ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್​ ಕೇಸ್​

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ತಂದಿದೆ. ಜಮೀನು ಮಾಲೀಕ ದೇವರಾಜು ಅವರ ಅಣ್ಣನ ಮಗಳು ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಸೇರಿದಂತೆ 12 ಜನರ ವಿರುದ್ಧ ಸಿವಿಲ್​ ಕೇಸ್​ ದಾಖಲಿಸಿದ್ದಾರೆ.

ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್​ ಕೇಸ್​
ಸಿಎಂ ಸಿದ್ದರಾಮಯ್ಯ
Follow us
ದಿಲೀಪ್​, ಚೌಡಹಳ್ಳಿ
| Updated By: ವಿವೇಕ ಬಿರಾದಾರ

Updated on:Nov 27, 2024 | 1:06 PM

ಮೈಸೂರು, ನವೆಂಬರ್​ 27: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಉರುಳಾಗಿ ಪರಿಣಮಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಜಮೀನು ಮಾಲೀಕ ದೇವರಾಜು ವಿರುದ್ಧ ಅಣ್ಣನ ಮಗಳು ಜಮುನಾ ಮೈಸೂರಿನ (Mysore) ಜೆಎಂಎಫ್​ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಜಮುನಾ ಅವರು ದೇವಾರಜು ಅವರ ಅಣ್ಣ ಮೈಲಾರಯ್ಯ ಅವರ ಮಗಳು.

ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರ ಹೆಸರಿನಲ್ಲಿರುವ ಜಮೀನು ದೇವರಾಜು ಅವರದ್ದು ಅಲ್ಲ, ಬದಲಿಗೆ ನಮ್ಮ ತಂದೆ ಮೈಲಾರಯ್ಯ ಅವರಿಗೆ ಸೇರಿದ್ದು ಎಂದು ಜಮುನಾ ದಾವೆ ಹೂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೇರಿದಂತೆ 12 ಜನರ ಮೇಲೆ ಸಿವಿಲ್ ಕೇಸ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಲೋಕಾಯುಕ್ತ ಸರ್ಚ್ ವಾರೆಂಟ್ ಮಾಹಿತಿ ಸೋರಿಕೆಗೆ 8 ಕೋಟಿ ರೂ. ಡೀಲ್, ಗಂಗರಾಜು ಆರೋಪ

ಈ ವಿಚಾರವಾಗಿ ಟಿವಿ9 ಜೊತೆ ಜಮುನಾ ಸಹೋದರ ಮಂಜುನಾಥಸ್ವಾಮಿ ಮಾತನಾಡಿ, “ನಮ್ಮ ಚಿಕ್ಕಪ್ಪ ದೇವರಾಜು ಮೋಸದಿಂದ ಜಮೀನು ಮಾರಾಟ ಮಾಡಿದ್ದಾರೆ. ಜಮೀನು ಮೊದಲು ನನ್ನ ತಂದೆ ಮೈಲಾರಯ್ಯ ಅವರ ಹೆಸರಿನಲ್ಲಿ ಇತ್ತು. ನಮ್ಮ ಹೆಸರಿಗೆ ಮಾಡಿಸಿಕೊಡುತ್ತೇನೆ ಎಂದು ನಮ್ಮ ಚಿಕ್ಕಪ್ಪ ದೇವರಾಜು ನನ್ನ ಹಾಗೂ ತಾಯಿ ಬಳಿ ಸಹಿ ಪಡೆದುಕೊಂಡರು. ನನ್ನ ರೀತಿ ನನ್ನ ಸಹೋದರಿ ಜಮುನಾಗು ಅನ್ಯಾಯವಾಗಿದೆ” ಎಂದು ಅಳಲು ತೋಡಿಕೊಂಡರು.

ನನ್ನ ತಾತ ನಿಂಗ ಅಲಿಯಾಸ್​ ಜವರ ಅವರಿಗೆ ಮಲ್ಲಯ್ಯ, ಮೈಲಾರಯ್ಯ ಹಾಗೂ ದೇವರಾಜು ಮೂರು ಜನ ಗಂಡು ಮಕ್ಕಳು. ಕೆಸರೆ ಸರ್ವೇ ನಂ 464ರ 3.16 ಎಕರೆ ಭೂಮಿ ನನ್ನ ತಂದೆ ಮೈಲಾರಯ್ಯ ಪಾಲಿಗೆ ಬಂದಿತ್ತು. ನಮ್ಮ ಹೆಸರಿಗೆ ಮಾಡಿಸಿಕೊಡುತ್ತೇನೆ ಎಂದು ನಮ್ಮ ಚಿಕ್ಕಪ್ಪ ದೇವರಾಜು ನನ್ನ ಹಾಗೂ ತಾಯಿ ಬಳಿ ಸಹಿ ಪಡೆದುಕೊಂಡು, ಮೋಸದಿಂದ ಮಾರಾಟ ಮಾಡಿದ್ದಾರೆ. ನಮಗೆ ಪರಿಹಾರ ಕೊಡಬೇಕು. ಈ ಕಾರಣದಿಂದ ನ್ಯಾಯಾಲಯದ ಮೊರೆ ಹೋಗಿದ್ದೇವೆ. ಸಹೋದರಿ ಜಮುನಾ ಪ್ರಕರಣ ದಾಖಲಿಸಲು ನನ್ನ ಸಹಮತ ಇದೆ. ಜಮೀನಿನ ಪರಿಹಾರ ನಮಗೆ ಕೊಡಬೇಕಾಗಿತ್ತು ಎಂದರು ತಿಳಿಸಿದರು.

ಪೋಸ್ಟ್ ಹಾಕಿ ಟಾಂಗ್ ನೀಡಿದ ಸ್ನೇಹಮಯಿ‌ಕೃಷ್ಣ

ಜಮುನಾ ಅವರು ದಾವೆ ಹೂಡಿರುವ ಡಿಜಿಟಲ್​ ಪ್ರತಿಯನ್ನು ದೂರುದಾರ ಸ್ನೇಹಮಯಿ‌ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸ್ನೇಹಮಯಿ‌ಕೃಷ್ಣ ಆರೋಪ ಮುಂದುವರೆದಿದೆ. ಸದ್ಯ ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತ ಮತ್ತು ಇಡಿ ನಡೆಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:03 pm, Wed, 27 November 24