ಅಮಿತ್ ಶಾ ಹೇಳಿಕೆ ಖಂಡಿಸಿ ಮೈಸೂರು, ಮಂಡ್ಯ ಬಂದ್: ಹೇಗಿದೆ ಪರಿಸ್ಥಿತಿ?

ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆ ಖಂಡಿಸಿ ಮೈಸೂರು ಹಾಗೂ ಮಂಡ್ಯದಲ್ಲಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಬಂದ್​ಗೆ ಮಂಗಳವಾರ ಬೆಳಗ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೈಸೂರು ಹಾಗೂ ಮಂಡ್ಯದಲ್ಲಿ ಬಸ್​ಗಳ ಸಂಚಾರ ಎಂದಿನಂತೆಯೇ ನಡೆಯುತ್ತಿದ್ದು, ವ್ಯಾಪಾರ ವಹಿವಾಟು ಸಹ ಆರಂಭಗೊಂಡಿವೆ.

ಅಮಿತ್ ಶಾ ಹೇಳಿಕೆ ಖಂಡಿಸಿ ಮೈಸೂರು, ಮಂಡ್ಯ ಬಂದ್: ಹೇಗಿದೆ ಪರಿಸ್ಥಿತಿ?
ಮೈಸೂರಿನಲ್ಲಿ ಜನಜೀವನ ಎಂದಿನಂತೆಯೇ ಆರಂಭವಾಗಿದೆ. ಹೆಚ್ಚಿನ ಪೊಲೀಸ್ ಭದ್ರತೆಯನ್ನೂ ಕಲ್ಪಿಸಲಾಗಿದೆ.
Follow us
ರಾಮ್​, ಮೈಸೂರು
| Updated By: Ganapathi Sharma

Updated on: Jan 07, 2025 | 7:58 AM

ಮೈಸೂರು, ಜನವರಿ 7: ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ಮೈಸೂರು ಹಾಗೂ ಮಂಡ್ಯ ಬಂದ್​​ಗೆ ಕರೆ ನೀಡಿವೆ. ಆದರೆ, ಮೈಸೂರಿನಲ್ಲಿ ಬೆಳಗ್ಗೆ ಎಂದಿನಂತೆಯೇ ಬಸ್ ಸಂಚಾರ ಆರಂಭವಾಗಿದ್ದು, ಜನರಿಗೆ ಬಂದ್ ಬಿಸಿ ತಟ್ಟಿಲ್ಲ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಸಹಜ ಸ್ಥಿತಿ ಇದೆ. ಅದೇ ರೀತಿ, ಮೈಸೂರಿನಿಂದ ಬೆಂಗಳೂರು ಸೇರಿದಂತೆ ವಿವಿಧೆಡೆಗೆ ಎಂದಿನಂತೆಯೇ ಬಸ್‌ಗಳು ತೆರಳುತ್ತಿವೆ.

ಮುಂಜಾಗ್ರತಾ ಕ್ರಮವಾಗಿ ಮೈಸೂರು ಬಸ್ ನಿಲ್ದಾಣದ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸಿಆರ್ ವ್ಯಾನ್, ಗಸ್ತು ವಾಹನ, ಕಮಾಂಡೋ ವಾಹನ ನಿಯೋಜನೆ ಮಾಡಲಾಗಿದೆ.

ಮಂಡ್ಯದಲ್ಲಿಯೂ ಸಹಜ ಸ್ಥಿತಿ

ಮಂಡ್ಯದಲ್ಲಿ ಕೂಡ ಬೆಳಗ್ಗೆ ಎಂದಿನಂತೆಯೇ ಬಸ್ ಸಂಚಾರ ನಡೆಯುತ್ತಿದೆ. ಸಾರಿಗೆ ಬಸ್​​ಗಳು ಮಂಡ್ಯದಿಂದ ಬೇರೆಡೆಗೆ ತೆರಳುತ್ತಿವೆ. ವ್ಯಾಪಾರ ವಹಿವಾಟು ಕೂಡ ಎಂದಿನಂತೆಯೇ ಆರಂಭವಾಗುತ್ತಿವೆ. ಮುಂಜಾಗ್ರತಾ ಕ್ರಮವಾಗಿ ಮಂಡ್ಯ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇನ್ನೂ ಬಂದ್ ಬಿಸಿ ಆರಂಭವಾಗಿಲ್ಲ

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬಂದ್​​ಗೆ ಕರೆ ನೀಡಲಾಗಿದೆ. ದಲಿತ,‌ ರೈತ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಮಹಾ ಒಕ್ಕೂಟದಿಂದ ಬಂದ್​​ಗೆ ಕರೆ ನೀಡಲಾಗಿದೆ. ಬಂದ್ ಬೆಂಬಲಿಸುವಂತೆ‌ ವರ್ತಕರು, ಹೋಟೆಲ್ ಮಾಲೀಕರು, ಬೀದಿ ಬದಿವ್ಯಾಪಾರಿಗಳಿಗೆ, ಆಟೋ ಚಾಲಕರಿಗೆ ಮನವಿ ಮಾಡಲಾಗಿತ್ತು. ಬಂದ್ ಜೊತೆಗೆ ಪ್ರತಿಭಟನೆಗೂ ನಿರ್ಧಾರ ಕೈಗೊಳ್ಳಲಾಗಿತ್ತು.

ರಸ್ತೆಯಲ್ಲಿ ಒಣಗಿ ಹಾಕಿದ್ದ ಹುರುಳಿಯಿಂದ ಕಾರಿಗೆ ಬೆಂಕಿ

ರಸ್ತೆಯಲ್ಲಿ ಒಣಗಿ ಹಾಕಿದ್ದ ಹುರುಳಿಯಿಂದ ಅಗ್ನಿ ಅವಘಡ ಸಂಭವಿಸಿ ಕಾರು ಭಸ್ಮವಾದ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕು ಎತ್ತಿಗೆ ಗೇಟ್ ಬಾಲನ ಕಟ್ಟೆ ಬಳಿ ಸಂಭವಿಸಿದೆ. ಇತ್ತೀಚೆಗೆ ರೈತರು ರಸ್ತೆ ತುಂಬಾ ಹುರುಳಿ ಒಣಗಲು ಹಾಕುತ್ತಿದ್ದಾರೆ. ಈ‌ ಬಗ್ಗೆ ಕೆಲ ದಿನಗಳ ಹಿಂದೆ ‘ಟಿವಿ9’ ವರದಿ ಮಾಡಿದ್ದರ ಜತೆಗೆ, ಅಪಾಯದ ಸಂಭಾವ್ಯತೆ ಬಗ್ಗೆ ಗಮನ ಸೆಳೆದಿತ್ತು.

ಇದನ್ನೂ ಓದಿ: ಸುಮಲತಾ ಬಳಸುತ್ತಿದ್ದ ಕಾರು ನಿರಾಕರಿಸಿದರೇ ಕುಮಾರಸ್ವಾಮಿ? ಚಲುವರಾಯಸ್ವಾಮಿ ಹೊಸ ಆರೋಪ

ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರಿನಲ್ಲಿದ್ದವರು ಕೆಳಗೆ ಇಳಿದಿದ್ದರಿಂದ ಸಾವು-ನೋವು ತಪ್ಪಿದೆ. ರಸ್ತೆ ಹುರುಳಿ ಒಣ ಹಾಕುವುದರಿಂದ ಆಗಬಹುದಾದ ಅಪಾಯಗಳ ಬಗ್ಗೆ ದೂರು ನೀಡಿದರೂ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ