ಮೈಸೂರು: ಕಾಡ್ಗಿಚ್ಚಿನಿಂದ 50ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮ

ಬೇಸಿಗೆ ಆರಂಭದ ಬೆನ್ನಲ್ಲೇ ಮೈಸೂರು ಜಿಲ್ಲೆಯ ನಂಜನಗೂಡಿನ ಹಂಡುವಿನಹಳ್ಳಿ ಗ್ರಾಮದ ಸಾಮಾಜಿಕ ಅರಣ್ಯ ವಲಯದಲ್ಲಿ(Social Forest Sector) ಆಕಸ್ಮಿಕ ಬೆಂಕಿ ತಗುಲಿದ್ದು, 50 ಕ್ಕೂ ಹೆಚ್ಚು ಎಕರೆ ಪ್ರದೇಶ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಬೆಂಕಿ ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಮೈಸೂರು: ಕಾಡ್ಗಿಚ್ಚಿನಿಂದ 50ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮ
ಕಾಡ್ಗಿಚ್ಚಿನಿಂದ 50ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮ
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 07, 2024 | 3:53 PM

ಮೈಸೂರು, ಮಾ.07: ಜಿಲ್ಲೆಯ ನಂಜನಗೂಡಿನ ಹಂಡುವಿನಹಳ್ಳಿ ಗ್ರಾಮದ ಸಾಮಾಜಿಕ ಅರಣ್ಯ ವಲಯದಲ್ಲಿ(Social Forest Sector) ಆಕಸ್ಮಿಕ ಬೆಂಕಿ ತಗುಲಿದ್ದು, 50 ಕ್ಕೂ ಹೆಚ್ಚು ಎಕರೆ ಪ್ರದೇಶ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಬೆಂಕಿ ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಇನ್ನು 150 ಎಕರೆ ಪ್ರದೇಶದಲ್ಲಿ ಈ ಕುರುಚಲು ಅರಣ್ಯ ಪ್ರದೇಶ ಇದ್ದು, ಅಕ್ರಮವಾಗಿ ಮಣ್ಣು ಸಾಗಾಟ ಮಾಡುವ ಲ್ಯಾಂಡ್ ಮಾಫಿಯ ಕಿಡಿಗೇಡಿಗಳಿಂದ ಈ ಕೃತ್ಯ ನಡೆದಿದೆ ಎಂದ ಆರೋಪ ಕೇಳಿಬಂದಿದೆ.

ಅತಿ ಹೆಚ್ಚು ಜಿಂಕೆ ಮತ್ತು ನವಿಲುಗಳ ತಾಣ ಎಂದು ಪ್ರಸಿದ್ಧಿ

ನಂಜನಗೂಡು ಪಟ್ಟಣ ಮೈಸೂರು ಸೇರಿದಂತೆ ಕೇರಳ ರಾಜ್ಯಕ್ಕೆ ಈ ಪ್ರದೇಶದ ವ್ಯಾಪ್ತಿಯಲ್ಲಿ ನಿರಂತರವಾಗಿ ಅಕ್ರಮ ಮಣ್ಣು  ಸಾಗಾಟವಾಗುತ್ತಿರುವ ಬಗ್ಗೆ ದೂರು ಕೂಡ ದಾಖಲಿಸಲಾಗಿದೆ. ಜೊತೆಗೆ ಈ ಕುರುಚಲು ಅರಣ್ಯ ಪ್ರದೇಶವು, ಅತಿ ಹೆಚ್ಚು ಜಿಂಕೆ ಮತ್ತು ನವಿಲುಗಳ ತಾಣ ಎಂದು ಪ್ರಸಿದ್ಧಿ ಪಡೆದಿದೆ. ಹೀಗಿರುವಾ ಅರಣ್ಯ ಇಲಾಖೆ ಇತ್ತ ಗಮನಹರಿಸಬೇಕಿತ್ತು. ಆದರೆ, ಬೆಂಕಿ ಬಿದ್ದರೂ ಕೂಡ ಅದನ್ನು ನಂದಿಸುವಲ್ಲಿ ನಂಜನಗೂಡು ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ:ಬೇಸಿಗೆ ಆರಂಭಕ್ಕೂ ಮೊದಲೇ ಕೋಣನೂರು, ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಬೆಂಕಿ ಅನಾಹುತ

ಇನ್ನು ಇದೇ ಫೆ.04 ರಂದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೋಣನೂರು ಮತ್ತು ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಜೊತೆಗೆ ಅರಣ್ಯ ಪ್ರದೇಶದ ಒಂದಷ್ಟು ಭಾಗ ಸುಟ್ಟು ಹೋಗಿತ್ತು, ಬೆಂಕಿಯಿಂದ ನೂರಾರು ಎಕರೆ ಪ್ರದೇಶ ಭಸ್ಮವಾಗಿತ್ತು. ದನ-ಕರುಗಳು ಮತ್ತು ಕಾಡು ಪ್ರಾಣಿಗಳ ಆಹಾರವಾಗಿದ್ದ ಪ್ರದೇಶ ಸುಟ್ಟು ಕರಕಲಾಗಿತ್ತು. ಇದರ ಬೆನ್ನಲ್ಲೇ ಇದೀಗ ನಂಜನಗೂಡಿನ ಹಂಡುವಿನಹಳ್ಳಿ ಗ್ರಾಮದ ಸಾಮಾಜಿಕ ಅರಣ್ಯ ವಲಯದಲ್ಲಿ ಆಕಸ್ಮಿಕ ಬೆಂಕಿ ತಗುಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Thu, 7 March 24

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ