಬಿಡುವಂತಾಗಿದೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ